Home » ಲೈವ್ ನ್ಯೂಸ್ » ಸರ್ಕಾರಿ ಪದವಿ ಕಾಲೇಜುಗಳಲ್ಲಿ’ಇಂಗ್ಲಿಷ್ ಸ್ಕಿಲ್ ಫಾರ್ ಯೂತ್’: ಸಚಿವ ಡಾ. ಸುಧಾಕರ್ ಸೂಚನೆ

ಸರ್ಕಾರಿ ಪದವಿ ಕಾಲೇಜುಗಳಲ್ಲಿ’ಇಂಗ್ಲಿಷ್ ಸ್ಕಿಲ್ ಫಾರ್ ಯೂತ್’: ಸಚಿವ ಡಾ. ಸುಧಾಕರ್ ಸೂಚನೆ

Facebook
X
WhatsApp
Telegram

ಬೆಂಗಳೂರು.21.ಜನವರಿ.26: ರಾಜ್ಯದ ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಪಡೆಯಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ  ರಾಜ್ಯ ಸರ್ಕಾರ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಕನ್ನಡ ಮತ್ತು ಗ್ರಾಮೀಣ ಹಿನ್ನೆಲೆಯುಳ್ಳ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಮಾತನಾಡುವ ವಾತಾವರಣ ನಿರ್ಮಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದ್ದಾರೆ.

ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕೌಶಲ ಬೆಳಸಿ   ಟ್ರೆಂಡ್ ಮಾಡುವ ಅತಿ ಅವಶ್ಯಕತೆ ಉದ್ಯೋಗ ಪಡೆಯಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ

ಬ್ರಿಟಿಷ್ ಕೌನ್ಸಿಲ್, ಮೈಕ್ರೋಸ್‌ಟಾ ಮತ್ತು ಉನ್ನತ ಶಿಕ್ಷಣ ಇಲಾಖೆ ಸಹಯೋಗದಲ್ಲಿ 31 ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು 29 ಪಾಲಿಟೆಕ್ನಿಕ್‌ಗಳಿಗೆ ‘ಇಂಗ್ಲಿಷ್ ಸ್ಕಿಲ್ ಫಾರ್ ಯೂತ್’ ಕಾರ್ಯಕ್ರಮವನ್ನು ವಿಸ್ತರಿಸುವ ಒಡಂಬಡಿಕೆ ಮಾಡಿಕೊಳ್ಳಲು ಸರ್ಕಾರಿ ಆರ್‌ಸಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.

ಸರ್ಕಾರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಿಂದಲೇ ಇಂಗ್ಲಿಷ್ ಮಾತನಾಡುವ ಪ್ರವೃತ್ತಿ ಆರಂಭವಾದರೆ ವಿದ್ಯಾರ್ಥಿಗಳು ಕೂಡ ಸಹಜವಾಗಿ ಇಂಗ್ಲಿಷ್ ಮಾತನಾಡುವ ಹವ್ಯಾಸ ಬೆಳೆಸಿಕೊಳ್ಳುತ್ತಾರೆ. ಈ ಕಾರ್ಯಕ್ರಮವನ್ನು ವಿಶೇಷವಾಗಿ ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ದೃಷ್ಟಿಯಿಂದಲೇ ಜಾರಿಗೊಳಿಸಲಾಗಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.

ಕಳೆದ ವರ್ಷ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗಿತ್ತು. ಇದರ ಆಧಾರದಲ್ಲಿ ಈಗ ಎರಡು ಹಂತದಲ್ಲಿ 9.500 ವಿದ್ಯಾರ್ಥಿಗಳಿಗೆ ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದರು.

ಇಂಗ್ಲಿಷ್ ಭಾಷೆ, ಸಂವಹನ ಮತ್ತು ಉದ್ಯೋಗ ಅರ್ಹತಾ ಕೌಶಲಗಳನ್ನು ಬೆಳೆಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮವನ್ನು ಮತ್ತಷ್ಟು ಕಾಲೇಜುಗಳಿಗೆ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

ಬ್ರಿಟಿಷ್ ಕೌನ್ಸಿಲ್ ದಕ್ಷಿಣ ಭಾರತ ನಿರ್ದೇಶಕಿ ಜನಕ ಪುಷ್ಪನಾಥನ್ ಮಾತನಾಡಿ, ಶಿಕ್ಷಣ, ಕೌಶಲ ಮತ್ತು ವ್ಯಕ್ತಿಗಳ ನಡುವಿನ ಸಂವಹನ ಸಂಪರ್ಕ ವರ್ಧಿಸುವುದು ಸಹಭಾಗಿತ್ವದ ಉದ್ದೇಶವಾಗಿದೆ.

ಯುವಕರು ಆತ್ಮವಿಶ್ವಾಸದಿಂದ ಇಂಗ್ಲಿಷ್ ಮಾತನಾಡುವಂತೆ ಮಾಡುವುದು ಹಾಗೂ ಉದ್ಯೋಗ ಅರ್ಹತೆಗಳನ್ನು ಸೃಷ್ಟಿಸುವುದು ಗುರಿಯಾಗಿದೆ. ಇದು ಇಂಡಿಯಾ- ಯುಕೆ ವಿಷನ್-2035 ಆಶಯಗಳನ್ನು ಬಿಂಬಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪುಷ್ಪಾ ಗೋಯೆಲ್ ಚೌದರಿ, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕಿ ಪ್ರೊ. ಶೋಭಾ ಜಿ., ಇಲಾಖೆ ಆಯುಕ್ತೆ ಎನ್. ಮಂಜುಶ್ರೀ, ಬ್ರಿಟಿಷ್ ಕೌನ್ಸಿಲ್‌ನ ಚಂದ್ರು ಅಯ್ಯರ್ ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology