ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಹೆಚ್ಚಳಕ್ಕೆ 5 ಮಾರ್ಗಸೂಚಿ : ಸರ್ಕಾರ ಆದೇಶ.!

ಬೆಂಗಳೂರು.03.ಜೂನ್.25:- ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಫಲಿತಾಂಶ ಹೆಚ್ಚಿಸಲು ರಾಜ್ಯ ಸರ್ಕಾರವು 5 ಅಂಶಗಳ ಮಾರ್ಗಸೂಚಿಯ ಸುತ್ತೋಲೆ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸರ್ಕಾರಿ ಶಾಲೆಗಳಲ್ಲಿ ಶಾಲೆಯ ಸಮಯದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲೆಯಲ್ಲಿಯೇ ಹಾಜರಿದ್ದು, ಶಿಕ್ಷಣದ ಹಕ್ಕು ಕಾಯಿದೆಯ ಅಡಿಯಲ್ಲಿ ಪ್ರತಿದಿನ ಶಾಲೆಯ ಹಂತದಲ್ಲಿ ಭೋಧನೆ ಮತ್ತು ಕಲಿಕೆ ನಡೆಸಲು ಅನುವಾಗಬೇಕು.

ಸರ್ಕಾರಿ ಶಾಲೆಗಳಲ್ಲಿ ಕಲಿಕೆ ಫಲಿತಾಂಶಗಳನ್ನು ಸುಧಾರಿಸಲು ಮತ್ತು ಉತ್ತಮ ಬೋಧನೆ ನೀಡಲು ಶಿಕ್ಷಕರೂ ಹಾಗೂ ಶಾಲಾ ಮುಖ್ಯೋಪಾಧ್ಯಾಯರೂ ಸಂಪೂರ್ಣವಾಗಿ ಶಾಲೆಯಲ್ಲಿ ಹಾಜರಿರುವುದು ಅತ್ಯಂತ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಎಲ್ಲಾ ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು. ಡಯಟ್ ಪ್ರಾಂಶುಪಾಲರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ರಾಜ್ಯ ಹಾಗೂ ಜಿಲ್ಲೆಯಲ್ಲಿ ಇರುವ ಎಲ್ಲಾ ಅಧಿಕಾರಿಗಳು/ಸಿಬ್ಬಂದಿಗಳು ಈ ಕೆಳಗಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ನಿರ್ದೇಶಿಸಲಾಗಿದೆ:

i) ಯಾವುದೇ ಶಿಕ್ಷಕರನ್ನು/ಶಾಲಾ ಮುಖ್ಯೋಪಾಧ್ಯಾಯರನ್ನು ಯಾವುದೇ ತರಬೇತಿ ಕಾರ್ಯಕ್ರಮಗಳಿಗೆ, ಕಾರ್ಯಾಗಾರಗಳಿಗೆ ಸಭೆಗಳಿಗೆ ಇತರೆ ಚಟುವಟಿಕೆಗಳಿಗೆ ಶಾಲಾ ದಿನಗಳಲ್ಲಿ, ಶಾಲಾ ಸಮಯದಲ್ಲಿ ನಿಯೋಜನೆ/ಓ.ಓ.ಡಿ, ಮೌಖಿಕ ಅಥವಾ ಲಿಖಿತ ಆದೇಶಗಳ ಮೂಲಕ ಕಳುಹಿಸಬಾರದು. ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಹ ಇಂತಹ ನಿರ್ದೇಶನಗಳನ್ನು ನೀಡಬಾರದು.

ii) ಶಾಲಾ ಸಮಯದಲ್ಲಿ ಶಾಲಾ ಶಿಕ್ಷಕರು ಮತ್ತು ಶಾಲಾ ಮುಖ್ಯೋಪಾಧ್ಯಾಯರ ಯಾವುದೇ ಸಭೆಗಳನ್ನು ಕರೆಯಬಾರದು ಅಥವಾ ವಿಡಿಯೋ ಕಾನ್ಸರೆನ್ಸ್ (video conference) ಮಾಡಬಾರದು. ಶಾಲೆಗಳನ್ನು ಭೇಟಿ ನೀಡುವ ಯಾವುದೇ ಅಧಿಕಾರಿಗಳು ಶಾಲೆಯ ನಡೆದುಕೊಳ್ಳತಕ್ಕದ್ದು. ತರಗತಿಗಳಿಗೆ ತೊಂದರೆಯಾಗದಂತೆ

iii) ಯಾವುದೇ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಅವರ ಶಾಲೆಯ ಹೊರಗಡೆ ವಿವಿಧ ಕಾರ್ಯಕ್ರಮಗಳ ಪ್ರೇಕ್ಷಕರಾಗಿ ಭಾಗವಹಿಸಲು ಅಥವಾ ಕರೆದುಕೊಂಡು ಹೋಗಲು ನಿರ್ದೇಶಿಸಬಾರದು.

