ಬೆಂಗಳೂರು.12.ಜುಲೈ.25:- ರಾಜ್ಯ ಸರ್ಕಾರಿ KPS (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗೆ KPS ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಉಚಿತ ಸಾರಿಗೆ ಸೌಲಭ್ಯ ನೀಡುವ ಯೋಜನೆ ಬಗ್ಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಈ ಯೋಜನೆ ಅಡಿಯಲ್ಲಿ, ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಓದುವ ಹೆಣ್ಣುಮಕ್ಕಳಿಗೆ ಉಚಿತ ಸಾರಿಗೆ ಸೌಲಭ್ಯ ನೀಡಲಾಗುತ್ತಿದೆ. ಆದರೆ ಇದೀಗ ಆದುನಿಕ ಶಿಕ್ಷಣ ಪಥದಲ್ಲಿ ಗಂಡು ಮಕ್ಕಳಿಗೂ ಇದೇ ಸೌಲಭ್ಯ ನೀಡಬೇಕೆಂದು ಡಿಸಿಎಂ (ಉಪಮುಖ್ಯಮಂತ್ರಿ) ಡಿ.ಕೆ. ಶಿವಕುಮಾರ್ ಅವರು ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ.
ಈ ಕುರಿತು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಪ್ರತಿಕ್ರಿಯೆ ನೀಡಿದ್ದು, ‘ಇದು ಡಿಸಿಎಂ ಅವರ ಸಲಹೆಯಷ್ಟೆ. ಈ ಯೋಜನೆ ಅನುಷ್ಠಾನಗೊಳ್ಳಬೇಕಾದರೆ ಸುಮಾರು 10 ಕೋಟಿ ರೂ. ಅಥವಾ ಹೆಚ್ಚಿನ ವೆಚ್ಚ ಉಂಟಾಗಬಹುದು. ಹೀಗಾಗಿ ಈ ಪ್ರಸ್ತಾವನೆ ಆರ್ಥಿಕ ಇಲಾಖೆಗೆ ಸಾಗಬೇಕು. ಅಲ್ಲಿಂದ ಕ್ಯಾಬಿನೆಟ್ ಅನುಮೋದನೆ ಲಭಿಸಿದ ನಂತರ ಮಾತ್ರ ತೀರ್ಮಾನ ಕೈಗೊಳ್ಳಲಾಗುವುದು’ ಎಂದಿದ್ದಾರೆ. ಈ ಯೋಜನೆಯ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ, ವಿಶೇಷವಾಗಿ ಹಿಂದುಳಿದ ಪ್ರದೇಶದ ಮಕ್ಕಳಿಗೆ ಶಿಕ್ಷಣದಲ್ಲಿ ಭಾಗವಹಿಸುವ ಅವಕಾಶ ಹೆಚ್ಚಾಗಲಿದೆ.
ರಾಜ್ಯದಲ್ಲಿ ಈಗಾಗಲೇ ಹೆಣ್ಣುಮಕ್ಕಳಿಗೆ ಈ ಯೋಜನೆಯ ಪ್ರಯೋಜನ ದೊರೆಯುತ್ತಿದೆ. ಆದರೆ ಗಂಡು ಮಕ್ಕಳಿಗೂ ಇದು ವಿಸ್ತಾರಗೊಳ್ಳುವ ನಿರೀಕ್ಷೆ ಇದ್ದು, ಈ ಬಗ್ಗೆ ಶಿಕ್ಷಣ ಮತ್ತು ಸಾರಿಗೆ ಹಂಗಾಮಿ ಸಚಿವಾಲಯದ ನಡುವೆ ಚರ್ಚೆ ನಡೆಯುತ್ತಿದೆ. ಇದನ್ನು ಶೀಘ್ರವೇ ಸಚಿವ ಸಂಪುಟದ ಮುಂದೆ ಇಟ್ಟು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕೆಪಿಎಸ್ ಸರ್ಕಾರಿ ಶಾಲೆಗಳ ಎಲ್ಲಾ ಮಕ್ಕಳಿಗೆ ಉಚಿತ ಸಾರಿಗೆ ಯೋಜನೆಯು ಮತ್ತೊಂದು ಸಾಮಾಜಿಕ ಹಿತದಾಯಕ ಹೆಜ್ಜೆ ಆಗಲಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆಯ ಆಧಾರದ ಮೇಲೆ ಈ ಬಗ್ಗೆ ಸರ್ಕಾರದ ವಿವಿಧ ಇಲಾಖೆಗಳ ಮೌಲ್ಯಮಾಪನ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಕ್ಯಾಬಿನೆಟ್ ತೀರ್ಮಾನ ಹೊರಬರಲಿದ್ದು, ಅದರ ಮೇಲೆ ನಿರ್ಧಾರ ಹೊರಬೀಳಲಿದೆ.
ಡಿ.ಕೆ. ಶಿವಕುಮಾರ್ ಹೇಳಿದ್ದೇನು?
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ‘ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧ! ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ’ ಎಂದು ತಿಳಿಸಿದ್ದಾರೆ.
ಇನ್ನು ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದು, ‘ಕೆಪಿಎಸ್ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಉಚಿತ ಸರ್ಕಾರಿ ಭಾಗ್ಯ ಎಂದು ತಿಳಿಸಿದ್ದಾರೆ.
ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ
ಕೆಪಿಎಸ್ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್ ವ್ಯವಸ್ಥೆ
ಎಲ್‌ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ ಸದುಪಯೋಗ
ಬಡವರ ಮಕ್ಕಳಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲ ನೀಡಲು ಸರ್ಕಾರದಿಂದ ಮಹತ್ವದ ಚಿಂತನೆ
ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರದಿಂದ ದಿಟ್ಟ ಹೆಜ್ಜೆ