ಔರಾದ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರೆ ಇಲ್ಲ.ಇಂದು ಸರ್ಕಾರದ ಗಮನಕ್ಕೆ ತರಲಾಗಿದೆ, ಹೊಸದಾಗಿ ನೇಮಕ ಪ್ರಕ್ರಿಯೆ ನಡೆಯುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಆವರು ವಿಧಾನ ಸಭೆಯಲ್ಲಿ ಹೇಳಿದ್ರು.
ಬೆಳಗಾವಿ ಅಧಿವೇಶನದಲ್ಲಿ ಶಾಸಕ ಪ್ರಭು ಚವಾಣ್ ಅವರು ಔರಾದ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕೆಗೆ ಹಿನ್ನಡೆಯಾಗುತ್ತಿದೆ ಎಂಬುದನ್ನು ಸಚಿವರ ಗಮನಕ್ಕೆ ತಂದರು.
ಸರ್ಕಾರಿ ಐಟಿಐ ಕಾಲೇಜು, ಕೃಷಿ ಇಲಾಖೆಯಲ್ಲೂ ಸಿಬ್ಬಂದಿ ಕೊರತೆಯಿಂದ ಸಮಸ್ಯೆಯಾಗಿದೆ. ಸರ್ಕಾರ ಇಂತಹ ಮಹತ್ವದ ಇಲಾಖೆಯಲ್ಲಿ ತಕ್ಷಣ ಹುದ್ದೆ ಭರ್ತಿ ಮಾಡಿ ಸುಗಮ ಆಡಳಿತಕ್ಕೆ ಅನುಕೂಲ ಮಾಡಿಕೊಡುವಂತೆ ಶಾಸಕ ಚವಾಣ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು. ಈ ಬಗ್ಗೆ ಸಂಬಂಧಿತ ಇಲಾಖೆ ಸಚಿವರು ಉತ್ತರ ನೀಡಿ ಮಹತ್ವದ ಇಲಾಖೆಯಲ್ಲಿ ನೇಮಕಾತಿಗೆ ಸರ್ಕಾರ ಮುಂದಾಗಿದೆ’ ಎಂದು ತಿಳಿಸಿದರು.