ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ‘AI’ ಫೇಸ್ ರೆಕಗ್ನಿಷನ್ ಹಾಜರಾತಿ ಕಡ್ಡಾಯ.ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.23.ಜೂನ್.25:- 2025-26  ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಮಕ್ಕಳ ಹಾಜರಾತಿಗೆ ಅತ್ಯಾಧುನಿಕ (Face Recognition Attendance ) ತಂತ್ರಜ್ಞಾನವನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದ್ದು, ರಾಜ್ಯಾಧ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿ ಕೊಳ್ಳಲಿದ್ದಾರೆ.

ಹೌದು,’ನಿರಂತರ’ ಯೋಜನೆ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಹಾಜರಾತಿಯನ್ನು ಕೃತಕ ಬುದ್ಧಿಮತ್ತೆ ಚಾಲಿತ, ಮುಖ ಚಹರೆ ಗುರುತು ಆಧಾರಿತವಾಗಿ (ಎಐ ಫೇಶಿಯಲ್ ರಿಕಗ್ನಿಷನ್) ತೆಗೆದುಕೊಳ್ಳಲಾಗುತ್ತದೆ. ಈ ಯೋಜನೆಯು ಸುಮಾರು 5 ಕೋಟಿ ರು. ವೆಚ್ಚದ್ದಾಗಿದೆ.

ಶಿಕ್ಷಕರ ಮೊಬೈಲ್ ಆಯಪ್ ಬಳಸಿ ವಿದ್ಯಾರ್ಥಿಗಳ ಫೋಟೋ ಸೆರೆ ಹಿಡಿಯಲಾಗುತ್ತದೆ. ಫೋಟೋ ಮೂಲಕವೇ ವಿದ್ಯಾರ್ಥಿಗಳ ಹಾಜರಾತಿ ಖಚಿತಪಡಿಸುವ ವ್ಯವಸ್ಥೆ ಇರಲಿದೆ. ಇದರಿಂದ ನಕಲಿ ಹಾಜರಾತಿ ತಡೆಗೆ ಅನುಕೂಲವಾಗಲಿದೆ. ರಾಜ್ಯದ 52686 ಶಾಲೆಗಳ 52 ಲಕ್ಷ ವಿದ್ಯಾರ್ಥಿಗಳ ಹಾಜರಾತಿಗೆ ಇದನ್ನು ಬಳಕೆ ಮಾಡಲಾಗುತ್ತದೆ.

ಮೇಲೆ ಓದಲಾದ ಕ್ರಮಾಂಕ (1)ರಲ್ಲಿ 2025-26ನೇ ಸಾಲಿನಲ್ಲಿ ಸರ್ಕಾರವು ಮಂಡಿಸಿರುವ ಆಯವ್ಯಯ ಘೋಷಣೆಯ ಕಂಡಿಕೆ 112ರಲ್ಲಿ ಈ ಕೆಳಕಂಡಂತೆ ಘೋಷಣೆ ಮಾಡಲಾಗಿದೆ. ನಿರಂತರ’ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.

ಮೇಲೆ ಓದಲಾದ ಕ್ರಮಾಂಕ (2) ರಲ್ಲಿ, ‘ನಿರಂತರ’ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲು ಲೆಕ್ಕ ಶೀರ್ಷಿಕೆ 4202-01-201-1-04- ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಮೂಲಭೂತ ಸೌಕರ್ಯ (177-ಐಟಿ ವೆಚ್ಚ 500.00 ಲಕ್ಷಗಳು) ಒಟ್ಟು 500.00 ಲಕ್ಷಗಳನ್ನು ನಿಗದಿಪಡಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (3) ರಲ್ಲಿ, Centre for E-Governance, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ರವರು ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ថថ 2- ថថថ : DPI-CPIOSATS(OTH)/25/2024-SATS “Mobile-Based Al-Driven Facial Recognition Attendance System Draft RFP” ಕುರಿತು ಸಮಗ್ರವಾದ ಅಭಿಪ್ರಾಯ ನೀಡಿದ್ದು, ಸದರಿ ಅಭಿಪ್ರಾಯಗಳನ್ನು ಅಳವಡಿಸಿ, “Draft RFP” ಅನ್ನು ಪರಿಷ್ಕರಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (4) ರಲ್ಲಿ ಆಯವ್ಯಯ ಘೋಷಣೆಯ ಕಂಡಿಕೆ 112 – ‘ನಿರಂತರ’-Mobile-Based Al-Driven Facial Recognition Attendance System ಕ್ರಿಯಾಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರದ ಅನುಮೋದನೆ ಕೋರಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಈ ಮುಂದಿನಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ.

prajaprabhat

Recent Posts

‘ಹರ ಘರ ತಿರಂಗಾ”ಕಾರ್ಯಕ್ರಮ

ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…

3 hours ago

ಸ್ವಾತಂತ್ರ್ಯ ಭಾರತದೊಳಗೆ ಇರುವ ಸಮಸ್ಯೆಗಳು.

                          ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…

6 hours ago

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

12 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

15 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

15 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

16 hours ago