ಸರ್ಕಾರದಿಂದ ಅರಿವು (Library) ಕೇಂದ್ರಗಳ ವಿಸ್ತರಣೆ ( ಹೊಸ ಗ್ರಂಥಾಲಯಗಳ ನಿರ್ಮಾಣ್)

ಬೆಂಗಳೂರು.30.ಏಪ್ರಿಲ್.25:- ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಅರಿವು ಕೇಂದ್ರಗಳ (ಗ್ರಂಥಾಲಯ) ವಿಸ್ತರಣೆ ಹಿನ್ನಲೆಯಲ್ಲಿ ಸರ್ಕಾರ ಹಳ್ಳಿಗಳು ಇಂದು ಜ್ಞಾನದ ಶಕ್ತಿ ಕೇಂದ್ರಗಳಾಗುತ್ತಿವೆ. ಬೌದ್ಧಿಕ ಸಾಮರ್ಥ್ಯವನ್ನು ವೃದ್ಧಿಸುವ, ಅರಿವಿನ ಬೆಳಕನ್ನು ಹೆಚ್ಚಿಸುವ ಪುಸ್ತಕಗಳು ಮನೆಬಾಗಿಲಿಗೆ ತಲುಪುತ್ತಿವೆ.

ಗ್ರಾಮೀಣ ಮಟ್ಟದಲ್ಲಿ ಜ್ಞಾನಾರ್ಜನೆಗೆ ಸವಲತ್ತುಗಳ ಕೊರತೆ ನೀಗುತ್ತಿದೆ. ಓದಿನ ಅವಕಾಶಗಳಿಂದ ವಂಚಿತರಾಗುತ್ತಿದ್ದ ಮಕ್ಕಳಿಗೆ ಮಾಹಿತಿ ಕಣಜವೇ ದೊರಕುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇದು ಸಾಧ್ಯವಾಗುತ್ತಿರುವುದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅರಿವು ಕೇಂದ್ರಗಳಿಂದ. ಗ್ರಾಮೀಣ ಭಾಗದಲ್ಲಿ 6,5998 ಹೊಸ ಗ್ರಂಥಾಲಯಗಳ ಸ್ಥಾಪನೆಯೊಂದಿಗೆ ಅರಿವು ಕೇಂದ್ರಗಳು ಮತ್ತಷ್ಟು ವಿಸ್ತಾರಗೊಳ್ಳುತ್ತಿವೆ.

ಅರಿವು ಕೇಂದ್ರಗಳಿಂದ ಉಂಟಾಗುತ್ತಿರುವ ಪ್ರಯೋಜನ, ಯಶೋಗಾಥೆಗಳಿಂದ ಸ್ಫೂರ್ತಿ ಪಡೆದ ಜನರು ತಮ್ಮ ಹಳ್ಳಿಗಳಲ್ಲಿಯೂ ಇಂತಹ ಜ್ಞಾನ ಭಂಡಾರದ ಸ್ಥಾಪನೆಗಾಗಿ ಬೇಡಿಕೆ ಇರಿಸುತ್ತಿದ್ದಾರೆ. ಜನರ ಮನವಿಗಳಿಗೆ ನಮ್ಮ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಯುಪಿಎಸ್ ವ್ಯವಸ್ಥೆಯ ಖರೀದಿಗಾಗಿ ಅನುದಾನ ಮಂಜೂರು ಮಾಡಲಾಗಿದೆ.

ಪ್ರಸ್ತುತ ಅಸ್ತಿತ್ವದಲ್ಲಿರುವ ಗ್ರಂಥಾಲಯಗಳು ದಿನಪತ್ರಿಕೆ ಓದಲು ಸೀಮಿತವಾಗಿಲ್ಲ. ಅವು ಡಿಜಿಟಲ್ ಸ್ವರೂಪ ಪಡೆದಿವೆ. ಇಲ್ಲಿ ಅನೇಕ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಾರೆ. ಈ ಗ್ರಂಥಾಲಯಗಳನ್ನು ಬಳಸಿಕೊಂಡು ಜನರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ.

ಜ್ಞಾನ ದೀವಿಗೆ ಬೆಳಗಿಸುವ ಈ ಕೇಂದ್ರಗಳು ಭವಿಷ್ಯದ ಪ್ರಬುದ್ಧ ಪ್ರಜೆಗಳನ್ನು ರೂಪಿಸುವ ವೇದಿಕೆಯಾಗಿ ಹೊರಹೊಮ್ಮುತ್ತಿವೆ. ಮಕ್ಕಳ ಅಧ್ಯಯನಕ್ಕೆ ಪೂರಕವಾದ ಪುಸ್ತಕಗಳು, ತಾಂತ್ರಿಕ ತಿಳಿವಳಿಕೆಗೆ ಅಗತ್ಯವಾದ ಕಂಪ್ಯೂಟರ್ ಸೌಲಭ್ಯಗಳು ಗ್ರಾಮೀಣ ಮಟ್ಟದಲ್ಲಿ ಕ್ರಾಂತಿ ಮೂಡಿಸುತ್ತಿವೆ. ಹಳ್ಳಿ ಹಳ್ಳಿಗೂ ಈ ಯೋಜನೆಯನ್ನು ತಲುಪಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ ಗುರಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.

ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ  ಕಾಲೇಜು ಶಿಕ್ಷಣ ಇಲಾಖೆಯು…

3 hours ago

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…

4 hours ago

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ

ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…

5 hours ago

Free Couching ಅಲ್ಪಸಂಖ್ಯಾತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…

5 hours ago

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ

ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…

5 hours ago

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

5 hours ago