ಪ್ರಮುಖ ಮುಖ್ಯಾಂಶಗಳು: ರಾಜ್ಯದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ SC/ST ಅಧ್ಯಾಪಕರನ್ನು ಒಂದೇ ವೇದಿಕೆಯಡಿ ಸಂಘಟಿಸುವುದು,
ವೆಬ್‌ಸೈಟ್‌ನಲ್ಲಿ ಸಂಘದ ದೃಷ್ಟಿಕೋನ, ಧ್ಯೇಯ, ಉದ್ದೇಶಗಳು, ಸಂಘದ ಚಟುವಟಿಕೆಗಳು, ಕಾರ್ಯಕ್ರಮಗಳು, ಪ್ರಕಟಣೆಗಳು ಹಾಗೂ ವಿವಿಧ ಮಾಹಿತಿಗಳನ್ನು ಪಡೆಯಬಹುದಾಗಿದೆ.
ಶೈಕ್ಷಣಿಕ ಹಾಗೂ ವೃತ್ತಿಪರ ಅಭಿವೃದ್ಧಿಗೆ ಸಂಬಂಧಿಸಿದ ಮಾಹಿತಿಯನ್ನು ಸುಲಭವಾಗಿ ಒದಗಿಸುವುದು ಮತ್ತು ಸಂಘದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶ
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ಯಾರಿಶಿಸ್ಟ್ ಜಾತಿ ಹಾಗೂ ಪರಿಶಿಷ್ಟ ಪಂಗಡ (SC/ST) ಅಧ್ಯಾಪಕರ ಸಂಘ (ರಿ.) ವತಿಯಿಂದ ಅಭಿವೃದ್ಧಿಪಡಿಸಲಾದ ಅಧಿಕೃತ ವೆಬ್‌ಸೈಟ್‌ನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಉದ್ಘಾಟಿಸಿದರು.
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ SC/ST ಅಧ್ಯಾಪಕರನ್ನು ಒಂದೇ ವೇದಿಕೆಯಡಿ ಸಂಘಟಿಸುವುದು, ಅವರ ಹಕ್ಕುಗಳು, ಸಾಂವಿಧಾನಿಕ ಸೌಲಭ್ಯಗಳು, ಶೈಕ್ಷಣಿಕ ಹಾಗೂ ವೃತ್ತಿಪರ ಅಭಿವೃದ್ಧಿಗೆ ಸಂಬಂಧಿಸಿದ ಮಾಹಿತಿಯನ್ನು ಸುಲಭವಾಗಿ ಒದಗಿಸುವುದು ಮತ್ತು ಸಂಘದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಈ ವೆಬ್‌ಸೈಟ್‌ನ್ನು ರೂಪಿಸಲಾಗಿದೆ.
ವೆಬ್‌ಸೈಟ್‌ನಲ್ಲಿ ಸಂಘದ ದೃಷ್ಟಿಕೋನ, ಧ್ಯೇಯ, ಉದ್ದೇಶಗಳು, ಸಂಘದ ಚಟುವಟಿಕೆಗಳು, ಕಾರ್ಯಕ್ರಮಗಳು, ಪ್ರಕಟಣೆಗಳು ಹಾಗೂ ಪ್ರಮುಖ ಮಾಹಿತಿಗಳನ್ನು ಪಡೆಯಬಹುದಾಗಿದೆ.
ಇದರ ವಿಶೇಷತೆಯಾಗಿ, ಅರ್ಹ SC/ST ಅಧ್ಯಾಪಕರು ಸಂಘದ ಸದಸ್ಯತ್ವವನ್ನು ಸುಲಭವಾಗಿ ಪಡೆಯಲು Online Membership ಸೌಲಭ್ಯವನ್ನು ಕಲ್ಪಿಸಲಾಗಿದೆ. ರಾಜ್ಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧ್ಯಾಪಕರು ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಸದಸ್ಯತ್ವಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ವೆಬ್‌ಸೈಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ಯಾರಿಶಿಸ್ಟ್ ಜಾತಿ ಪ್ಯಾರಿಶಿಸ್ಟ್ ಪಂಗಡ (SC/ST) ಅಧ್ಯಾಪಕರ ಸಂಘ (ರಿ.) ಅಧ್ಯಕ್ಷ ಡಾ. ರಾಜು ಗುಂಡಾಪುರ, ಸಂಘಟನಾ ಕಾರ್ಯದರ್ಶಿ ಡಾ. ರಮೇಶ್, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ (KSHEC) ವಿಶೇಷಾಧಿಕಾರಿ ಡಾ. ಎಂ. ಸಿ. ಮಹೇಶ್ ಕುಮಾರ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಅಧ್ಯಾಪಕರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಈ ನೂತನ ವೆಬ್‌ಸೈಟ್‌ವು ರಾಜ್ಯದ ಪರಿಶಿಷ್ಟ ಜಾತಿ ಪರಿಸಿಸ್ಟ್ ಪಂಗಡ (SC/ST) ಅಧ್ಯಾಪಕರ ನಡುವೆ ಸಂಘಟನೆ, ಮಾಹಿತಿ ಹಂಚಿಕೆ, ಸದಸ್ಯತ್ವ ವಿಸ್ತರಣೆ ಹಾಗೂ ಪರಸ್ಪರ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಪ್ರಮುಖ ಡಿಜಿಟಲ್ ವೇದಿಕೆಯಾಗಲಿದೆ ಎಂಬ ಆಶಯವನ್ನು ಕಾರ್ಯಕ್ರಮದಲ್ಲಿ ವ್ಯಕ್ತಪಡಿಸಲಾಯಿತು.





Any questions related to ಸರ್ಕಾರಿ ಕಾಲೇಜು SC/ST ಅಧ್ಯಾಪಕರ ಸಂಘದ ವೆಬ್‌ಸೈಟ್ ಉದ್ಘಾಟನೆ!?