ಅಮ್ರೇಲಿ.26.ಮೇ.25:- ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ಮೇ 16 ರಂದು ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿದಂತೆ ಗುಂಪೊಂದು ಇತರ ಮೂವರೊಂದಿಗೆ ಥಳಿಸಿದ್ದ 20 ವರ್ಷದ ದಲಿತ ವ್ಯಕ್ತಿ ಭಾವನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ನೀಲೇಶ್ ರಾಥೋಡ್ ಗುರುವಾರ ರಾತ್ರಿ ನಿಧನರಾದರು, ಮತ್ತು ಘಟನೆಯ ದಿನದಂದು ಎಫ್‌ಐಆರ್ ದಾಖಲಾದ ನಂತರ ಬಂಧಿಸಲ್ಪಟ್ಟ ಒಂಬತ್ತು ಮಂದಿ ಈಗ ಕೊಲೆ ಆರೋಪಗಳನ್ನು ಎದುರಿಸಬೇಕಾಗುತ್ತದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ನಯನಾ ಗೊರಾಡಿಯಾ ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಪ್ರಾಪ್ತ ಬಾಲಕ ಸೇರಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ನೀಲೇಶ್ ರಾಥೋಡ್ ಎಂಬ ಯುವಕ ಸಿಹಿ ತಿಂಡಿ ಖರೀದಿಸಲು ಪ್ರಬಲ ಜಾತಿಯ ವಿಜಯ್ ಆನಂದ್ ತೋಟಾ ಎಂಬಾತನ ಅಂಗಡಿಗೆ ಹೋಗಿದ್ದ. ಈ ವೇಳೆ ಅಂಗಡಿಯಲ್ಲಿ ಚಿಕ್ಕ ಮಗುವಿತ್ತು. ಆ ಮಗುವನ್ನು ‘ಬೇಟಾ’ (ಮಗುವೇ) ಎಂದು ನೀಲೇಶ್ ಕರೆದಿದ್ದಾರೆ. ಇದೇ ಕಾರಣಕ್ಕಾಗಿ ಅವರ ಮೇಲೆ ಅಂಗಡಿ ಮಾಲಕ ವಿಜಯ್ ಆನಂದ್ ಮತ್ತು ಇತರರು ಕೋಲುಗಳು, ಕುಡುಗೋಲುಗಳಿಂದ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನೀಲೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ಪ್ರಶ್ನಿಸಿದ ನೀಲೇಶ್ ಚಿಕ್ಕಪ್ಪ ಸುರೇಶ್ ವಾಲಾ ಮೇಲೆ ಕೂಡ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಸುರೇಶ್ ವಾಲಾ ಪ್ರಕರಣ ದಾಖಲಿಸಿದ್ದಾರೆ.
ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೆವಾನಿ ಅವರು ಮೃತ ನೀಲೇಶ್ ರಾಥೋಡ್ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಅವರ ಜೊತೆ ಪ್ರತಿಭಟನೆಯಲ್ಲಿ ಭಾಗವಹಿಸಿ ನ್ಯಾಯಕ್ಕಾಗಿ ಒತ್ತಾಯಿಸಿದರು.
ಈ ಬೆಳವಣಿಗೆ ಗುಜರಾತ್‌ನಲ್ಲಿ ಇಂದಿಗೂ ಜಾತಿವಾದ ಆಳವಾಗಿ ಬೇರೂರಿದೆ ಎಂಬುದನ್ನು ತೋರಿಸುತ್ತದೆ. ದಲಿತರು ಭಯದಲ್ಲಿ ಬದುಕುತ್ತಿದ್ದಾರೆ ಮತ್ತು ತಮ್ಮ ಸ್ವಂತ ನೆಲದಲ್ಲಿ ಅಸುರಕ್ಷಿತರಾಗಿದ್ದಾರೆ. ದಲಿತರ ಬಗ್ಗೆ ತಾರತಮ್ಯ ಮಾಡಲಾಗುತ್ತದೆ, ಸಾಮಾನ್ಯ ಬಾವಿಗಳಿಂದ ನೀರು ತರುವುದನ್ನು ನಿರಾಕರಿಸಲಾಗುತ್ತದೆ, ದೇವಾಲಯಗಳಿಗೆ ಪ್ರವೇಶಿಸುವುದನ್ನು ತಡೆಯಲಾಗುತ್ತದೆ. ಈಗ ಓರ್ವ ದಲಿತನನ್ನು ಕ್ರೂರವಾಗಿ ಥಳಿಸಲಾಗಿದೆ. ಆದರೆ ಸರಕಾರ ಮೌನವಾಗಿದೆ. ಇದು ಅತ್ಯಂತ ದುರದೃಷ್ಟಕರ. ಈ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಕೊಪ್ಪಳ.07.ಆಗಸ್ಟ್.25: ಜೆ.ಸಿ.ಬಿ ಕ್ರೆನ್ ಸರಪಳಿ ಜಾರಿ ತೆಲೆ ಮೇಲೆ ಬಿದ್ದಿರುವುದರಿಂದ ಲೈನ್‌ಮ್ಯಾನ್ ಮೃತ ಪಟ್ಟಿರುವ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.…
ಕೊಪ್ಪಳ.07.ಆಗಸ್ಟ್.25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ…
ರಾಯಚೂರು.07.ಆಗಸ್ಟ್.25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯ ವಿವಿಧ ವಾರ್ಡ್ಗಳಲ್ಲಿ 2 ವರ್ಷಗಳ ಅವಧಿಗೆ ಸ್ವಚ್ಛ ಭಾರತ್ ಮಿಷನ್ 2.0ನ ಐಇಸಿ…
ರಾಯಚೂರು.07.ಆಗಸ್ಟ್.25: ಜಿಲ್ಲೆಯಲ್ಲಿ ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು…
ರಾಯಚೂರು.07.ಆಗಸ್ಟ್ .25: ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳು ಕೆಪಿಎಂಇ ಕಾಯ್ದೆಯಡಿ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಕೆಪಿಎಂಇ ಕಾಯ್ದೆ…
ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರ ಜಿಲ್ಲೆಗಳ ಅಭ್ಯರ್ಥಿಗಳು ಭಾಗಿ ಶಿಸ್ತಿನ ಸಿಪಾಯಿಗಳ ಶಾಲೆಯಂತಾದ ರಾಯಚೂರಿನ ಕೃಷಿ ವಿಜ್ಞಾನಿಗಳ…