|

ಸರ್ಕಾರಿ ಪದವಿ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ವೇಳಾಪಟ್ಟಿ.

ಬೆಂಗಳೂರು.27.ಮೇ.25:- 2025 ನೇ ಸಾಲಿಗೆ ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸಿಲಿಂಗ್ ನಡೆಸುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಬೋಧಕರ (ಪ್ರಾಧ್ಯಾಪಕರು, ಸಹ/ಸಹಾಯಕ ಪ್ರಾಧ್ಯಾಪಕರು, ಗ್ರಂಥಪಾಲಕರು ಮತ್ತು ಕ್ರೀಡಾ & ದೈಹಿಕ ಶಿಕ್ಷಣ ನಿರ್ದೇಶಕರು) ವರ್ಗಾವಣೆಗಳನ್ನು ನಿಯಂತ್ರಿಸುವ ಸಲುವಾಗಿ ಉಲ್ಲೇಖ (1) ರ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆಯ ಬೋಧಕರ ವರ್ಗಾವಣೆ ನಿಯಂತ್ರಣ) ನಿಯಮಗಳು-2021 ನ್ನು ಹಾಗೂ ಉಲ್ಲೇಖ (2 & 3)ರಲ್ಲಿ ಸದರಿ ನಿಯಮಗಳ ಕೆಲವೊಂದು ಅಂಶಗಳಿಗೆ ತಿದ್ದುಪಡಿಯನ್ನು ಮಾಡಿ ಅಧಿಸೂಚಿಸಲಾಗಿದೆ.

ಸದರಿ ವರ್ಗಾವಣೆ ನಿಯಮಗಳ ನಿಯಮ 8 ರಲ್ಲಿ ಸಾರ್ವಜನಿಕ ಹಿತದೃಷ್ಟಿಯ ಕಡ್ಡಾಯ ವರ್ಗಾವಣೆ ಹಾಗೂ ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆಗಳನ್ನು ಪ್ರತಿ ಕ್ಯಾಲೆಂಡರ್ ವರ್ಷದ ಮೇ ಮತ್ತು ಜುಲೈ ಮಾಹೆಯ ನಡುವೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.

ಮೇಲ್ಕಂಡ ನಿಯಮದನ್ವಯ ಮಂಜೂರಾದ ಬೋಧಕರ ಹುದ್ದೆಗಳ ಶೇಕಡಾ 9 ರಷ್ಟು ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗಳು ಹಾಗೂ ಶೇಕಡಾ 6 ರಷ್ಟು ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆ ನಡೆಸಲು ಅವಕಾಶವಿದ್ದು ಅದರಂತೆ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿರುತ್ತದೆ.

ವರ್ಗಾವಣೆ ನಿಯಮಗಳ ನಿಯಮ 4ರ ಉಪನಿಯಮ 3 ಮತ್ತು 4 (ಎ) ರಲ್ಲಿ ಹೇಳಿರುವ ವಿಶೇಷ ಪ್ರಕರಣಗಳಿಗೆ ಅನ್ವಯಿಸುವ ಬೋಧಕರು ಅಗತ್ಯ ದಾಖಲೆಗಳೊಂದಿಗೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯಗೊಳಿಸುವ Online ನಮೂನೆಯಲ್ಲಿ ನಿಗದಿತ ದಿನಾಂಕದ ಒಳಗೆ ವರ್ಗಾವಣೆ ಅರ್ಜಿ ಸಲ್ಲಿಸುವುದು, ನಿಗದಿತ ಕೊನೆಯ ದಿನಾಂಕದ ನಂತರ ಮತ್ತು ಅಗತ್ಯ ದಾಖಲಾತಿಗಳಿಲ್ಲದೆ ಸಲ್ಲಿಸಿದ ವರ್ಗಾವಣೆ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

Similar Posts

Leave a Reply

Your email address will not be published. Required fields are marked *