ಬೆಂಗಳೂರು.29.ಮೇ.25:- ಸರ್ಕಾರದಿಂದ 2025-26ನೇ ಸಾಲಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ‘UPSC’, ‘ಬ್ಯಾಂಕಿಂಗ್’ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಈ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾ ಪೂರ್ವ ತರಬೇತಿ ಪಡೆದಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸಲು ಮತ್ತು ತರಬೇತಿ ಪಡೆಯಲು ಅರ್ಹರಿರುವುದಿಲ್ಲ,
ಕೇಂದ್ರ/ರಾಜ್ಯ ಸರ್ಕಾರದ/ಅನುದಾನಿತ ಸಂಸ್ಥೆಗಳಸಾರ್ವಜನಿಕ ಸ್ವಾಮತೆಗೆ ಒಳಪಟ್ಟ ಸಂಸ್ಥೆಗಳಲ್ಲಿನ ನೌಕರರು ಸದರಿ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಮತ್ತು ತರಬೇತಿ ಪಡೆಯಲು ಅರ್ಹರಿರುವುದಿಲ್ಲ.
ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಭ್ಯರ್ಥಿಗಳು ಒಂದೇ ಅರ್ಜಿಯನ್ನು ಸಲ್ಲಿಸುವುದು. ಒಬ್ಬ ಅಭ್ಯರ್ಥಿಗೆ ಒಂದು ತರಬೇತಿಯನ್ನು ಮಾತ್ರ ಪಡೆಯಲು” ಅವಕಾಶವಿರುತ್ತದೆ. ಅನುದಾನದ ಲಭ್ಯತೆಗನುಗುಣವಾಗಿ ಭೌತಿಕ ಗುರಿ ಹಾಗೂ ಮಾಸಿಕ ಶಿಷ್ಯವೇತನ ನಿಗದಿಪಡಿಸಲಾಗುವುದು.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…