05/08/2025 7:00 AM

Translate Language

Home » ಲೈವ್ ನ್ಯೂಸ್ » ಸರ್ಕಾರದ ಎರಡು ವರ್ಷ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಚಾಲನೆ;

ಸರ್ಕಾರದ ಎರಡು ವರ್ಷ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಚಾಲನೆ;

Facebook
X
WhatsApp
Telegram


ಪಂಚ ಗ್ಯಾರಂಟಿ ಯೋಜನೆಗಳಿಂದ ಜನರು ಆರ್ಥಿಕವಾಗಿ ಸಬಲರಾಗಿದ್ದಾರೆ-ಅಮೃತರಾವ ಚಿಮಕೋಡೆ

ಬೀದರ.11.ಜುಲೈ.25:- ಪಂಚ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆರ್ಥಿಕವಾಗಿ ಸಬಲರಾಗಲು ಅನುಕೂಲವಾಗಿದೆ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ ಚಿಮಕೊಡೆ ಹೇಳಿದರು.


ಅವರು ಗುರುವಾರ ಬೀದರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ.10 ರಿಂದ 12 ರವರೆಗೆ ಮೂರು ದಿನಗಳ ಕಾಲ ಏರ್ಪಡಿಸಿರುವ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರೊಂದಿಗೆ ಜಂಟಿಯಾಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದ್ದು, ರಾಜ್ಯ ಸರ್ಕಾರದ ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷಿö್ಮÃ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಮತ್ತು ಶಕ್ತಿ ಯೋಜನೆ ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತಿದ್ದು, ಪಂಚ ಗ್ಯಾರಂಟಿ ಯೋಜನೆಗಳಿಂದ ವಿಶೇಷವಾಗಿ ಕಡುಬಡವರು, ಕೂಲಿ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಉಚಿತ ಬಸ್ ಪ್ರಯಾಣದಿಂದ ಮಹಿಳೆಯರು ಧಾರ್ಮಿಕ ಸ್ಥಳಗಳಿಗೆ ಮತ್ತು ಪ್ರವಾಸಿತಾಣಗಳಿಗೆ ಭೇಟಿ ನೀಡುತ್ತಿದ್ದಾರೆ. ಮಹಿಳೆಯರಿಗೆ ಕುಟುಂಬ ನಿರ್ವಹಣೆ ತುಂಬಾ ಅನುಕೂಲವಾಗಿದೆ ಎಂದರು.


ಶಕ್ತಿ ಯೋಜನೆಯಡಿ: ದಿನಾಂಕ: 11-06-2023 ರಿಂದ 09-07-2025 ರವರೆಗೆ 8 ಕೋಟಿ 64 ಲಕ್ಷ ಮಹಿಳೆಯರು ಜಿಲ್ಲೆಯಲ್ಲಿ ಇದರ ಲಾಭ ಪಡೆದಿದ್ದಾರೆ. ಇದರಿಂದ 248 ಕೋಟಿ 79 ಲಕ್ಷ ಮೊತ್ತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಮೊತ್ತ ಸಂದಾಯವಾಗಿದೆ.


ಅನ್ನಭಾಗ್ಯಯೋಜನೆಯಡಿ: ಜನೇವರಿ-2025 ರವರೆಗೆ ಪ್ರತಿ ಫಲಾನುಭವಿಗಳಿಗೆ 5 ಕೆ.ಜಿ. ಅಕ್ಕಿ ವಿತರಿಸಲಾಗಿದ್ದು, 5 ಕೆ.ಜಿ. ಮೊತ್ತವನ್ನು ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. ಫೆಬ್ರುವರಿ-2025 ರಿಂದ ಪ್ರತಿ ಫಲಾನುಭವಿಗಳಿಗೆ 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತಿದೆ.
ಯುವನಿಧಿ ಯೋಜನೆಯಡಿ: ಇಲ್ಲಿಯವರೆಗೆ ಡಿಪ್ಲೋಮಾ ಹಾಗೂ ಪದವೀದರ ನಿರುದ್ಯೋಗ ಯುವಕರಿಗೆ 20 ಕೋಟಿ 97 ಲಕ್ಷ ಹಣ ಪಾವತಿಸಲಾಗಿದೆ.


ಗೃಹಜ್ಯೋತಿ ಯೋಜನೆಯಡಿ: ಪ್ರತಿ ಮನೆಗೆ 200 ಯುನಿಟವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 35 ಲಕ್ಷ 4 ಸಾವಿರದ 79 ಫಲಾನುಭವಿಗಳು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದು ಒಟ್ಟು 341 ಕೋಟಿ 46 ಲಕ್ಷ ಹಣ ಜೇಸ್ಕಾಂಗೆ ಸಂದಾಯವಾಗಿರುತ್ತದೆ.
ಗೃಹಲಕ್ಷಿö್ಮÃ ಯೋಜನೆಯಡಿ: ಜಿಲ್ಲೆಯಲ್ಲಿ 3 ಲಕ್ಷ 60 ಸಾವಿರ ಮಹಿಳೆಯರು ಇದರ ಲಾಭ ಪಡೆಯುತ್ತಿದ್ದು ಮೇ.2025 ಅಂತ್ಯದವರೆಗೆ 1268 ಕೋಟಿ ರೂ. ಹಣ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದರು.


ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಮಾತನಾಡಿ, ರಾಜ್ಯ ಸರ್ಕಾರವು ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನವನ್ನು ಸಾರ್ವಜನಿಕರು ವೀಕ್ಷಿಸಿ ಅವುಗಳು ಮಾಹಿತಿ ಪಡೆಯಬಹುದು ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ನಿರ್ಮಿಸಿದ ಹೆಣ್ಣು ಮಕ್ಕಳ ವಿಶ್ರಾಂತಿ ಕೋಣೆ ಹಾಗೂ ಮಗುವಿಗೆ ಹಾಲುಣಿಸುವ ಕೋಣೆ ಉದ್ಘಾಟಿಸಿದರು.


ಈ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾAತ ಫುಲೇಕರ, ವಿಭಾಗೀಯ ಸಂಚಾರಿ ಅಧಿಕಾರಿ ಇಂದ್ರಸೇನ ಎಂ.ಬಿರಾದಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಶ್ರೀಧರ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರವೀಣ ಬರಗಲ, ಜೇಸ್ಕಾಂ ಕಾರ್ಯಪಾಲಕ ಅಭಿಯಂತರರಾದ ರಮೇಶ ಪಾಟೀಲ, ಉದ್ಯೋಗ ವಿನಿಮಿಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುನಾಥ ಸುಳ್ಳೊಳ್ಳಿ, ವಿಜಯಕೃಷ್ಣ ಸೋಲಪೂರ, ನರೇಶಕುಮಾರ, ಆಶೀಷ, ತನ್ವೀರ ಇಕ್ಬಾಲ್, ನಾಗಶೆಟ್ಟಿ ಸಾರಿಗೆ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD