ಔರಾದ್ (ಬಾ): ಬೀದರ ಜೆಲ್ಲೆಯ ಔರಾದ ತಾಲೂಕಾ ಶಾಸಕ ಪ್ರಭು ಚವಾಣ್ ಅವರು ಗ್ರಾಮ ಸಂಚಾರದ ವೇಳೆ ಅನೇಕ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದ್ದೇನೆ. 7-8ನೇ ತರಗತಿ ಮಕ್ಕಳಿಗೆ ಸರಿಯಾಗಿ ಓದಲು, ಬರೆಯಲು ಬರಲ್ಲ. ಪ್ರಾಥಮಿಕ ಹಂತದಲ್ಲಿ ಈ ರೀತಿ ಅವ್ಯವಸ್ಥೆಯಾದರೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೇಗೆ ಸುಧಾರಿಸುತ್ತದೆ’ ಎಂದು ಶಿಕ್ಷಣಾಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಔರಾದ್ ತಾಲ್ಲೂಕಿನ ಬೋಂತಿ ತಾಂಡಾದಲ್ಲಿ ಶನಿವಾರ ನಡೆದ ಶಿಕ್ಷಣ ಇಲಾಖೆಯ ಬಿಆರ್‌ಪಿ, ಸಿಆರ್‌ಪಿ, ಇಸಿಒಗಳ ಸಭೆಯಲ್ಲಿ ಮಾತನಾಡಿದ ಅವರು, ‘ಇನ್ನು ಮುಂದೆ ಏನು ಕ್ರಮ ಕೈಗೊಳ್ಳುತ್ತಿರೋ ಗೊತ್ತಿಲ್ಲ. ಶಿಕ್ಷಣ ವ್ಯವಸ್ಥೆ ಸುಧಾರಿಸಬೇಕು. ಮಕ್ಕಳ ದಾಖಲಾತಿ ಹೆಚ್ಚಿಸಬೇಕು’ ಎಂದು ತಾಕೀತು ಮಾಡಿದರು.
‘ಕೆಲ ಶಿಕ್ಷಕರು ಸಮಯಕ್ಕೆ ಸರಿಯಾಗಿ ಶಾಲೆಗೆ ಬರುತ್ತಿಲ್ಲ. ತಾಂಡಾಗಳ ಶಾಲೆ ಸ್ಥಿತಿಯಂತೂ ಹೇಳತೀರದಾಗಿದೆ. ಈಗ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿದೆ. ಎಲ್ಲರೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಪದೇಪದೆ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಬೇಕು. ಅಗತ್ಯ ಬಿದ್ದರೆ ಹೆಚ್ಚುವರಿ ತರಗತಿ ನಡೆಸಬೇಕು’ ಎಂದು ಸಲಹೆ ನೀಡಿದರು.
‘ನಿರಂತರವಾಗಿ ಸೂಚನೆ ನೀಡಿದರೂ ಸರ್ಕಾರಿ ಶಾಲೆಗಳ ಸ್ಥಿತಿ ಸುಧಾರಿಸದಿದ್ದರೆ ಇದಕ್ಕೆ ಕಾರಣರಾದ ಅಧಿಕಾರಿಗಳು, ಶಿಕ್ಷಕರನ್ನು ದೂರದ ಜಿಲ್ಲೆಗಳಿಗೆ ವರ್ಗಾವಣೆ ಮಾಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ರಂಗೇಶ, ಕ್ಷೇತ್ರ ಸಮನ್ವಯಾಧಿಕಾರಿ ಪ್ರಕಾಶ ರಾಠೋಡ್, ಪಂಢರಿ ಆಡೆ, ಧೂಳಪ್ಪ, ವಿದ್ಯಾಸಾಗರ, ವಿಶ್ವನಾಥ ಬಿರಾದಾರ, ಬಸವರಾಜ ಪಾಟೀಲ ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಇದ್ದರು.
ಶಾಸಕರು ಗ್ರಾಮ ಸಂಚಾರ್ ಮತ್ತು ಗ್ರಾಮ ವಾಸ್ತವ್ಯ ಮಡಿ ಜನರ ಸಮಸ್ಯೆಗಳಿಗೆ ಸ್ಪಂದಿಸ್ರು.
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…