|

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ…

ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ .ಕೃಷಿ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಮತ್ತು ಅನುಗೊಂಡನಹಳ್ಳಿರೈತ ಕೇಂದ್ರಕ್ಕೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್ಸಿ ಅಥವಾ ಸಂಬಂಧಿಸಿದ ವಿಷಯಗಳಲ್ಲಿ (Allied subject) ಪದವಿ ಮಾಡಿರಬೇಕು.

ಕೃಷಿ ಸಂಬಂಧಿಸಿದ ವಿಭಾಗದಲ್ಲಿ ಕನಿಷ್ಠ ಒಂದು ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರಬೇಕು. ಸ್ವ-ವಿವರ ಜತೆಗೆ ಬೇಕಾದ ಪೂರಕ ದಾಖಲೆಗಳನ್ನು ಮೇ15ರೊಳಗೆ ಕಚೇರಿ ಅವಧಿಯೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 208/209, ಕಚೇರಿ ದೂರವಾಣಿ ಸಂಖ್ಯೆ 080-26711594. ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಪರ್ಕಿಸಬಹುದಾಗಿದೆ.

Similar Posts

Leave a Reply

Your email address will not be published. Required fields are marked *