ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೂ, ಸಾಕ್ಸ್  ಭಾಗ್ಯ:ರಾಜ್ಯ ಸರ್ಕಾರ ಆದೇಶ.

ಬೆಂಗಳೂರು.24.ಜೂನ್.25:- 2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತವಾಗಿ ಶೂ ಮತ್ತು ಸಾಕ್ಸ್ ವಿತರಣೆಗೆ ಸರ್ಕಾರ ಆದೇಶಿಸಿದೆ.

2025-26ನೇ ಶೈಕ್ಷಣಿಕ ಸಾಲಿಗೆ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 40.74 ಲಕ್ಷ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ವಿತರಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮತಿ ನೀಡುವಂತೆ ಕೋರಿರುತ್ತಾರೆ.

ಮತ್ತು ಸಾಕ್ಸ್ ವಿತರಣಾ ಯೋಜನೆಯನ್ನು ರಾಜ್ಯದಲ್ಲಿನ ವಿವಿಧ ಭಾಗಗಳಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಕೆಲವು ಪರ್ಯಾಯ ಅವಕಾಶ ನೀಡುವ ಅಗತ್ಯತೆಯಿದೆ.

ಮಲೆನಾಡು ಮತ್ತು ಕರ್ನಾಟಕ ಕರಾವಳಿ ಪ್ರದೇಶದಲ್ಲಿ ವರ್ಷದಲ್ಲಿ ಮೂರರಿಂದ ನಾಲ್ಕು ತಿಂಗಳುಗಳಲ್ಲಿ ಅತಿ ಹೆಚ್ಚಿನ ಮಳೆ ಬೀಳುವುದರಿಂದ ವಿದ್ಯಾರ್ಥಿಗಳಿಗೆ ಶೂಗಳು ಸಮರ್ಪಕ ಪಾದರಕ್ಷೆ ಆಗಲಿಕ್ಕಿಲ್ಲ. ಅದೇ ರೀತಿ ಉತ್ತರ ಕರ್ನಾಟಕದ ಭಾಗದಲ್ಲಿ ಅತಿ ಹೆಚ್ಚಿನ ಉಷ್ಣಾಂಶದ ವಾತಾವರಣ ಇರುವುದರಿಂದ ಶೂ, ಸೂಕ್ತ ಪಾದರಕ್ಷೆ ಎನಿಸುವುದಿಲ್ಲ.

ವಾತಾವರಣದ ಸ್ಥಿತಿಗಳು ಮತ್ತು ಹಾಕಿಕೊಳ್ಳಲು ಹಾಗೂ ತೆಗೆಯಲು ಸುಲಭವಾಗುವ ದೃಷ್ಟಿಯಿಂದ ಇಂತಹ ಭಾಗದಲ್ಲಿನ ವಿದ್ಯಾರ್ಥಿಗಳು ಶೂಗಳ ಬದಲಾಗಿ ಪಾದರಕ್ಷೆ ಧರಿಸಲು ಬಯಸುವುದನ್ನು ಗಮನಿಸಿದೆ. ಈ ನಮ್ಯತೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ತೀರ್ಮಾನಕ್ಕೆ ಬಿಡಲು ನಿರ್ಧರಿಸಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025-26ನೇ ಶೈಕ್ಷಣಿಕ ಸಾಲಿಗೆ ರಾಜ್ಯದಲ್ಲಿನ ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲ್ಪಡುತ್ತಿರುವ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 40.68ಲಕ್ಷ ವಿದ್ಯಾರ್ಥಿಗಳಿಗೆ 2025-26ನೇ ಸಾಲಿನ ಆಯವ್ಯಯ ಲೆಕ್ಕ ಶೀರ್ಷಿಕೆ:2202-01-109-0-03 Vidya Vikasa Scheme for Students Incentive for Students ರಡಿ ನಿಗಧಿಪಡಿಸಿರುವ ರೂ.41000.00 ಲಕ್ಷಗಳ ಅನುದಾನದಿಂದ ರೂ.11188.00 ಲಕ್ಷಗಳ ವೆಚ್ಚದಲ್ಲಿ ಉಚಿತವಾಗಿ 01 ಜೊತೆ ಶೂ ಮತ್ತು 02 ಜೊತೆ ಸಾಕ್ಸ್‌ಗಳನ್ನು ಒದಗಿಸಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಇವರಿಗೆ ಈ ಕೆಳಕಂಡ ಷರತ್ತು ಮತ್ತು ನಿಬಂಧನೆಗಳ ಪಾಲನೆಗೆ ಒಳಪಟ್ಟು ಅನುಮತಿ ನೀಡಿ ಆದೇಶಿಸಿದ್ದಾರೆ.

prajaprabhat

Recent Posts

‘ಹರ ಘರ ತಿರಂಗಾ”ಕಾರ್ಯಕ್ರಮ

ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…

9 hours ago

ಸ್ವಾತಂತ್ರ್ಯ ಭಾರತದೊಳಗೆ ಇರುವ ಸಮಸ್ಯೆಗಳು.

                          ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…

11 hours ago

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

18 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

21 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

21 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

21 hours ago