08/06/2025 8:16 PM

Translate Language

Home » ಲೈವ್ ನ್ಯೂಸ್ » ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹ.!

ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹ.!

Facebook
X
WhatsApp
Telegram

ಕಲಬುರಗಿ:28. ಜನವರಿ.25:- ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಆಗ್ರಹ ‘ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 11,000ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕಡಿಮೆ ಸಂಬಳಕ್ಕೆ ಕಾರ್ಯನಿರ್ವಹಿಸುತ್ತಿದ್ದು, ಅವರ ಹಲವು ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಘಟಕ ಒತ್ತಾಯಿಸಿದೆ.

ಈ ಕುರಿತು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಚಂದ್ರಕಾಂತ ಶಿರೋಳೆ, ‘ಬಾಕಿ ಇರುವ ಎರಡೂವರೆ ತಿಂಗಳ ಸಂಬಳ ಬಿಡುಗಡೆ ಮಾಡಬೇಕು, ಇಡುಗಂಟು, ಹೆರಿಗೆ ರಜೆ, ಜೀವ ವಿಮೆ ಸೌಲಭ್ಯ ಒದಗಿಸಬೇಕು. 2009ರ ಎಂ.ಫಿಲ್ ಪದವಿಯನ್ನು ನೆಟ್‌, ಸೆಟ್‌ ಮತ್ತು ಪಿಎಚ್‌ಡಿಗೆ ಸಮ ಎಂದು ಪರಿಗಣಿಸಬೇಕು.

ಸರಾಸರಿ 8, 10 ವರ್ಷಕ್ಕೂ ಹೆಚ್ಚು ಕಾಲ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನು ಯುಜಿಸಿ ಅರ್ಹತೆ ಇಲ್ಲವೆಂದು ಅನರ್ಹಗೊಳಿಸಿದರೆ, ಅಂಥವರಿಗೆ ಕನಿಷ್ಠ ₹ 25 ಲಕ್ಷ ಸಹಾಯಧನ ಒದಗಿಸಬೇಕು. ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಆಗ್ರಹಿಸಿದರು.

‘ಫೆ.15ರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ’ ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಮಮತಾ ಪಾಟೀಲ, ರಮೇಶ ಕವಡೆ, ಜ್ಯೋತಿ, ಅವ್ವಮ್ಮ ಮತ್ತಿತರರು ಇದ್ದರು.

ರಾಜ್ಯದ ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕೊಡೋಕೆ ಕಾನೂನಿನಲ್ಲಿ ಅವಕಾಶ ಇಲ್ಲ ಅಂತಿದಾರೆ, ಅದರೆ ಅರ್ಹತೆ ಇಲ್ಲಾ ಅಂದ್ರೆ ಸೇವೆಗೆ ಯಾಕೆ ಅವಕಾಶ ಕಲ್ಪಿಸಿದರೆ?

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!