ಸರ್ಕಾರ ಅತಿಥಿ ಉಪನ್ಯಾಸಕರ, ಆರೋಗ್ಯ ವಿಮೆ ಮತ್ತು ನಿವೃತ್ತಿ ಪ್ರಯೋಜನ ?

ಸಂಪಾದಕೀಯ…..

ಕರ್ನಾಟಕ ರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮಾ ಸೌಲಭ್ಯ ನೀಡುವ ನಿಟ್ಟಿನಲ್ಲಿ “ಅತಿಥಿ ಉಪನ್ಯಾಸಕರ ವಂತಿಗೆ ಮಾಸಿಕ 400 ರು. ಹಾಗೂ ಸರ್ಕಾರದಿಂದ 400 ರು. ಸೇರಿದಂತೆ ಒಟ್ಟು 800 ರು.” ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನಗೊಳಿಸಲು ಈಗಾಗಲೇ ಮಂಜೂರಾತಿ ನೀಡಲಾಗಿದ್ದು, ಜಾರಿಯಲ್ಲಿರುತ್ತದೆ.

ರಾಜ್ಯಾದ್ಯಂತ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಅಧ್ಯಾಪಕರ ಸಂಭಾವನೆಯನ್ನು ತಿಂಗಳಿಗೆ ₹ 5,000 ವರೆಗೆ ಪರಿಷ್ಕರಿಸಲು ಮತ್ತು ಸುಮಾರು ₹ 5 ಲಕ್ಷ ಮೊತ್ತವನ್ನು ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಅವರು ಕನಿಷ್ಠ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರೆ ನಿವೃತ್ತಿ ಪ್ರಯೋಜನ. ₹ 5 ಲಕ್ಷದ ಆರೋಗ್ಯ ವಿಮೆಯನ್ನೂ ಖಾತರಿಪಡಿಸಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮೆ ಕಲ್ಪಿಸಲು ಟೆಂಡರ್ ಪ್ರಕ್ರಿಯೆ ಕೈಗೊಳ್ಳುವ ಬಗ್ಗೆ ಪರಿಶೀಲನೆಯಲ್ಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ಕಳೆದ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರೊಬ್ಬರು ಅವರಂತೆ ಯುಜಿಸಿ ಮಾರ್ಗಸೂಚಿಯಂತೆ ಅರ್ಹತೆ ಪಡೆಯದ ಅನೇಕರು ಇದ್ದಾರೆ ಎಂದು ಹೇಳಿದರು. ಇದನ್ನು ಪರಿಗಣಿಸಿದರೆ, ಅವರು ನಿರುದ್ಯೋಗಿಗಳಾಗುತ್ತಾರೆ ಮತ್ತು ಅವರಿಗೆ ಬೇರೆಡೆ ಉದ್ಯೋಗವನ್ನು ಭದ್ರಪಡಿಸುವುದು ಕಷ್ಟ.

ಈ ಕಾಳಜಿಯೊಂದಿಗೆ, ಹಿರಿಯ ಅತಿಥಿ ಉಪನ್ಯಾಸಕರ ಕಳವಳಗಳನ್ನು ಪರಿಹರಿಸಲು ಸರ್ಕಾರವು ಹೈಕೋರ್ಟ್‌ಗೆ ಮನವಿಯನ್ನು ಪರಿಗಣಿಸುತ್ತಿದೆ ಎಂದು ಡಿಸಿಇ ಮೂಲಗಳು ತಿಳಿಸಿವೆ. ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 10,600 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ, 55% ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆಯ ಕೊರತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸುವರ್ಣ ಸೌಧದ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಶಾಸಕ ಮಧು ಜಿ.ಮಾದೇಗೌಡ ಅವರ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವರು ಲಿಖಿತ ಉತ್ತರ ನೀಡಿದರು.

ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮಾ ಸೌಲಭ್ಯ ನೀಡುವ ನಿಟ್ಟಿನಲ್ಲಿ (ಅತಿಥಿ ಉಪನ್ಯಾಸಕರ ವಂತಿಗೆ ಮಾಸಿಕ 400 ರು. ಹಾಗೂ ಸರ್ಕಾರದಿಂದ 400 ರು. ಸೇರಿದಂತೆ ಒಟ್ಟು 800 ರು.) ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನಗೊಳಿಸಲು ಈಗಾಗಲೇ ಮಂಜೂರಾತಿ ನೀಡಲಾಗಿದ್ದು, ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.


ಹಾಗೇ, 60 ವರ್ಷ ಮೀರಿದ ಅತಿಥಿ ಉಪನ್ಯಾಸಕರಿಗೆ ಭದ್ರತಾ ರೂಪದಲ್ಲಿ ವಾರ್ಷಿಕ 50 ಸಾವಿರ ರು.ನಂತೆ ಗರಿಷ್ಠ 5 ಲಕ್ಷ ರು. ಇಂಡಿಗಂಟು ಸೌಲಭ್ಯ ನೀಡಲಾಗುತ್ತಿದೆ. 2024ನೇ ಸಾಲಿಗೆ ಅನ್ವಯಿಸುವಂತೆ ಸುಮಾರು 27 ಅತಿಥಿ ಉಪನ್ಯಾಸಕರು ವಯೋನಿವೃತ್ತಿ ಹೊಂದಲಿದ್ದಾರೆ.

All ಸದರಿ ಅವರಿಗೆ ಇಡಿಗಂಟು ಯೋಜನೆ ಜಾರಿಗೊಳಿಸಲು ಗರಿಷ್ಠ 135 ಲಕ್ಷ ರು.ಗಳ ಅನುದಾನ ಅವಶ್ಯವಿದ್ದು, ಈ ಅನುದಾನದ ಲಭ್ಯತೆ ಬಗ್ಗೆ ಪರಿಶೀಲಿಸಲಾಗುತ್ತಿದ್ದು ಅನುಷ್ಠಾನಗೊಳಿಸಲು ಕ್ರಮವಹಿಸಲಾಗುವುದು ಎಂದಿದ್ದಾರೆ.

ಅತಿಥಿ ಉಪನ್ಯಾಸಕರು ಕರ್ತವ್ಯದ ಅವಧಿಯಲ್ಲಿ ಮೃತಪಟ್ಟರೆ ಅವರ ಅವಲಂಬಿತರಿಗೆ ಯಾವುದೇ ಸೌಲಭ್ಯ ನೀಡಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದ್ದಾರೆ. ಈ ಸರ್ಕಾರ ನ್ಯಾಯಾ ನಾ??

ಈ ಪರಿಸ್ಥಿತಿಗೆ ಯಾರ ಜವಾಬ್ದಾರ ಇದಾರೆ? ಅತಿಥಿ ಉಪನ್ಯಾಸಕರು ? ಸರ್ಕಾರ ?

prajaprabhat

Share
Published by
prajaprabhat

Recent Posts

ಆರ್‌ಟಿಐ ಮಾಹಿತಿ ಕೊಡದಿದ್ದರೆ ಅಧಿಕಾರಿಗೆ ದಂಡ : ಹರೀಶ್ ಕುಮಾರ್

ಬೆಂಗಳೂರು.03.ಆಗಸ್ಟ್.25:- ಮಾಹಿತಿ ಹಕ್ಕು ಅಧಿನಿಯಮ 2005 ಸಂಬಂಧಿಸಿತ್ ಇಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪೊಲೀಸ್ ಇಲಾಖೆ ವತಿಯಿಂದ ಇಲ್ಲಿನ ಜಿಲ್ಲಾ…

35 minutes ago

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

8 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

13 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

15 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

15 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

15 hours ago