Home » ಲೈವ್ ನ್ಯೂಸ್ » ಸರ್ಕಾರಿ ದೃಶ್ಯಕಲಾ ಕಾಲೇಜು: ಬಿವಿಎ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಸರ್ಕಾರಿ ದೃಶ್ಯಕಲಾ ಕಾಲೇಜು: ಬಿವಿಎ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

Facebook
X
WhatsApp
Telegram

ಕೊಪ್ಪಳ.13.ಜೂನ್.26: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯ ವತಿಯಿಂದ 2026-27ನೇ ಸಾಲಿಗೆ ಪ್ರಥಮ ವರ್ಷದ ಬಿವಿಎ ಸ್ನಾತಕ ಪದವಿ ತರಗತಿಗೆ ರಾಜ್ಯ ಶಿಕ್ಷಣ ಪದ್ಧತಿ (ಎಸ್.ಇ.ಪಿ) ಯನ್ವಯ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶಾತಿ ಅಧಿಸೂಚನೆಯನ್ವಯ ಬ್ಯಾಚುಲರ್ ಆಫ್ ವಿಜುಯಲ್ ಆರ್ಟ್ಸ್ (ಬಿ.ವಿ.ಎ.) ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ರಾಜ್ಯ ಶಿಕ್ಷಣ ಪದ್ಧತಿ’ (STATE EDUCATION POLICY) ಯಂತೆ 2026-27 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ.ಎ. ದೃಶ್ಯ ಕಲೆಯಲ್ಲಿ ಸ್ನಾತಕ: ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ. ಅಥವಾ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು (ಯುಯುಸಿಎಂಎಸ್) “htts;/uucms.karnataka.gov.in” ನಲ್ಲಿ ಆನ್‌ಲೈನ್ ಮೂಲಕ ಜೂನ್ 12 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಈ ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋಧ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.


ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ಜೂನ್ 15 ರಂದು ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ ಮೈಸೂರು ಸಂಸ್ಥೆಯ ಕಾರ್ಯಾಲಯದ ದೂರವಾಣಿ ಸಂಖ್ಯೆ 0821-2438931 ಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಸಂಸ್ಥೆಯ ಡೀನ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology