ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ
ಯೋಜನೆಗಳನ್ನು ಜನರಿಗೆ ತಲುಪಿಸಿ- ಅಮೃತರಾವ ಚಿಮಕೋಡೆ
ಬೀದರ.05.ಸೆಪ್ಟೆಂಬರ್.25:-ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಜನರಿಗೆ ತಲುಪಿಸಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ ಚಿಮಕೋಡೆ ಅವರು ತಿಳಿಸಿದರು.
ಅವರು ಗುರುವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು ಕುಟುಂಬದ ಮಹಿಳಾ ಮುಖ್ಯಸ್ಥೆಯ ಹೆಸರಿನಲ್ಲಿರುವ ಪಡಿತರ ಚೀಟಿಗಳ ಸಂಖ್ಯೆ-381970 ಇವರಲ್ಲಿ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಆಗಸ್ಟ್ ಅಂತ್ಯಕ್ಕೆ 355246 ಫಲನುಭವಿಗಳು ನೊಂದಾಣಿಯಾಗಿರುತ್ತಾರೆ ಮತ್ತು ಮಾಹೆಕ್ಕೆ 2000 ರೂ ಅಂತೆ 1340.63 ಕೋಟಿ ಹಣವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗುತ್ತಿದೆ ಹಾಗೂ ಐಟಿ ಜಿ.ಸ್.ಟಿ ಸಮಸ್ಯೆ ನಿವಾರಣೆ ಆದವರು ಮತ್ತೆ ಅರ್ಜಿ ಸಲ್ಲಿಸಲು ತಿಳಿಸಬೇಕು ಎಂದರು.
ಅನ್ನಭಾಗ್ಯ ಯೋಜನೆಯಡಿಯಲ್ಲಿ 13,13,305 ಫಲಾನುಭವಿಗಳಿದ್ದು, 333.28 ಕೋಟಿ ರೂಪಾಯಿ ಅನುದಾನ ಬಳಕೆಯಾಗಿದೆ.
ಜುಲೈ 2023 ರಿಂದ ಜನವರಿ 2025 ರವರಿಗೆ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿ ಅಕ್ಕಿ ಯ ಮೊತ್ತವನ್ನು ಡಿಬಿಟಿ ಮೂಲಕ ಹಣ ವರ್ಗಾಯಿಸಲಾಗಿತ್ತು ಆದರೆ ಫೆಬ್ರವರಿ 2025 ರಿಂದ 10ಕೆಜಿ ಅಕ್ಕಿ ನೀಡಲಾಗುತ್ತಿದ್ದು, ಜುಲೈಯಿಂದ ಅಕ್ಕಿ ಜೊತೆಗೆ ಜೋಳ ಸೇರಿಸಿ ಒಟ್ಟು 10 ಕೆಜಿ ಆಹಾರಧಾನ್ಯ ನೀಡಲಾಗುತ್ತದೆ.
ಪಡಿತರ ಅಕ್ಕಿಯು ಕಾಳಸಂತೆಯಲ್ಲಿ ಮಾರಾಟ ಆಗದಂತೆ ನೋಡಿಕೊಳ್ಳಬೇಕು ಮತ್ತು ಕೆಲವು ಹಳ್ಳಿ ಮತ್ತು ತಾಂಡಗಳಲ್ಲಿ ನ್ಯಾಯ ಬೆಲೆ ಅಂಗಡಿ ಇಲ್ಲ ಬೇರೆ ಗ್ರಾಮಕ್ಕೆ ಹೋಗಿ ತರಬೇಕಾಗಿದೆ, ಜನರಿಗೆ ಇಂತಹ ತೊಂದರೆಯಾಗದAತೆ ರೇಷನ್ ಕೇಂದ್ರ ಸ್ಥಾಪಿಸಿ, ರೇಷನ್ ನೀಡಬೇಕು ಹಾಗೂ ತಂಬ್ ತೆಗೆದುಕೊಂಡ ಕೂಡಲೇ ರೇಷನ್ ನೀಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯುವನಿಧಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 11825 ನೊಂದಣಿಯಾಗಿದ್ದು ಅದರಲ್ಲಿ 7853 ಪದವಿ ಅಭ್ಯರ್ಥಿಗಳು ಮತ್ತು 172 ಡಿಪ್ಲೋಮಾ ಅಭ್ಯರ್ಥಿಗಳು ಫಲಾನುಭವಿಗಳಿಗೆ 23.29 ಕೋಟಿ ರೂಪಾಯಿ ಅನುದಾನ ಬಳಕೆಯಾಗಿದೆ. ಯುವನಿಧಿ ಯೋಜನೆ ಬಗ್ಗೆ ಅಧಿಕಾರಿಗಳು ಹೆಚ್ಚಿನ ರೀತಿಯಲ್ಲಿ ಪ್ರಚಾರ ಮತ್ತು ತಾಲ್ಲೂಕು ಮಟ್ಟದಲ್ಲೂ ಕೂಡ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಒಟ್ಟು 3,68,667 ಫಲಾನುಭವಿಗಳಿದ್ದು 376.93 ಕೋಟಿ ಹಣವನ್ನು ಬಳಕೆಯಾಗಿದೆ. ಶಕ್ತಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 11-06-2023 ರಿಂದ 27-08-2025 ರವರಿಗೆ ಮಹಿಳಾ ಮತ್ತು ಬಾಲಕಿಯರು ಒಟ್ಟು ಸೇರಿ 9.25ಕೋಟಿ ಫಲಾನುಭವಿಗಳು ಸೌಲಭ್ಯ ಪಡೆದಿದ್ದಾರೆ ಹಾಗೂ ವಿಭಾಗದ ವಾಹನದಲ್ಲಿ ಪ್ರತಿ ದಿನ ಸರಾಸರಿ 1.14 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ ಇದಕ್ಕೆ 268.08 ಕೋಟಿ ಸಂದಾಯವಾಗಿದೆ ಮತ್ತು ಪ್ರತಿ ದಿನ ಪ್ರಯಾಣಿಕರಿಂದ ಸರಾಸರಿ 33.18 ಲಕ್ಷ ಸಾರಿಗೆ ಆದಾಯವಾಗುತ್ತಿದೆ ಹಾಗೂ ಕಳೆದ ಸಭೆಯ ಬೇಡಿಕೆಯಂತೆ ಬಸ್ ಸಮಸ್ಯೆ ಇರುವ ಕಡೆಗೆ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ ಎಂದರು.
ಕೆಲವು ಕಡೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ನಲ್ಲಿಸುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದ್ದು, ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದoತೆ ನೋಡಿಕೊಳ್ಳಲು ಸಂಬoಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ಯಾರಂಟಿ ಯೋಜನೆಗಳಿಗೆ ಸಂಬoಧಪಟ್ಟ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ದೂರ ಸಲ್ಲಿಸಿ, ಒಂದು ವೇಳೆ ಅವರು ಸಮಸ್ಯೆಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಪ್ರಾಮಾಣಿಕವಾಗಿ ಜನರಿಗೆ ಪಂಚ ಗ್ಯಾರಂಟಿಗಳು ತಲುಪಿಸುವ ಕೆಲಸ ಹಾಗೂ ಇವುಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯ ಸಂಬoಧಪಟ್ಟ ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಕಿಶೋರಕುಮಾರ ದುಬೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರ್ ಎಮ್.ಎಚ್, ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ರಮೇಶ್ ಪಾಟೀಲ್, ಕೆ.ಕೆ.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಆರ್. ಬಿ. ಜಾಧವ , ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ವಿ. ಪ್ರಭಾಕರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

