ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಿ -ಅಮೃತರಾವ ಚಿಮಕೋಡೆ

ಬೀದರ.01.ಆಗಸ್ಟ್.25:- ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಜನರಿಗೆ ತಲುಪಿಸಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ ಚಮಕೋಡೆ ಅವರು ತಿಳಿಸಿದರು.

ಅವರು ಗುರುವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಒಟ್ಟು ಕುಟುಂಬದ ಮಹಿಳಾ ಮುಖ್ಯಸ್ಥೆಯ ಹೆಸರಿನಲ್ಲಿರುವ ಪಡಿತರ ಚೀಟಿಗಳ ಸಂಖ್ಯೆ: 381970 ಇವರಲ್ಲಿ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಜುಲೈ.30ಕ್ಕೆ 354701 ಫಲನುಭವಿಗಳು ನೊಂದಾಣಿಯಾಗಿರುತ್ತಾರೆ ಮತ್ತು ಮಾಹೆಕ್ಕೆ 2000 ರೂ. ಅಂತೆ 1271.80 ಕೋಟಿ ಹಣವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗುತ್ತಿದೆ.

ಅನ್ನಭಾಗ್ಯ ಯೋಜನೆಯಡಿಯಲ್ಲಿ 15,03,363 ಫಲಾನುಭವಿಗಳಿದ್ದು, 333.28 ಕೋಟಿ ರೂಪಾಯಿ ಅನುದಾನ ಬಳಕೆಯಾಗಿದೆ ಎಂದರು. ಜುಲೈ 2023 ರಿಂದ ಜನವರಿ 2025 ರವರಿಗೆ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿ ಅಕ್ಕಿ ಯ ಮೊತ್ತವನ್ನು ಡಿಬಿಟಿ ಮೂಲಕ ಹಣ ವರ್ಗಾಯಿಸಲಾಗಿತ್ತು ಆದರೆ ಫೆಬ್ರವರಿ 2025 ರಿಂದ 10ಕೆಜಿ ಅಕ್ಕಿ ನೀಡಲಾಗುತ್ತಿದೆ ಎಂದರು. ಪಡಿತರ ಅಕ್ಕಿಯು ಕಾಳಸಂತೆಯಲ್ಲಿ ಮಾರಾಟ ಆಗದಂತೆ ನೋಡಿಕೊಳ್ಳಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯುವನಿಧಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 11181 ನೊಂದಣಿಯಾಗಿದ್ದು ಅದರಲ್ಲಿ 7853 ಪದವಿ ಅಭ್ಯರ್ಥಿಗಳು ಮತ್ತು 172 ಡಿಪ್ಲೋಮಾ ಅಭ್ಯರ್ಥಿಗಳು ಫಲಾನುಭವಿಗಳಿಗೆ 20.97 ಕೋಟಿ ರೂಪಾಯಿ ಅನುದಾನ ಬಳಕೆಯಾಗಿದೆ. ಯುವನಿಧಿ ಯೋಜನೆ ಬಗ್ಗೆ ಅಧಿಕಾರಿಗಳು ಹೆಚ್ಚಿನ ರೀತಿಯಲ್ಲಿ ಪ್ರಚಾರ ಮತ್ತು ತಾಲ್ಲೂಕು ಮಟ್ಟದಲ್ಲೂ ಕೂಡ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಒಟ್ಟು 3,55,457 ಫಲಾನುಭವಿಗಳಿದ್ದು 357.02 ಕೋಟಿ ಹಣವನ್ನು ಬಳಕೆಯಾಗಿದೆ. ಶಕ್ತಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 11-06-2023 ರಿಂದ 18-07-2025 ರವರಿಗೆ ಮಹಿಳಾ ಮತ್ತು ಬಾಲಕಿಯರು ಒಟ್ಟು ಸೇರಿ 8.75ಕೋಟಿ ಫಲಾನುಭವಿಗಳು ಸೌಲಭ್ಯ ಪಡೆದಿದ್ದಾರೆ ಹಾಗೂ ವಿಭಾಗದ ವಾಹನದಲ್ಲಿ ಪ್ರತಿ ದಿನ ಸರಾಸರಿ 1.14 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ ಇದಕ್ಕೆ 252.35 ಕೋಟಿ ಸಂದಾಯವಾಗಿದೆ ಹಾಗೂ ಕಳೆದ ಸಭೆಯ ಬೇಡಿಕೆಯಂತೆ ಬಸ್ ಸಮಸ್ಯೆ ಇರುವ ಕಡೆಗೆ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ ಎಂದರು. ಕೆಲವು ಕಡೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದ್ದು, ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ಯಾರಂಟಿ ಯೋಜನೆಗಳಿಗೆ ಸಂಬAಧಪಟ್ಟ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ದೂರ ಸಲ್ಲಿಸಿ, ಒಂದು ವೇಳೆ ಅವರು ಸಮಸ್ಯೆಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಪ್ರಾಮಾಣಿಕವಾಗಿ ಜನರಿಗೆ ಪಂಚ ಗ್ಯಾರಂಟಿಗಳು ತಲುಪಿಸುವ ಕೆಲಸ ಹಾಗೂ ಇವುಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯ ಸಂಬoಧಪಟ್ಟ ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದರು.

ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಕಿಶೋರಕುಮಾರ ದುಬೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರ ಎಮ್.ಎಚ್, ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ರಮೇಶ್ ಪಾಟೀಲ್, ಕೆ.ಕೆ.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾoತ ಪುಲೇಕರ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ವಿ. ಪ್ರಭಾಕರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕರಾದ ಪ್ರವೀಣ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

prajaprabhat

Recent Posts

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

49 minutes ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

55 minutes ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

1 hour ago

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

7 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

13 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

13 hours ago