ರಾಜ್ಯ ಸರ್ಕಾರ ರಾಜ್ಯದಂತ್ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಮೇ 15 ರಿಂದ ಒಂದು ತಿಂಗಳ ಕಾಲ ಕೈಗೊಳ್ಳಲು ಸಂಪುಟ ಸಭೆ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ವರ್ಗಾವಣೆಗೆ ಒಪ್ಪಿಗೆ ನೀಡಲಾಗಿದೆ.
ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಹೆಚ್.ಕೆ. ಪಾಟೀಲ್ ಅವರು, ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇಕಡ 6ರಷ್ಟು ವರ್ಗಾವಣೆ ಪ್ರಕ್ರಿಯೆ ನಡೆಸಲು ಸಂಬಂಧಿಸಿದ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮೇ 15ರಿಂದ ಜೂನ್ 14ರ ವರೆಗೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಸಚಿವರಿಗೆ ಅಧಿಕಾರ ನೀಡಲಾಗಿದೆ. ಗ್ರೂಪ್ ಸಿ ಮತ್ತು ಡಿ ವೃಂದದವರಿಗೆ ಸಂಬಂಧಿಸಿದ ಪ್ರಾಧಿಕಾರಕ್ಕೆ ಅಧಿಕಾರ ವಹಿಸಲಾಗಿದೆ ಎಂದರು.
ವರ್ಗಾವಣೆಯ ಅವಧಿ ವಿಸ್ತರಣೆ, ಮಾರ್ಗಸೂಚಿ ಪರಿಷ್ಕರಣೆ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲು ಸಂಪುಟ ಸಭೆ ನಿರ್ಣಯಿಸಿದೆ. ಶಿಕ್ಷಣ, ಆರೋಗ್ಯ ಇತರೆ ಇಲಾಖೆಗಳಲ್ಲಿ ಇರುವಂತೆ ಇದೇ ಮೊದಲ ಬಾರಿಗೆ ಅಬಕಾರಿ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಬೆಂಗಳೂರು.07.ಆಗಸ್ಟ್.25:- 2025–26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಯುಜಿಸಿ ಮಾನದಂಡಗಳನ್ನು ಕಡ್ಡಾಯಗೊಳಿಸಲಾಗಿದೆ. ಇದರಿಂದ ಉಪನ್ಯಾಸಕರ…
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …
ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…
ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…