ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ‘AI’ Face Recognition ಹಾಜರಾತಿ. ಶಿಕ್ಶಣ ಇಲಾಖೆ ಆದೇಶ.!

ಬೆಂಗಳೂರು.22.ಜೂನ್.25:- ಪ್ರಸ್ತುತ ಶೈಕ್ಷಣಿಕ 2025-26ನೇ ಶೈಕ್ಷಣಿಕ ಸಾಲಿನಿಂದಲೇ ಜಾರಿ ಮಾಡುವಂತೆ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ.

ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನಿಂದ ಮಕ್ಕಳ ಹಾಜರಾತಿಗೆ ಅತ್ಯಾಧುನಿಕ (ಚಹರೆ ಗುರುತಿಸುವ ಹಾಜರಾತಿ ವ್ಯವಸ್ಥೆ) Face Recognition ತಂತ್ರಜ್ಞಾನವನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿ ಕೊಳ್ಳಲಿದ್ದಾರೆ.

ಹೌದು,’ನಿರಂತರ’ ಯೋಜನೆ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಹಾಜರಾತಿಯನ್ನು ಕೃತಕ ಬುದ್ಧಿಮತ್ತೆ ಚಾಲಿತ, ಮುಖ ಚಹರೆ ಗುರುತು ಆಧಾರಿತವಾಗಿ (ಎಐ ಫೇಶಿಯಲ್ ರಿಕಗ್ನಿಷನ್) ತೆಗೆದುಕೊಳ್ಳಲಾಗುತ್ತದೆ. ಈ ಯೋಜನೆಯು ಸುಮಾರು 5 ಕೋಟಿ ರು. ವೆಚ್ಚದ್ದಾಗಿದೆ.

ಶಿಕ್ಷಕರ ಮೊಬೈಲ್ ಆಯಪ್ ಬಳಸಿ ವಿದ್ಯಾರ್ಥಿಗಳ ಫೋಟೋ ಸೆರೆ ಹಿಡಿಯಲಾಗುತ್ತದೆ. ಫೋಟೋ ಮೂಲಕವೇ ವಿದ್ಯಾರ್ಥಿಗಳ ಹಾಜರಾತಿ ಖಚಿತಪಡಿಸುವ ವ್ಯವಸ್ಥೆ ಇರಲಿದೆ. ಇದರಿಂದ ನಕಲಿ ಹಾಜರಾತಿ ತಡೆಗೆ ಅನುಕೂಲವಾಗಲಿದೆ. ರಾಜ್ಯದ 52686 ಶಾಲೆಗಳ 52 ಲಕ್ಷ ವಿದ್ಯಾರ್ಥಿಗಳ ಹಾಜರಾತಿಗೆ ಇದನ್ನು ಬಳಕೆ ಮಾಡಲಾಗುತ್ತದೆ.

ಮೇಲೆ ಓದಲಾದ ಕ್ರಮಾಂಕ (1)ರಲ್ಲಿ 2025-26ನೇ ಸಾಲಿನಲ್ಲಿ ಸರ್ಕಾರವು ಮಂಡಿಸಿರುವ ಆಯವ್ಯಯ ಘೋಷಣೆಯ ಕಂಡಿಕೆ 112ರಲ್ಲಿ ಈ ಕೆಳಕಂಡಂತೆ ಘೋಷಣೆ ಮಾಡಲಾಗಿದೆ. ನಿರಂತರ’ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.

ಮೇಲೆ ಓದಲಾದ ಕ್ರಮಾಂಕ (2) ರಲ್ಲಿ, ‘ನಿರಂತರ’ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲು ಲೆಕ್ಕ ಶೀರ್ಷಿಕೆ 4202-01-201-1-04- ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಮೂಲಭೂತ ಸೌಕರ್ಯ (177-ಐಟಿ ವೆಚ್ಚ 500.00 ಲಕ್ಷಗಳು) ಒಟ್ಟು 500.00 ಲಕ್ಷಗಳನ್ನು ನಿಗದಿಪಡಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (3) ರಲ್ಲಿ, Centre for E-Governance, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ರವರು ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು  2- : DPI-CPIOSATS(OTH)/25/2024-SATS “Mobile-Based Al-Driven Facial Recognition Attendance System Draft RFP” ಕುರಿತು ಸಮಗ್ರವಾದ ಅಭಿಪ್ರಾಯ ನೀಡಿದ್ದು, ಸದರಿ ಅಭಿಪ್ರಾಯಗಳನ್ನು ಅಳವಡಿಸಿ, “Draft RFP” ಅನ್ನು ಪರಿಷ್ಕರಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (4) ರಲ್ಲಿ ಆಯವ್ಯಯ ಘೋಷಣೆಯ ಕಂಡಿಕೆ 112 – ‘ನಿರಂತರ’-Mobile-Based Al-Driven Facial Recognition Attendance System ಕ್ರಿಯಾಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರದ ಅನುಮೋದನೆ ಕೋರಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಈ ಮುಂದಿನಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ.

prajaprabhat

Recent Posts

ನಾಳೆಯಿಂದ ಮುಂಗಾರು ಅಧಿವೇಶನ ಆರಂಭ; ಆಡಳಿತ-ಪ್ರತಿಪಕ್ಷಗಳ ನಡುವೆ ವಾಗ್ಯುದ್ದಕ್ಕೆ ವೇದಿಕೆ ಸಜ್ಜು

ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…

2 hours ago

KSRTC ಬಸ್, ಕಾರು ಡಿಕ್ಕಿ 2 ಮೃತೀವ್

ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾ‌ರ್ ನಲ್ಲಿದ್ದ ತಂದೆ ಮಗ…

2 hours ago

ಬೆಂಗಳೂರಿನ 44 ಎಕರೆಯಲ್ಲಿ ಕೆಂಪೇಗೌಡ ಒಕ್ಕಲಿಗ ವಿ.ವಿ: ಎಚ್‌.ಎನ್‌.ಅಶೋಕ್

ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…

5 hours ago

ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶಿಕ್ಷಣ ಇಲಾಖೆಯಿಂದ ಬಿಡುಗಡೆ.

ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…

5 hours ago

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

10 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

10 hours ago