ಬೆಳಗಾವಿ.06.ಜೂನ.25:- ಬೆನಿಪ್ಪಾಣಿ ನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಹೆಚ್ಚುವರಿ ತರಗತಿ ಕೊಠಡಿ ಕಟ್ಟಡಕ್ಕೆ 3 ಕೋಟಿ ಅನುದಾನ ಬಿಡುಗಡೆಯಾಗಿದ್ದು ಬೇಗಾನೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಗುವುದು.
ನಿಪ್ಪಾಣಿ ನಗರದಲ್ಲಿ ಈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೆಚ್ಚುವರಿ ತರಗತಿ ಕೊಠಡಿ, ಪ್ರಯೋಗಾಲಯ, ಮೂಲಭೂತ ಸೌಕರ್ಯ ಹಾಗೂ ಹೈ ಟೆಕ್ ಕಟ್ಟಡ,ನಿರ್ಮಾಣ ವಾಗುವುದು.
ನಿಪ್ಪಾಣಿ ನಗರಸಭೆ ವತಿಯಿಂದ 2 ಎಕರೆ ಜಾಗವನ್ನು ಬಸವೇಶ್ವರ ಪೊಲೀಸ್ ಠಾಣೆ ಎದುರಿಗೆ ಕಾಲೇಜಿಗೆ ಜಾಗ ನೀಡಿದ್ದು ಅಲ್ಲಿ ಹೈ ಟೆಕ್ ಕಾಲೇಜನು ನಿರ್ಮಿಸಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಲಾಗುವುದು.
2020-21ನೇ ಸಾಲಿನಲ್ಲಿ ನಾನು ಸಚಿವೆಯಾದ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಅಶ್ವತ ನಾರಾಯಣ ಅವರಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿಪ್ಪಾಣಿಗೆ ಮಂಜೂರು ಮಾಡುವಂತೆ ಮನವಿ ನೀಡಲಾಗಿದ್ದು ನಮ್ಮ ಮನವಿಗೆ ಸ್ಪಂದಿಸಿ ನಮ್ಮ ಬಿಜೆಪಿ ಸರ್ಕಾರವಿದ್ದಾಗ 2020-21 ಸಾಲಿನಲ್ಲಿ ಮಂಜೂರು ಆಗಿದ್ದು ಸ್ತ್ವಂತ ಕಟ್ಟಡವಿಲ್ಲದ ಕಾರಣ ಮುನ್ಸಿಪಲ್ ಹೈಸ್ಕೂಲ್ ನಲ್ಲಿ ತರಗತಿ ಪ್ರಾರಂಭವಾಗಿರುತ್ತದೆ.ಈಗಿನ ಕಾಂಗ್ರೆಸ್ ಸರಕಾರದಲ್ಲಿ ಹಲವು ಬಾರಿ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ,ಅಧಿವೇಶನದಲ್ಲಿ ಸಚಿವರ ಗಮನ ಸೆಳೆದು ಧ್ವನಿ ಎತ್ತಿ 3 ಕೋಟಿ ಅನುದಾನ ಮಂಜೂರು ಮಾಡಿಸಿರುತ್ತೇನೆ.
ನಿಪ್ಪಾಣಿಯಲ್ಲಿ ಇಲ್ಲಿಯವರೆಗೆ ಸರ್ಕಾರಿ ಪದವಿ ಕಾಲೇಜು ಇರಲಿಲ್ಲ. ಆದರೆ ಪದವಿ ಕಾಲೇಜು ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿಸಿ,ಈಗ ಅನುದಾನ ಬಿಡುಗಡೆಯಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…