iv) ಶಾಲಾ ದಿನಗಳಲ್ಲಿ ಯಾವುದೇ ಬಾಹ್ಯ ಪರೀಕ್ಷೆಗಳನ್ನು (ಉದಾ: ಕರ್ನಾಟಕ ಲೋಕಸೇವಾ ಆಯೋಗ (KPSC) ಅಥವಾ ಇತರ ರಾಜ್ಯ/ಕೇಂದ್ರ ಸರ್ಕಾರ/ಖಾಸಗಿ ಸಂಸ್ಥೆಗಳು ನಡೆಸುವ ಪರೀಕ್ಷೆಗಳು) ಶಾಲೆಯ ಆವರಣದಲ್ಲಿ ನಡೆಸಬಾರದು. ಈ ನಿಬಂಧನೆಯನ್ನು ಉಲ್ಲಂಘಿಸಿದ ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಯಟ್ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಇಂತಹ ಪರೀಕ್ಷೆಗಳನ್ನು ನಡೆಸಲು ಅವಕಾಶ ನೀಡಬೇಕಾದ್ದಲ್ಲಿ, ಅದು ಸಾರ್ವಜನಿಕ ರಜೆ ಅಥವಾ ಬೇಸಿಗೆ ರಜೆಯ ಸಮಯದಲ್ಲಿ ಮಾತ್ರ ನಿಯಮಗಳಂತೆ ನೀಡುವುದು.

v) ಜಿಲ್ಲಾ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು. ಡಯಟ್ ಪ್ರಾಂಶುಪಾಲರು, ಶಾಲಾ ಮುಖ್ಯೋಪಾಧ್ಯಾಯರ ಇಲಾಖೆಯ ಯಾವುದೇ ಮಟ್ಟದ ಅಧಿಕಾರಿಗಳು ಖಾಸಗಿ ಸಂಸ್ಥೆಗಳ ಅಥವಾ ಯಾವುದೇ ಜ್ಞಾನ ಪಾಲುದಾರರು ಸಾಫ್ಟ್ವೇರ್ಗಳಲ್ಲಿ ಡೇಟಾ ಎಂಟ್ರಿ ಮಾಡುವಂತೆ ಶಿಕ್ಷಕರು ಅಥವಾ ಶಾಲಾ ಮುಖ್ಯೋಪಾಧ್ಯಾಯರಿಗೆ ಮೌಖಿಕ ಅಥವಾ ಲಿಖಿತ ಆದೇಶ ನೀಡಬಾರದು. ಇಂತಹ ಆದೇಶ ನೀಡುವ ಯಾವುದೇ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು.

ಈ ಮಾರ್ಗಸೂಚಿಗಳು ಮತ್ತು ನಿರ್ದೇಶನಗಳು ತಕ್ಷಣದಿಂದ ಜಾರಿಗೆ ಬರುತ್ತವೆ.

prajaprabhat

Recent Posts

ಬೀದರ | ಪ್ರವೇಶಾತಿ ಅವಧಿ ವಿಸ್ತರಣೆ

ಬೀದರ.06.ಜುಲೈ.25:-  ಬೀದರ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲಾ ಸಂಯೋಜಿತ ಸ್ನಾತಕ ಮಹಾವಿದ್ಯಾಲಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಬಿ.ಎ/ಬಿ.ಎಸ್ಸಿ/ಬಿ.ಕಾಂ ಬಿ.ಬಿ.ಎ/ಬಿ.ಸಿ.ಎ ಮತ್ತು…

24 minutes ago

ಘೋಡಂಪಳ್ಳಿ ದುರಂತ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ

ಬೀದರ.06.ಜುಲೈ.25:- ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ 7 ಪ್ರಯಾಣಿಕರಿದ್ದ ಗೂಡ್ಸ್ ವಾಹನ ತೆರೆಯಲ್ಪಟ್ಟ ಬಾವಿಗೆ ಬಿದ್ದು, ಇಬ್ಬರು ಮೃತರಾಗಿರುವ ದುಃಖದ…

26 minutes ago

ಅಂಗನವಾಡಿ ಕೇಂದ್ರ, ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೀದರ.06.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ…

33 minutes ago

ಘೋಡಂಪಳ್ಳಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ ಬಿ.ಖಂಡ್ರೆ ಭೇಟಿ

ಬೀದರ.06.ಜುಲೈ.25:- ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರಿಂದು ಬೀದರ್ ತಾಲೂಕಿನ…

40 minutes ago

ವಿದ್ಯುತ್ ಸಂಬoಧಿತ ದೂರುಗಳಿಗೆ: ಈ ನಂಬರಗಳಿಗೆ ಸಂಪರ್ಕಿಸಿ ಸಮಸ್ಯಗಳಿಗೆ ಪರಿಹಾರ ಕಂಡುಕೊಳ್ಳಿ

ಬೀದರ. ಜುಲೈ.25:- ಜೆಸ್ಕಾಂ, ಬೀದರ ವೃತ್ತ ವ್ಯಾಪ್ತಿಯ ಸಾರ್ವಜನಿಕ ವಿದ್ಯುತ್ ಗ್ರಾಹಕರಿಗೆ ಅನುಕೂಲವಾಗುವಂತೆ ಈಗಾಗಲೇ ಟೋಲ್ ಫ್ರೀ ನಂಬರ 1912…

1 hour ago

ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.05.ಜುಲೈ.25:- ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ.) ಜನವಾಡಾ ಶಾಲೆಯಲ್ಲಿ ಖಾಲಿ ಇರುವ 7ನೇ, 8ನೇ ಹಾಗೂ 9ನೇ ತರಗತಿಗಳಿಗೆ ಪ್ರವೇಶಕ್ಕೆ…

13 hours ago