ಬೆಂಗಳೂರು.04.ಮೇ.25:- ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು/ಡೀಮ್ಡ್ ಉನ್ನತ ಶಿಕ್ಷಣ ಇಲಾಖೆ ಖಾಸಗಿ ವಿವಿಯಾಗಿದ್ದರೂ ಸರ್ಕಾರದಿಂದ ನೆರವಿಗೆ ಬೇಡಿಕೆ:ತನಿಖೆಗೆ ಮುಂದಾದ ಉನ್ನತ ಶಿಕ್ಷಣ ಇಲಾಖೆ ಕೆಲವು ಖಾಸಗಿ ವಿಶ್ವವಿದ್ಯಾಲಯಗಳು/ಡೀಮ್ಡ್ ವಿಶ್ವವಿದ್ಯಾಲಯಗಳಾಗಿ ಬದಲಾಗಿದ್ದರೂ ಸಹ ರಾಜ್ಯ ಸರ್ಕಾರದಿಂದ ನೆರವು ಪಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಉನ್ನತ ಶಿಕ್ಷಣ ಇಲಾಖೆಯು ಈ ಬಗ್ಗೆ ತನಿಖೆ ನಡೆಸಲು ತೀರ್ಮಾನಿಸಿದೆ.
ಕ್ರೈಸ್ಟ್, ಪಿಇಎಸ್, ಸೆಂಟ್ ಜೋಸೆಫ್, ಸೆಂಟ್ ಅಲೋಶಿಯಸ್ ಮುಂತಾದ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳು ಖಾಸಗಿ ವಿವಿಗಳಾಗಿ ಅಥವಾ ಡೀಮ್ಡ್ ವಿವಿಗಳಾಗಿ ಬದಲಾಗಿದ್ದರೂ ಸಹ ಸರ್ಕಾರದಿಂದ ನೆರವು ಪಡೆಯಲು ಯತ್ನಿಸುತ್ತಿವೆ.
ಕೆಲ ಸಹಾಯಕ ಉಪನ್ಯಾಸಕ ಹುದ್ದೆಗಳನ್ನು ಸರ್ಕಾರದ ಮೂಲಕ ಭರ್ತಿ ಮಾಡಲು ಪ್ರಯತ್ನ ನಡೆಸುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಈ ಬಗ್ಗೆ ತನಿಖೆಗೆ ನಡೆಸಲು ಮುಂದಾಗಿದ್ದಾರೆ.
ಖಾಸಗಿ ವಿವಿಯಾಗಿ ಮಾನ್ಯತೆ ಪಡೆದ ಸಂಸ್ಥೆಗಳಿಗೆ ಅನುದಾನ ನೀಡುವ ಬಗ್ಗೆ ನಮ್ಮ ಆಕ್ಷೇಪವಿದೆ. ಈ ಬಗ್ಗೆ ಕಾನೂನು ಇಲಾಖೆ ಮತ್ತು ಹಣಕಾಸು ಇಲಾಖೆಗೂ ಪತ್ರ ಬರೆಯುತ್ತೇವೆ. ಖಾಸಗಿ ವಿವಿಯಾಗಿ ಬದಲಾದ ಬಳಿಕ ಸಂಸ್ಥೆಗಳಿಗೆ ನೀಡಿರುವ ಅನುದಾನದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನನಗೆ ಮಂಗಳೂರಿನ ಅಲೋಶಿಯಸ್ ಕಾಲೇಜಿನಿಂದ ನೆರವು ಕೋರಿ ಪತ್ರ ಬಂದಾಗ ಈ ಬೆಳವಣಿಗೆ ಬಗ್ಗೆ ನನ್ನ ಅರಿವಿಗೆ ಬಂತು. ನಾನು ಈ ಬೆಳವಣಿಗೆ ಬಗ್ಗೆ ತನಿಖೆಗೆ ಆದೇಶಿಸಿದ್ದು ವರದಿ ಪಡೆಯಲಿದ್ದೇನೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಹೇಳಿದ್ದಾರೆ.
ಬೆಂಗಳೂರು.15.ಆಗಸ್ಟ್.25:- ರಾಜ್ಯದಲ್ಲಿ ಖಾಯಂ ಶಿಕ್ಷಕರು ತುಂಬಿ ಇಲ್ಲದ ಕಾರಣ 2025-26 ಶೈಕ್ಷಣಿಕ ವರ್ಷದಲ್ಲಿ ಮೊದಲನೇ ಹಂತದಲ್ಲಿ ಜಿಲ್ಲಾವಾರು ಬೇಡಿಕೆಗೆ ಅನುಗುಣವಾಗಿ…
ಬೆಂಗಳೂರು.15.ಆಗಸ್ಟ್.25:- ರಾಜ್ಯ ಸರ್ಕಾರ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಗಳಲ್ಲಿ ಅತಿಥಿ ಶಿಕ್ಷಕರ ತಾತ್ಕಾಲಿಕ ವ್ಯವಸ್ಥೆ ಅತಿಥಿ ಶಿಕ್ಷಕರ ನೇಮಕ…
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…