ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಹಳೆಯ ಪಿಂಚಣಿ (OPS) ಯೋಜನೆ ಜಾರಿ ರಾಜ್ಯ ಸರ್ಕಾರದಿಂದ ಆದೇಶ.!

ಬೆಂಗಳೂರು.19.ಜೂನ್.25:- ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಸೌಲಭ್ಯಕ್ಕೆ (ಎನ್.ಪಿ.ಎಸ್ ನಿಂದ ಒ.ಪಿ.ಎಸ್)ಗೆ ಒಳಪಡಲು ಅಭಿಮತ ಸಲ್ಲಿಸಿರುವ ಎಲ್ಲಾ ನೌಕರರುಗಳ ಕ್ರೂಢೀಕೃತ ಪ್ರಸ್ತಾವನೆಗಳನ್ನು ಆರ್ಥಿಕ ಇಲಾಖೆ ನಮೂನೆಯಲ್ಲಿ ಭರ್ತಿ ಮಾಡಿ ತಮ್ಮ ದೃಢೀಕರಣದೊಂದಿಗೆ ಹಾಗೂ ಸರ್ಕಾರಕ್ಕೆ ಕಳುಹಿಸುವ ಪೂರ್ವದಲ್ಲಿ ಯಾವುದೇ ಶಿಕ್ಷಕರಗಳ ವಿವರಗಳನ್ನು ಕೈಬಿಟ್ಟಿರುವುದಿಲ್ಲವೆಂಬುದನ್ನು ಸಹ ದೃಢೀಕರಿಸಿ ಕಳುಹಿಸುವಂತೆ ಹಾಗೂ ನಮೂನೆಗಳಲ್ಲಿ ಭರ್ತಿ ಮಾಡಿ ಸಾಫ್ಟ್ ಪ್ರತಿಯನ್ನು ಇ-ಮೇಲ್ ಮತ್ತು ಹಾರ್ಡ್ ಪ್ರತಿಯನ್ನು ಕೂಡಲೇ ಸರ್ಕಾರಕ್ಕೆ ಸಲ್ಲಿಸುವಂತೆ ಸರ್ಕಾರದಿಂದ ನಿರ್ದೇನವಾಗಿರುತ್ತದೆ.

ಈ ಹಿನ್ನಲೆಯಲ್ಲಿ ಬೆಂಗಳೂರು ಮತ್ತು ಮೈಸೂರು ವಿಭಾಗದ ಎಲ್ಲಾ ಉಪನಿರ್ದೇಶಕರುಗಳಿಗೆ ತಿಳಿಸುವುದೇನೆಂದರ ಮೇಲ್ಕಂಡ ಸರ್ಕಾರದ ಪತ್ರದಲ್ಲಿ ಸೂಚಿಸಿರುವಂತೆ (ಎನ್.ಪಿ.ಎಸ್ ನಿಂದ ಒ.ಪಿ.ಎಸ್)ಗೆ ಒಳಪಡಲು ಇಚ್ಛಿಸುವ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ಮಾಹಿತಿ ಈ ಕೆಳಕಂಡಂತ ಪರಿಶೀಲಿಸಿ ಲಗತ್ತಿಸಿರುವ ನಮೂನೆ-1 ಮತ್ತು ನಮೂನೆ-2 ರಂತೆ ಸಾಫ್ಟ್ ಪ್ರತಿಯನ್ನು ಇ-ಮೇಲ್ ಮತ್ತು ಹಾರ್ಡ್ ಪ್ರತಿಯನ್ನು ಈ ಕಛೇರಿಗೆ ಸಲ್ಲಿಸಲು ಸೂಚಿಸಿದೆ.

ಪರಿಶೀಲಿಸಿ ಸಲ್ಲಿಸಬೇಕಾದ ದಾಖಲೆಗಳು

1. ಪ್ರತಿ ಶಿಕ್ಷಕರ ನೇಮಕಾತಿ ಆದೇಶವು 01.04.2006ರ ಪೂರ್ವದಲ್ಲಿ ಅಧಿಸೂಚನೆಯನ್ನು ಹೊರಡಿಸಿರುವ ಕುರಿತು ಪರಿಶೀಲಿಸಿ ಖಚಿತಪಡಿಸಿಕೊಂಡು ಪ್ರತಿಯನ್ನು ದೃಢೀಕರಿಸಿ ಸಲ್ಲಿಸುವುದು.

