ಸರ್ಕಾರಿ ಪ್ರಥಮ ದರ್ಜೆ ಕಾಲೇಜು `ಅತಿಥಿ ಉಪನ್ಯಾಸಕರ’ ನೇಮಕಾತಿ : ಶಿಕ್ಷಣ ಇಲಾಖೆ ಆದೇಶ.!

ಬೆಂಗಳೂರು:ಉನ್ನತ ಶಿಕ್ಷಣ ಇಲಾಖೆ.ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರ ಸೇವೆಯನ್ನು ಬಳಸಿಕೊಳ್ಳುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಇಲಾಖೆ ಆದೇಶ:-

2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಒಳಗೊಂಡಂತೆ) ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಉಲ್ಲೇಖ-(1) ರಂತೆ ಸರ್ಕಾರದ ನಿರ್ದೇಶನದನ್ವಯ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿತ್ತು.

ಆದರೆ, ಇಲಾಖೆಯಲ್ಲಿ ಖಾಯಂ ಉಪನ್ಯಾಸಕರ ಸಾಮಾನ್ಯ ಮತ್ತು ವಿಶೇಷ ವರ್ಗಾವಣೆ ಪ್ರಕ್ರಿಯೆ ನಂತರ ಅವರು ಸಂಬಂಧಪಟ್ಟ ಕಾಲೇಜುಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲಿರುವುದರಿಂದ ಹಾಗೂ ಹೊಸದಾಗಿ ನೇಮಕಾತಿ / ಸ್ಥಳ ನಿಯುಕ್ತಿ ಹೊಂದಿದ ಉಪನ್ಯಾಸಕರು ಸಂಬಂಧಪಟ್ಟ ಕಾಲೇಜುಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲಿರುವುದರಿಂದ ಕಾಲೇಜುಗಳಲ್ಲಿ ಬೋಧನಾ ಕಾರ್ಯಭಾರದ ಹೆಚ್ಚಳ/ಕೊರತೆ ಉಂಟಾಗಲಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2024-25ನೇ ಸಾಲಿಗೆ ಅತಿಥಿ ಉಪನ್ಯಾಸಕರ ಆಯ್ಕೆಗೆ ಆನ್‌ಲೈನ್ ಕೌನ್ಸಿಲಿಂಗ್ ನಡೆಸುವವರೆಗೆ ಈ ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಆಯ್ಕೆಗೊಂಡು EMIS ನಲ್ಲಿ Upload ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ / ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ (ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಕರ ಸೇವೆಯನ್ನೂ ಒಳಗೊಂಡಂತೆ) ಸೇವೆಯನ್ನು ತಾತ್ಕಾಲಿಕವಾಗಿ ಕಾಲೇಜಿನಲ್ಲಿ ಹಾಲಿ ಲಭ್ಯವಿರುವ ಕಾರ್ಯಭಾರಕ್ಕನುಗುಣವಾಗಿ ಬಳಸಿಕೊಳ್ಳುವಂತೆ ಉಲ್ಲೇಖ-(2) ರ ಈ ಕಛೇರಿಯ ಸುತ್ತೋಲೆಯಲ್ಲಿ ಸೂಚಿಸಲಾಗಿತ್ತು.

ಪ್ರಸ್ತುತ 1, 3 & 5 ಸೆಮಿಸ್ಟರ್ ಅವಧಿಯು ಮುಕ್ತಾಯಗೊಂಡಿರುವ / ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿನ 2, 4 & 6ನೇ ಸೆಮಿಸ್ಟರ್ ಅವಧಿಗೆ ಲಭ್ಯವಿರುವ / ಲಭ್ಯವಾಗುವ ಕಾರ್ಯಭಾರದ ಮಾಹಿತಿಯನ್ನು ದಿನಾಂಕ:04.01.2025 ರ ಸಂಜೆ 5:00 ಗಂಟೆಯೊಳಗಾಗಿ ಇಲಾಖೆಯ EMIS ನಲ್ಲಿ ಕಡ್ಡಾಯವಾಗಿ Upload ಮಾಡಲು ಎಲ್ಲಾ ಪ್ರಾಂಶುಪಾಲರುಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಬೋಧನಾ ಕಾರ್ಯಭಾರದ ವಿವರಗಳನ್ನು EMIS ನಲ್ಲಿ Upload ಮಾಡುವಾಗ, ಆಯಾ ವಿಷಯಗಳಲ್ಲಿ ನಿಯಮಾನುಸಾರ ಕನಿಷ್ಠ ವಿದ್ಯಾರ್ಥಿಗಳ ಸಂಖ್ಯೆಯ ಪ್ರಮಾಣವು ಉಲ್ಲಂಘನೆಯಾಗದಂತೆ, ಸಾಮಾನ್ಯ ವರ್ಗಾವಣೆ / ವಿಶೇಷ ವರ್ಗಾವಣೆ ಮತ್ತು ಹೊಸದಾಗಿ ನೇಮಕಗೊಂಡು ಕರ್ತವ್ಯಕ್ಕೆ ಹಾಜರಾಗಿರುವ ಉಪನ್ಯಾಸಕರುಗಳಿಗೆ ನಿಯಮಾನುಸಾರ ಬೋಧನಾ ಕಾರ್ಯಭಾರವು ಹಂಚಿಕೆಯಾಗಿ, ನಂತರದಲ್ಲಿ ಉಳಿಕೆಯಾಗುವ ಕಾರ್ಯಭಾರದ ವಿವರಗಳನ್ನು ಪರಿಶೀಲಿಸಿಕೊಳ್ಳುವುದು ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರ ಜವಾಬ್ದಾರಿಯಾಗಿರುತ್ತದೆ. ಒಂದು ವೇಳೆ ಬೋಧನಾ ಕಾರ್ಯಭಾರದ ವಿವರಗಳನ್ನು ತಪ್ಪಾಗಿ Upload ಮಾಡಿದಲ್ಲಿ ಅಂತಹ ಪ್ರಾಂಶುಪಾಲರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂಬುದನ್ನು ಈ ಮೂಲಕ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಸರ್ಕಾರ ಹಿಂದಿನ ವರ್ಷದಲ್ಲಿ ಸೇವೆಸಲಿಸಿದ್ ಅತಿಥಿ ಉಪನ್ಯಾಸಕರಿಗೆ ತಾತ್ಕಾಲಿಕ ವ್ಯವಸ್ಥೆ ಅಡಿಯಲ್ಲಿ ಮುಂದುವರಿಸಿತು.

prajaprabhat

Recent Posts

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.

ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ  ಕಾಲೇಜು ಶಿಕ್ಷಣ ಇಲಾಖೆಯು…

5 hours ago

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…

6 hours ago

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ

ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…

6 hours ago

Free Couching ಅಲ್ಪಸಂಖ್ಯಾತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…

6 hours ago

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ

ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…

7 hours ago

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

7 hours ago