ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬುದೇ ಕಾಂಗ್ರೆಸ್ ಪಕ್ಷದ ಸಿದ್ಧಾಂತ.ಸಚಿವ ಈಶ್ವರ್ ಖಂಡ್ರೆ.

15 ಡಿಸೆಂಬರ್ 24 ಚಿಕ್ಕಮಂಗಳೂರು:-ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬುದೇ ಕಾಂಗ್ರೆಸ್ ಪಕ್ಷದ ಸಿದ್ಧಾಂತ. ಈ ತತ್ವದ ಆಧಾರದ ಮೇಲೆಯೇ ಕಾಂಗ್ರೆಸ್ ಇದುವರೆಗೂ ಆಡಳಿತ ನಡೆಸಿಕೊಂಡು ಬಂದಿದೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಜಾತಿ, ಜನಾಂಗದವರಿಗೆ ಮೀಸಲಾತಿ ಕಲ್ಪಿಸಿ ಅವರನ್ನು ಮುಖ್ಯವಾಹಿನಿಗೆ ತರುವುದು ಸರಕಾರ ಕರ್ತವ್ಯವಾಗಿದೆ.

ಇದನ್ನು ಕಾಂಗ್ರೆಸ್ ಸರಕಾರ ಮಾಡಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಪಂಚಮಸಾಲಿಗಳ ಚಳವಳಿ ಸಂಬಂದ ರವಿವಾರ ಬಾಳೆಹೊನ್ನೂರು ಪಟ್ಟಣದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷ ಬಸವಣ್ಣ, ಅಂಬೇಡ್ಕರ್ ತತ್ವಗಳ ಮೇಲೆ ನಡೆಯುತ್ತಿರುವ ಪಕ್ಷವಾಗಿದೆ. ಹಿಂದುಳಿದಿರುವ ಯಾವ ಜಾತಿಗೂ ಅನ್ಯಾಯವಾಗಲು ನಮ್ಮ ಪಕ್ಷ ಬಿಡುವುದಿಲ್ಲ. ರಾಜ್ಯದಲ್ಲಿ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ಯಾವ ಜಾತಿಗೂ ಅನ್ಯಾಯ ಆಗುವುದಿಲ್ಲ. ಸುಪ್ರೀಂಕೋರ್ಟ್ ಆದೇಶದಂತೆ ಶಾಶ್ವತ ಹಿಂದುಳಿದ ಆಯೋಗದವರು ಸಭೆ ನಡೆಸುತ್ತಾರೆ. ಸಾಮಾಜಿಕ, ಶೈಕ್ಷಣಿಕ ಆಧಾರದಲ್ಲಿ ಸಮೀಕ್ಷೆ ನಡೆಸುತ್ತಾರೆ. ಸಮೀಕ್ಷೆಯಲ್ಲಿ ಯಾವ ಜಾತಿ ಹೆಚ್ಚು ಹಿಂದುಳಿದಿದೆ ಎಂಬುದು ಗೊತ್ತಾಗುತ್ತದೆ. ಇಂತಹ ಜಾತಿಗಳನ್ನು ಗುರುತಿಸಿ ಸಾಮಾಜಿಕ ನ್ಯಾಯ ಕಲ್ಪಿಸುವುದು ಸರಕಾರದ ಜವಬ್ದಾರಿಯಾಗಿದೆ. ಇದನ್ನು ನಮ್ಮ ಸರಕಾರ ಮಾಡಲಿದೆ ಎಂದರು.ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಉನ್ನತಿ ಸಾಧಿಸುವುದು ಸಂವಿಧಾನಿಕ ಹಕ್ಕು. ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿ ಮುಖ್ಯವಾಹಿನಿಗೆ ಬರುವಂತೆ ಮಾಡುವುದು ಸರಕಾರದ ಜವಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸರಕಾರ ಅಗತ್ಯ ಕ್ರಮವಹಿಸಲಿದೆ ಎಂದು ಇದೇ ವೇಳೆ ಅವರು ಹೇಳಿದರು.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

5 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

5 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

6 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

6 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

6 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

8 hours ago