2. ಪ್ರತಿ ಶಿಕ್ಷಕರು 01.04.2006ರ ಪೂರ್ವದಲ್ಲಿ ಆಯ್ಕೆಯಾಗಿರುವ ಕುರಿತು ಆಯ್ಕೆ ಪಟ್ಟಿ ಖಚಿತಪಡಿಸಿಕೊಂಡು ಪ್ರತಿಯನ್ನು ದೃಢೀಕರಿಸಿ ಸಲ್ಲಿಸುವುದು.

3. ಖಾಯಂ ಪೂರ್ವ ಸೇವಾವಧಿಯನ್ನು ಮಂಜೂರು ಮಾಡಿರುವ ಕುರಿತು ಪರಿಶೀಲಿಸಿ ಪ್ರತಿಯನ್ನು ದೃಢೀಕರಿಸಿ ಸಲ್ಲಿಸುವುದು.

4. ಸದರಿ ಶಿಕ್ಷಕರು (ಎನ್.ಪಿ.ಎಸ್ ನಿಂದ ಒ.ಪಿ.ಎಸ್)ಗೆ ಒಳಪಡಲು ಇಚ್ಚಿಸುವ ಕುರಿತು ಸಲ್ಲಿಸಿರುವ ಅಭಿಮತ ಪತ್ರ ದೃಢೀಕರಿಸಿ ಸಲ್ಲಿಸುವುದು.

5 . ಸದರಿ ಶಿಕ್ಷಕರ ವೇತನ ಪ್ರಮಾಣ ಪತ್ರ ಪರಿಶೀಲಿಸಿ ಪ್ರತಿಯನ್ನು ದೃಢೀಕರಿಸಿ ಸಲ್ಲಿಸುವುದು.

6. ಸದರಿ ಶಿಕ್ಷಕರ ನೇಮಕಾತಿಯ ನಂತರ ಇಲಾಖೆ ಬದಲಾವಣೆಯಾಗಿದ್ದಲ್ಲಿ ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ವಿವರಗಳನ್ನು ಪತಿಯೊಂದಿಗೆ ದೃಢೀಕರಿಸಿ ಸಲ್ಲಿಸುವುದು.

7. ಸದರಿ ಶಿಕ್ಷಕರ ವಿವರಗಳನ್ನು ಲಗತ್ತಿಸಿರುವ ನಮೂನೆ-1 ಮತ್ತು ನಮೂನೆ-2ರಲ್ಲಿ NUDI 6.0 EXCEL SHEET ನಲ್ಲಿ ಈ ಕಛೇರಿಗೆ ಕಳುಹಿಸುವ ಪೂರ್ವದಲ್ಲಿ ಯಾವುದೇ ಶಿಕ್ಷಕರುಗಳ ವಿವರಗಳನ್ನು ಕೈಬಿಟ್ಟಿರುವುದಿಲ್ಲವೆಂಬುದನ್ನು ಸಹ ದೃಢೀಕರಿಸಿ ಕಳುಹಿಸುವಂತೆ ಹಾಗೂ ನಮೂನೆಗಳಲ್ಲಿ ಭರ್ತಿ ಮಾಡಿ ಸಾಫ್ಟ್ ಪ್ರತಿಯನ್ನು est4cpibng@gmail.com ಇ-ಮೇಲ್ ಮಾಡುವುದು ಮತ್ತು ಹಾರ್ಡ್ ಪ್ರತಿಯನ್ನು ಕೂಡಲೇ ಈ ಕಛೇರಿಗೆ ಸಲ್ಲಿಸಲು ಸೂಚಿಸಿದೆ.

prajaprabhat

Recent Posts

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

3 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

3 hours ago

ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…

4 hours ago

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

9 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

9 hours ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

11 hours ago