Categories: ಬೀದರ

ಸವಿತಾ ಮಹರ್ಷಿ ಜಯಂತಿಯನ್ನು ಅದ್ದೂರಿಯಾಗಿಆಚರಿಸೋಣ-ಸಹಾಯಕ ಆಯುಕ್ತ ಎಂ.ಡಿ.ಶಕೀಲ್


ಬೀದರ.31.ಜನವರಿ.25: ಬೀದರ್ ನಗರದಲ್ಲಿ ಫೆಬ್ರವರಿ 4 ರಂದು ನಡೆಯುವ ಸವಿತಾ ಮಹರ್ಷಿ ಜಯಂತಿಯನ್ನು ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಿಸೋಣ ಎಂದು ಬೀದರ ಸಹಾಯಕ ಆಯುಕ್ತರಾದ ಮಹ್ಮದ ಶಕೀಲ ಹೇಳಿದರು.


ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಸವಿತಾ ಮಹರ್ಷಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.


ಅಂದು ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಸಂಘ-ಸAಸ್ಥೆಗಳಲ್ಲಿ ಬೆಳಿಗ್ಗೆ 10 ಗಂಟೆಗೆ ಶ್ರೀ ಸವಿತಾ ಮಹರ್ಷಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶ್ರೀ ಸವಿತಾ ಮಹರ್ಷಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಜಿಲ್ಲಾಧಿಕಾರಿ ಕಚೇರಿಯಿಂದ ಶ್ರೀ ಸವಿತಾ ಮಹರ್ಷಿಯವರ ಭಾವಚಿತ್ರದ ಮೆರವಣಿಗೆ ಪ್ರಾರಂಭಗೊoಡು ಶಿವಾಜಿವೃತ್ತ, ಭಗತಸಿಂಗ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ, ಜನರಲ್ ಕರಿಯಪ್ಪ ವೃತ್ತದ ಮಾರ್ಗವಾಗಿ ಸಂಚರಿಸಿ ನೇರವಾಗಿ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮAದಿರಕ್ಕೆ ತಲುಪಿ ಮಧ್ಯಾಹ್ನ 12 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಭಾಗವಹಿಸಬೇಕು ಮತ್ತು ನಗರಸಭೆ ವತಿಯಿಂದ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ನೀರಿನ ಹಾಗೂ ಇತರೆ ವ್ಯವಸ್ಥೆ ಮಾಡಬೇಕೆಂದು ಹೇಳಿದರು.


ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೆರವಣಿಗೆಯಲ್ಲಿ ಕಲಾ ತಂಡಗಳನ್ನು ಭಾಗವಹಿಸುವಂತೆ ನೋಡಿಕೊಳ್ಳಬೇಕೆಂದು ಕನ್ನಡ ವiತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.


ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ, ಮಡಿವಾಳ ಸಮಾಜದ ಮುಖಂಡರುಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Share
Published by
prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

5 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

5 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

5 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

6 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

6 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

6 hours ago