ಬೆಂಗಳೂರು.03.ಏಪ್ರಿಲ್.25:- ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 700 ಸಹಾಯಕರು ಮತ್ತು 300 ಪ್ರಯೋಗಾಲಯ ಸಹಾಯಕ ಸಿಬ್ಬಂದಿ ಹೊರಗುತ್ತಿಗೆ ಆಧಾರದ ಮೇಲೆ ಒದಗಿಸಲು ಇ-ಟೆಂಡರ್ ನೀಡಲಾಗಿದೆ.
ಕಚೇರಿ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳನ್ನು ಕಾಯಂ ಆಗಿ ಭರ್ತಿ ಮಾಡುವವರೆಗೆ ಅಥವಾ ಮುಂದಿನ ಆದೇಶದವರೆಗೆ ಪ್ರಾಂಶುಪಾಲರುಗಳು ತಮ್ಮ ಹಂತದಲ್ಲಿ ಯಾವುದೇ ರೀತಿಯ ಗುತ್ತಿಗೆ/ಹೊರ ಗುತ್ತಿಗೆ ಆಧಾರದ ಮೇಲೆ ಗ್ರೂಪ್-ಡಿ ಸಿಬ್ಬಂದಿ ಸೇವೆಯನ್ನು ನೇರ ಅಥವಾ ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಪಡೆಯುವುದನ್ನು ನಿರ್ಬಂಧಿಸಲಾಗಿದೆ. ಒಂದು ವೇಳೆ ಈ ಆದೇಶ ಮೀರಿ ಕಾಲೇಜು ಹಂತದಲ್ಲಿ ನೇಮಿಸಿಕೊಂಡಲ್ಲಿ ತಗಲುವ ಆರ್ಥಿಕ ವೆಚ್ಚವನ್ನು ನೀಡುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಹೊರಗುತ್ತಿಗೆ ಸಿಬ್ಬಂದಿಯ ಇಪಿಎ ಮತ್ತು ಇಎಸ್‌ಐ ಖಾತೆಗಳಿಗೆ ನಿಯಮಾನುಸಾರ ಪ್ರತಿ ತಿಂಗಳು ವಂತಿಗೆಗಳನ್ನು ಜಮೆ ಮಾಡದೆ ಇದ್ದಲ್ಲಿ ಸಂಬಂಧಪಟ್ಟ ಏಜೆನ್ಸಿ ಮೂಲಕವೇ ಜಮೆ ಮಾಡಲು ಸೂಚಿಸಲಾಗಿದೆ.
ಹೊರಗುತ್ತಿಗೆ ನೌಕರರಿಗೆ ಸಾರ್ವತ್ರಿಕ ರಜೆಗಳನ್ನು ಹೊರತುಪಡಿಸಿ ಒಂದು ದಿನ ಮಾತ್ರ ಸಾಂದರ್ಭಿಕ ರಜೆಯನ್ನು ಪಡೆಯಲು ಅರ್ಹರಾಗಿರುತ್ತಾರೆ. ಒಂದು ವೇಳೆ 15 ದಿನಗಳಿಗಿಂತ ಹೆಚ್ಚಿನ ಸಮಯ ರಜೆ ಪಡೆದಲ್ಲಿ ಬದಲಿ ಸಿಬ್ಬಂದಿಯನ್ನು ನೇಮಿಸಬಹುದು ಎಂದು ತಿಳಿಸಲಾಗಿದೆ.
ನಿಗದಿಪಡಿಸಿದ ಕಚೇರಿ/ಕಾಲೇಜಿನ ಕೆಲಸವನ್ನು ಹೊರತುಪಡಿಸಿ ಶೌಚಾಲಯ ಸ್ವಚ್ಛತೆ, ಸ್ವಂತ ಕೆಲಸಗಳಿಗೆ ಹಂಚಿಕೆ ಮಾಡದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…