ಶಿವಮೊಗ್ಗ.24.ಫೆ.25:- ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಿದ್ದು, ಫೆ.28 ರ ಬೆಳಿಗ್ಗೆ 10 ಗಂಟೆಗೆ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಕಚೇರಿಯಲ್ಲಿ ಸಂದರ್ಶನ ಏರ್ಪಡಿಸಲಾಗಿದೆ.
ಪಶುವೈದ್ಯಕೀಯ ಔಷಧ ಹಾಗೂ ವಿಷ ಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ(ಕುಕ್ಕುಟಶಾ ಶಾಸ್ತ್ರಆಹಾರ ಶಾಸ್ತ್ರ / ಜಾನುವಾರು ನಿರ್ವಹಣೆ), ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ ಹಾಗೂ ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ರಾಷ್ಟಿçÃಯ ಅರ್ಹತಾ ಪರೀಕ್ಷೆ(ಎನ್ಇಟಿ) ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.56,700 ಹಾಗೂ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000 ವೇತನವನ್ನು ಪಾವತಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-200872 ಹಾಗೂ ವಿಶ್ವವಿದ್ಯಾಲಯಯ ಜಾಲತಾಣ www.kvafsu.edu.in ಗೆ ಸಂಪರ್ಕಿಸಬಹುದು ಎಂದು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ತಿಳಿಸಿದ್ದಾರೆ.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…