|

ಸರ್ಕಾರಿ ಶಾಲೆಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗೆ 2,000 ರೂ. ಠೇವಣಿ

ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನು ವೃದ್ಧಿಸಲು ರಾಜ್ಯ ಸರ್ಕಾರ ವಿಶೇಷ ಕ್ರಮ ಅನುಸರಿಸಲಾಗಿದ್ದು, ಬಾಗಲಕೋಟೆ ಜಿಲ್ಲೆಯ ಉತ್ತೂರು, ಶಿರೋಳ, ಹನಗಂಡಿ ಸೇರಿ ವಿವಿಧ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಗೆ ಸೇರುವ ಮಕ್ಕಳಿಗೆ 1 ಸಾವಿರದಿಂದ 2 ಸಾವಿರ ರೂ.ವರೆಗೆ ‘ಠೇವಣಿ’ಇಡುವ ಯೋಜನೆ ಜಾರಿಗೊಳಿಸಲಾಗಿದೆ.

ಉತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ ಏಳನೇ ತರಗತಿಯವರೆಗೆ 175 ಮಕ್ಕಳು ಓದುತ್ತಿದ್ದು ತಾವು ಓದಿದ ಶಾಲೆಗೆ ಇತ್ತೀಚೆಗೆ ಭೇಟಿ ನೀಡಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಒಂದನೇ ತರಗತಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗೆ 2,000 ರೂ. ಠೇವಣಿ ಇಡಲಾಗುವುದು ಎಂದು ಘೋಷಿಸಿದ್ದಾರೆ.

ಶಿರೋಳದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ 205 ವಿದ್ಯಾರ್ಥಿಗಳಿದ್ದಾರೆ, ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಲು ಶಾಲಾ ಅಭಿವೃದ್ಧಿ ಸಮಿತಿ ಮೊದಲನೇ ತರಗತಿಗೆ ದಾಖಲಾಗುವ ಪ್ರತಿ ಮಗುವಿನ ಹೆಸರಲ್ಲಿ 1000 ರೂ. ಠೇವಣಿ ಇಡಲು ನಿರ್ಧರಿಸಿದೆ.

ಹನಗಂಡಿಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಮತ್ತು ಲಿಂಗನೂರ ಶಾಲೆಯ ಎಸ್ಡಿಎಂಸಿ ಸದಸ್ಯರು ಮಕ್ಕಳ ಹೆಸರಲ್ಲಿ ಠೇವಣಿ ಇಡಲು ನಿರ್ಧರಿಸಿದ್ದಾರೆ,

Similar Posts

Leave a Reply

Your email address will not be published. Required fields are marked *