ಸರ್ಕಾರಿ ಜಾಗದಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಕೆ ವಿರೋಧ ಮತ್ತು ದಲಿತರಿಗೆ ಬಹಿಷ್ಕಾರ.

ಬೀದರ.09.ಮೇ.25:- ಹುಲಸೂರ್ ತಾಲ್ಲೂಕಿನ ಗಡಿ ರಾಯಪಳ್ಳಿ ಗ್ರಾಮದ ಸರ್ಕಾರಿ ಜಾಗದಲ್ಲಿ ಅಳವಡಿಸಿದ ಅಂಬೇಡ್ಕರ್ ಹಾಗೂ ಬಸವಣ್ಣನವರ ಭಾವಚಿತ್ರಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಗಡಿ ರಾಯಪಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಹಿನ್ನಲೆ ಗ್ರಾಮದಲ್ಲಿನ ಸರ್ಕಾರಿ ಭೂಮಿಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಹಾಕಲಾಗಿತ್ತು. ಎರಡು ದಿನಗಳ ಬಳಿಕ ಅದೇ ಊರಿನ ಇನ್ನೊಂದು ಸರ್ಕಾರಿ ಜಾಗದಲ್ಲಿ ಲಿಂಗಾಯತ ಸಮುದಾಯದವರು ಬಸವಣ್ಣನವರ ಭಾವಚಿತ್ರ ಅಳವಡಿಸಿದ್ದರು ಎನ್ನಲಾಗಿದೆ. ಇಂದು ದಿಢೀರ್‌ ಆಗಿ ಊರಲ್ಲಿನ ಎಲ್ಲ ಅಂಗಡಿ ಮುಂಗಟ್ಟುಗಳು ಮುಚ್ಚುವ ಮೂಲಕ ದಲಿತರಿಗೆ ಬಹಿಷ್ಕಾರ ಹಾಕಿದ್ದಾರೆ ಎಂದು ಆ ಊರಿನ ದಲಿತರು ಆರೋಪಿಸಿದ್ದಾರೆ.

ಸುದ್ದಿ ತಿಳಿದು ಗ್ರಾಮಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಜೆ.ಎಸ್ ನ್ಯಾಮೇಗೌಡ, ತಹಶೀಲ್ದಾರ್ ಶಿವಾನಂದ್ ಮೇತ್ರೆ ಹಾಗೂ ಪಿಡಿಒ ಸೇರಿದಂತೆ ಅಧಿಕಾರಿಗಳ ತಂಡವು ಗ್ರಾಮದಲ್ಲಿ ಶಾಂತಿ ಕಾಪಾಡುವಂತೆ ಎರಡು ಸಮುದಾಯದಲ್ಲಿ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಎರಡು ಸಮುದಾಯದಲ್ಲಿ ಒಮ್ಮತ ಮೂಡಿದ್ದು, ಅಂಗಡಿ ಮುಂಗಟ್ಟುಗಳು ಮತ್ತೆ ತೆರಯಲಾಗಿದೆ ಎಂದು ತಿಳಿದು ಬಂದಿದೆ.

ನಂತರ ಅಧಿಕಾರಿಗಳ ಸಮ್ಮುಖದಲ್ಲಿ ಸರ್ಕಾರಿ ಜಾಗದಲ್ಲಿ ಅಳವಡಿಸಿದ್ದ ಅಂಬೇಡ್ಕರ್ ಮತ್ತು ಬಸವಣ್ಣನವರ ಭಾವಚಿತ್ರಗಳನ್ನು ತೆರವುಗೊಳಿಸಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

7 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

7 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

8 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

8 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

8 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

9 hours ago