ಸರ್ಕಾರಿ ಸಿಬ್ಬಂದಿಗಳ HRMS ತಂತ್ರಾಂಶದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು.11.ಮೇ.25:- ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳ ಸೇವಾ ವಿವರಗಳನ್ನು HRMS ಹೆಚ್.ಆರ್.ಎಂ.ಎಸ್ ತಂತ್ರಾಂಶದ ವಿದ್ಯುನ್ಮಾನ ಸೇವಾ ವಹಿಯ (Electronic Service Register-ESR) ಸ್ವರೂಪದಲ್ಲಿ ದಾಖಲಿಸಿ ನಿರ್ವಹಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸೇವೆಯಲ್ಲಿರುವ ಎಲ್ಲಾ

Non Gazetted:

Group B

Group C

Group D

ಅಧಿಕಾರಿ/ಸಿಬ್ಬಂದಿಗಳ ಸೇವಾ ವಹಿಯನ್ನು HRMS ಹೆಚ್.ಆರ್.ಎಂ.ಎಸ್-2 ಯೋಜನೆಯ ಭಾಗವಾಗಿರುವ ವಿದ್ಯುನ್ಮಾನ ಸೇವಾ ವಹಿಯ (Electronic Service Register-ESR) ನಲ್ಲಿಯೇ ಅನುಷ್ಠಾನಗೊಳಿಸಲು ನಿರ್ದೇಶನ ನೀಡಲಾಗಿದೆ.

ಹೆಚ್.ಆ‌ರ್.ಎಂ.ಎಸ್-2.0 ರಲ್ಲಿ ಅನುಷ್ಠಾನಗೊಳಿಸುವ ಸಂಬಂಧ, ವಿದ್ಯುನ್ಮಾನ ಸೇವಾ ವಹಿಯನ್ನು ಸಿದ್ಧಪಡಿಸಲಾಗಿದೆ. ಈ ತಂತ್ರಾಂಶವು ನೌಕರಸ್ನೇಹಿಯಾಗಿದೆ. ನಿರ್ವಹಣೆಯೂ ಬಹಳ ಸರಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸೇವೆಗೆ ನೇಮಕಗೊಂಡಿರುವ ಎಲ್ಲಾ ಅಧಿಕಾರಿ/ನೌಕರರ ಸೇವಾ ವಿವರಗಳ ಮಾಹಿತಿಯು ಈಗಾಗಲೇ ಹೆಚ್.ಆ‌ರ್.ಎಂ.ಎಸ್-1.0 ತಂತ್ರಾಂಶದಲ್ಲಿ ಲಭ್ಯವಿದ್ದು, ಸದರಿ ಮಾಹಿತಿಯನ್ನು ವಿದ್ಯುನ್ಮಾನ ಸೇವಾ ವಹಿಗೆ (ESR) ವರ್ಗಾಯಿಸಲು ಕೂಡ ಈ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ. ಎಲ್ಲಾ ಸಿಬ್ಬಂದಿಗಳ ಸೇವಾ ವಹಿಗಳನ್ನು ESR ಗೆ ಬದಲಾಯಿಸಿ ಮುಂದೆ ESR ನಲ್ಲಿಯೇ ಮುಂದುವರೆಸುವಂತೆ ತಿಳಿಸಲಾಗಿದೆ.

ಸದರಿ ಮಾಹಿತಿಯನ್ನು ವರ್ಗಾಯಿಸಿದ ನಂತರ ESR ನಲ್ಲಿ ಯಾವುದೇ ತಿದ್ದುಪಡಿ ಮಾಡುವ ಅವಕಾಶವಿಲ್ಲದಿರುವ ಕಾರಣ ಹೆಚ್.ಆರ್.ಎಂ.ಎಸ್-1.0 ತಂತ್ರಾಂಶದಲ್ಲಿ ಲಭ್ಯವಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಸರ್ಕಾರಿ ಅಧಿಕಾರಿ/ಸಿಬ್ಬಂದಿಗಳ ಸೇವಾ ವಹಿಯ ಪೂರ್ಣ ಮಾಹಿತಿಯನ್ನು ಕೂಡಲೇ ಪರಿಶೀಲಿಸಿ, ಅವಶ್ಯಕತೆ ಇದ್ದಲ್ಲಿ ಸರಿಪಡಿಸುವಂತೆ ಹಾಗೂ ಸೇರಿಸಲು ಸೂಚಿಸಲಾಗಿದೆ.

ಎಲ್ಲಾ ಸರ್ಕಾರಿ ಅಧಿಕಾರಿ/ಸಿಬ್ಬಂದಿಗಳ ಸೇವಾ ವಹಿಯ ಪೂರ್ಣ ಮಾಹಿತಿಯನ್ನು ESR ಗೆ ವರ್ಗಾಯಿಸುವ ಪೂರ್ಣ ಜವಾಬ್ದಾರಿಯು Drawing and Disbursing Officer ಆಗಿರುತ್ತದೆ. ESR ಸುಗಮ ಮತ್ತು ಪರಿಣಾಮಕಾರಿ ಅನುಷ್ಠಾನ ಉದ್ದೇಶಕ್ಕಾಗಿ ಎಲ್ಲಾ Drawing and Disbursing Officers ಅಧಿಕಾರಿಗಳಿಗೆ ಕೆಳಕಂಡಂತೆ ತರಬೇತಿಯನ್ನು ಆಯೋಜಿಸಲಾಗಿದೆ.

prajaprabhat

Recent Posts

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

7 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

10 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

10 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

10 hours ago

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

17 hours ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

17 hours ago