Home » ಲೈವ್ ನ್ಯೂಸ್ » ಸರ್ಕಾರಿ ಶಾಲೆ ಶಿಕ್ಷಕರಿಗೆ ಟಿಇಟಿ ಕಡ್ಡಾಯ ವಿರೋಧಿಸಿ ಜ. 8ರಂದು ಕಪ್ಪು ಪಟ್ಟಿ ಧರಿಸಿ ಸೇವೆ

ಸರ್ಕಾರಿ ಶಾಲೆ ಶಿಕ್ಷಕರಿಗೆ ಟಿಇಟಿ ಕಡ್ಡಾಯ ವಿರೋಧಿಸಿ ಜ. 8ರಂದು ಕಪ್ಪು ಪಟ್ಟಿ ಧರಿಸಿ ಸೇವೆ

Facebook
X
WhatsApp
Telegram

ಬೆಂಗಳೂರು.06.ಜನವರಿ.26: ಸೇವಾನಿರತ ಶಿಕ್ಷಕರಿಗೆ TET  ಕಡ್ಡಾಯ ಮಾಡಿದ ಸುಪ್ರೀಂ ಕೋರ್ಟ್ ಆದೇಶ ಪಾಲನೆಯಿಂದ ಪಾರಾಗಲು ಸೂಕ್ತ ಕಾನೂನು ತಿದ್ದುಪಡಿ ತಂದು ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಮುಂಬರುವ ಜನವರಿ 8ರಂದು ರಾಜ್ಯಾದ್ಯಂತ ಶಿಕ್ಷಕರು ತರಗತಿಯಲ್ಲಿ ಕಪ್ಪು ಪಟ್ಟಿ ಧರಿಸಿ ಪಾಠ ಮಾಡುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿದೆ.

ಅಖಿಲ ಭಾರತ ಶಿಕ್ಷಕರ ಫೆಡರೇಶನ್ ನೇತೃತ್ವದಲ್ಲಿ ರಚನೆಯಾಗಿರುವ ಅಖಿಲ ಭಾರತ ಶಿಕ್ಷಕರ ಸಂಘಟನೆಯ ಜಂಟಿ ಕ್ರಿಯಾ ಸಮಿತಿ ದೇಶಾದ್ಯಂತ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಜನವರಿ 8ರಂದು ಪಾಠ ಮಾಡಲು ತೀರ್ಮಾನಿಸಲಾಗಿದೆ. ಅದರಂತೆ ರಾಜ್ಯದಲ್ಲಿಯೂ ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಪಾಠ ಮಾಡುವ ಮೂಲಕ ಹೋರಾಟಕ್ಕೆ ಬೆಂಬಲ ನೀಡಬೇಕೆಂದು ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ.

ಸೇವಾನಿರತ ಶಿಕ್ಷಕರಿಗೆ ಟಿಇಟಿ ಕಡ್ಡಾಯ ನಿಯಮ ಸಡಿಲಗೊಳಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ. ಸುಪ್ರೀಂ ಕೋರ್ಟ್ ಆದೇಶ ಪುನರ್ ಪರಿಶೀಲನೆ ಸಲ್ಲಿಸಿ ಕಾನೂನು ಹೋರಾಟ ಒಂದು ಕಡೆ, ಮತ್ತೊಂದು ಕಡೆ ಸರ್ಕಾರ ಹಾಲಿ ಶಿಕ್ಷಕರಿಗೆ ನ್ಯಾಯ ಒದಗಿಸಲು ಸೂಕ್ತ ಕಾನೂನು ತಿದ್ದುಪಡಿ ತರಬೇಕಿದೆ. ಇದರೊಂದಿಗೆ ಹಳೆಯ ಪಿಂಚಣಿ ಜಾರಿಗೊಳಿಸಬೇಕು. ಗುತ್ತಿಗೆ ಆಧಾರದಲ್ಲಿ ಶಿಕ್ಷಕರ ನೇಮಕ ಕೈ ಬಿಟ್ಟು ಕಾಯಂ ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು. ದೇಶಾದ್ಯಂತ ಎಲ್ಲ ಶಿಕ್ಷಕರಿಗೆ ಏಕರೂಪದ ವೇತನ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology