ಬೆಂಗಳೂರು.25.ಜೂನ್.25:-ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ.1.00 ಲಕ್ಷದಂತೆ ಸರ್ಕಾರದಿಂದ ಪ್ರೋತ್ಸಾಹಧನವನ್ನು ನೀಡಲು ತೀರ್ಮಾನಿಸಿದೆ.
2025-26 ನೇ ಸಾಲಿನಲ್ಲಿ ನಮ್ಮ ಯುವಜನರು ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ.ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿರುವ ಕ್ರೀಡಾಪಟುಗಳನ್ನು ಹೊಂದಿರುವ.
ಸದರಿ ಅನುದಾನದಲ್ಲಿ ರೂ.10000/-ಗಳನ್ನು ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಮತ್ತು ರೂ.90000/- ಗಳನ್ನು ಶಾಲೆಯ ಎಸ್.ಡಿ.ಎಂ.ಸಿ. ಗೆ ಅಗತ್ಯ ಕ್ರೀಡಾ ಸಾಮಗ್ರಿಗಳನ್ನು ಖರೀದಿ ಮಾಡಲು ಉಲ್ಲೇಖಿತ ಪತ್ರದನ್ವಯ ಸೂಚಿಸಲಾಗಿರುತ್ತದೆ. ಈ ಹಿನ್ನಲೆಯಲ್ಲಿ 2024-25 ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿರುವ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳನ್ನು ಹೊಂದಿದ ಸರ್ಕಾರಿ ಶಾಲೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಸರ್ಕಾರಿ ಶಾಲೆಗಳು ದಿ:25-06-
2025 ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣ, ಗದಗ ಇಲ್ಲಿ ಲಿಖಿತವಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ದೂರವಾಣಿ ಸಂಖ್ಯೆ 08372-238345 ಗೆ ಸಂಪರ್ಕಿಸಲು ಕೋರಲಾಗಿದೆ.
ಬೆಂಗಳೂರು.15.ಆಗಸ್ಟ್.25:- ರಾಜ್ಯದಲ್ಲಿ ಖಾಯಂ ಶಿಕ್ಷಕರು ತುಂಬಿ ಇಲ್ಲದ ಕಾರಣ 2025-26 ಶೈಕ್ಷಣಿಕ ವರ್ಷದಲ್ಲಿ ಮೊದಲನೇ ಹಂತದಲ್ಲಿ ಜಿಲ್ಲಾವಾರು ಬೇಡಿಕೆಗೆ ಅನುಗುಣವಾಗಿ…
ಬೆಂಗಳೂರು.15.ಆಗಸ್ಟ್.25:- ರಾಜ್ಯ ಸರ್ಕಾರ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಗಳಲ್ಲಿ ಅತಿಥಿ ಶಿಕ್ಷಕರ ತಾತ್ಕಾಲಿಕ ವ್ಯವಸ್ಥೆ ಅತಿಥಿ ಶಿಕ್ಷಕರ ನೇಮಕ…
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…