ಬೀದರ.21.ಮೇ.25:-ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಜನರಿಗೆ ತಲುಪಿಸಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ ಚಿಮಕೋಡೆ ಅವರು ತಿಳಿಸಿದರು.
ಅವರು ಸೋಮವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆ ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು ಕುಟುಂಬದ ಮಹಿಳಾ ಮುಖ್ಯಸ್ಥೆಯ ಹೆಸರಿನಲ್ಲಿರುವ ಪಡಿತರ ಚೀಟಿಗಳ ಸಂಖ್ಯೆ 381970 ಇವರಲ್ಲಿ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಏಪ್ರಿಲ್ ಅಂತಕ್ಕೆ 352294 ಫಲನುಭವಿಗಳು ನೊಂದಾಣಿಯಾಗಿರುತ್ತಾರೆ. ಶೇಕಡಾವಾರು ನೊಂದಣಿ 92.23 ಇರುತ್ತದೆ. ಉಳಿದ 29676 ಫಲಾನುಭವಿಗಳ ನೊಂದಣಿ ಬಾಕಿ ಇರುತ್ತದೆ, ಐಟಿ ಮತ್ತು ಜಿಎಸ್ಟಿ ಒಟ್ಟು 12,000 ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗಳ ಸಂಖ್ಯೆ 7 ರಿಂದ 8 ಸಾವಿರ ಇವೆ. ಗೃಹಲಕ್ಷೀ ಯೋಜನೆಗೆ 1137.67 ಕೋಟಿ ಹಣವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ 13,13,305 ಫಲಾನುಭವಿಗಳು ( 3,57,286 ಪಡಿತರ ಚೀಟಿಗಳು) 333.28 ಕೋಟಿ ರೂಪಾಯಿ ಅನುದಾನ ಬಳಕೆಯಾಗಿದೆ. ಜುಲೈ 2023 ರಿಂದ ಜನವರಿ 2025 ರವರಿಗೆ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿ ಅಕ್ಕಿಯ ಮೊತ್ತವನ್ನು ಡಿಬಿಟಿ ಮೂಲಕ ಹಣ ವರ್ಗಾಯಿಸಲಾಗಿತ್ತು. ಜನವರಿ 2025ರ ಮಾಹೆಯ ಡಿಬಿಟಿ ಮೂಲಕ ವರ್ಗಾವಣೆ ಬಾಕಿ ಇರುತ್ತದೆ ಹಾಗೂ ಫೆಬ್ರವರಿ 2025ರಿಂದ 10ಕೆಜಿ ಅಕ್ಕಿ ನೀಡಲಾಗುತ್ತಿದೆ ಮತ್ತು ಪಡಿತರ ಅಕ್ಕಿಯು ಕಾಳಸಂತೆಯಲ್ಲಿ ಮಾರಾಟ ಆಗದಂತೆ ನೋಡಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯುವನಿಧಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 10489 ನೊಂದಣಿಯಾಗಿದ್ದು ಅದರಲ್ಲಿ 7961 ಪದವಿ ಅಭ್ಯರ್ಥಿಗಳು ಮತ್ತು 148 ಡಿಪ್ಲೋಮಾ ಅಭ್ಯರ್ಥಿಗಳು ಫಲಾನುಭವಿಗಳಿಗೆ 15.98 ಕೋಟಿ ರೂಪಾಯಿ ಅನುದಾನ ಬಳಕೆಯಾಗಿದೆ.
ಜಿಲ್ಲೆಯಲ್ಲಿ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಒಟ್ಟು 3,49,588 ಫಲಾನುಭವಿಗಳಿದ್ದು 327.69 ಕೋಟಿ ಹಣವನ್ನು ಬಳಕೆಯಾಗಿದೆ. ಶಕ್ತಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 11-06-2023 ರಿಂದ 06-05-2025 ರವರಿಗೆ ಮಹಿಳಾ ಮತ್ತು ಬಾಲಕಿಯರು ಒಟ್ಟು ಸೇರಿ 7.82 ಕೋಟಿ ಫಲಾನುಭವಿಗಳು ಸೌಲಭ್ಯ ಪಡೆದಿದ್ದಾರೆ ಹಾಗೂ ವಿಭಾಗದ ವಾಹನದಲ್ಲಿ ಪ್ರತಿ ದಿನ ಸರಾಸರಿ 1.12 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ ಇದಕ್ಕೆ 222.06 ಕೋಟಿ ಸಂದಾಯವಾಗಿದೆ ಹಾಗೂ ಜಿಲ್ಲೆಯಲ್ಲಿ ಒಟ್ಟು 8,01,86,364 ಫಲಾನುಭವಿಗಳ ಸಂಖ್ಯೆ ಮತ್ತು 2,036.62 ಕೋಟಿ ಹಣವನ್ನು ಬಳಕೆಯಾಗದೆ ಎಂದು ತಿಳಿಸಿದರು.
ಪ್ರಾಮಾಣಿಕವಾಗಿ ಜನರಿಗೆ ಪಂಚ ಗ್ಯಾರಂಟಿಗಳು ತಲುಪಿಸುವ ಕೆಲಸ ಹಾಗೂ ಇವುಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯ ಸಂಬAಧಪಟ್ಟ ಅಧಿಕಾರಿಗಳು ಮಾಡಬೇಕು ಎಂದು ಅಮೃತರಾವ ಚಿಮಕೋಡೆ ತಿಳಿಸಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಕಿಶೋರಕುಮಾರ ದುಬೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರ ಎಮ್.ಎಚ್, ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ರಮೇಶ್ ಪಾಟೀಲ್, ಕೆ.ಕೆ.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾoತ ಪುಲೇಕರ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ವಿ. ಪ್ರಭಾಕರ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…