ಭಾಲ್ಕಿ.16.ಫೆ.25:- ಬೀದರ್ ಜಿಲ್ಲೆಯ ಭಾಲ್ಕಿ ನಗರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಾಲ್ಕಿ ಹಾಗೂ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ಭಾಲ್ಕಿ ವತಿಯಿಂದ ನೂತನವಾಗಿ ನೇಮಕವಾದ ಜಿ.ಪಿ.ಟಿ ಶಿಕ್ಷಕರಿಗೆ ಸ್ವಾಗತ ಸಮಾರಂಭ ಹಾಗೂ ಶಿಕ್ಷಕರ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮ ಪಟ್ಟಣದ ಬಿ.ಅರ್.ಸಿ ಕಚೇರಿಯಲ್ಲಿ ನಡೆಯಿತು.
ಕ್ಷೇತ್ರ ಸಮನ್ವಯಾಧಿಕಾರಿಗಳಾದ ಮನೋಹರ ಹೋಳ್ಕರ್ ರವರು ಮಾತನಾಡಿ ಸರ್ಕಾರಿ ಶಾಲೆ ಮಕ್ಕಳ ಗುಣಮಟ್ಟದ ಶಿಕ್ಷಣಕ್ಕಾಗಿ ಎಲ್ಲರೂ ಚನ್ನಾಗಿ ಕೆಲಸ ಮಾಡಬೇಕು ಇದರಲ್ಲಿ ಜಿಪಿಟಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು,
ಸಂಘದ ತಾಲ್ಲೂಕ ಅಧ್ಯಕ್ಷರು ಆದ ಉತ್ತಮ ಶಿಂದೆ ಅವರು ಮಾತನಾಡಿ ಪ್ರತಿಯೊಬ್ಬ ಶಿಕ್ಷಕರು ಉತ್ತಮವಾಗಿ ಕೆಲಸ ನಿರ್ವಹಿಸಿ ನಿರ್ಭಿತಿಯಿಂದ ಕೆಲಸ ಮಾಡೋಣ ಎಂದು ಹೇಳಿದರು.
ಇದೆ ಸಂದರ್ಭದಲ್ಲಿ ಸಂಘದ ವತಿಯಿಂದ ನೂತನ ಶಿಕ್ಷಕರ ಸ್ವಾಗತ ಸಮಾರಂಭ ಹಾಗೂ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮ ನಡೆಯಿತು, ವೇದಿಕೆ ಮೇಲಿರುವ ಗಣ್ಯರು ಸಂಘದ ಕೆಲಸವನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರು ಆದ ನಿರಂಜಪ್ಪ ಪಾತ್ರೆ, ಬಸವರಾಜ ದಾನಾ, ಪ್ರಾಥಮಿಕ ಶಿಕ್ಷಕರ ಸಂಘದ ತಾಲ್ಲೂಕ ಅಧ್ಯಕ್ಷರು ಆದ ಸೂರ್ಯಕಾಂತ ಸುಂಟೆ, ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿಗಳು ಆದ ರಾಜಪ್ಪ ಪಾಟೀಲ, ಪ್ರೌಢ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿಗಳು ಆದ ಬಾಲಾಜಿ ಕಾಂಬಳೆ, SC/ST “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ”ಸಮನ್ವಯ ಸಮಿತಿ ಕಾರ್ಯದರ್ಶಿಗಳಾದ ಸತ್ಯವಾನ ಕಾಂಬಳೆ ಇದ್ದರು, ಕಾರ್ಯಕ್ರಮದ ನಿರೂಪಣೆ ರಾಜು ಆಶೆಪ್ಪನೋರ್,ಪವನ ಅವರು ಅತಿಥಿಗಳಿಗೆ ಸ್ವಾಗತ ಹಾಗೂ ವಂದನಾರ್ಪಣೆ ದ್ಯಾವಣ್ಣ ಬೈಚಾಬಾಳ ಮಾಡಿದರು ಹಾಗೂ ತಾಲ್ಲೂಕಿನ ಪದವೀಧರ ಪ್ರಾಥಮಿಕ ಶಿಕ್ಷಕರು ಹಾಜರಿದ್ದರು.
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…