ಸಹಾಯಕ ಪ್ರಾಧ್ಯಾಪಕರ 5 ಸಾವಿರ ಹುದ್ದೆ ಶೀಘ್ರ ಭರ್ತಿ:ಸಚಿವ ಎಂ ಸಿ ಸುಧಾಕರ.!

ಬೆಂಗಳೂರು: 28.ಜನೆವರಿ.25.ಉನ್ನತ ಶಿಕ್ಷಣ ಇಲಾಖೆಯ. ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರೂ ಸೇರಿದಂತೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಐದು ಸಾವಿರ ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದರು.

ರಾಜ್ಯ ಸರ್ಕಾರ ಮತ್ತೆ ಕಾಲೇಜು ಶಿಕ್ಷಣ ಇಲಾಖೆಗೆ ನೂತನವಾಗಿ ನೇಮಕವಾದ ಸಹಾಯಕ ಪ್ರಾಧ್ಯಾಪಕರಿಗೆ ಸೋಮವಾರ ಹಮ್ಮಿಕೊಂಡಿದ್ದ ‘ಹೊಸ ಹಾದಿ’ ವೃತ್ತಿ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.



ರಾಜ್ಯ ದಲ್ಲಿ 2021ರಲ್ಲಿ ಆರಂಭವಾದ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ ಹಲವು ವಿಘ್ನಗಳು ಎದುರಾಗಿದ್ದವು. ವಿಶೇಷ ವರ್ಗಾವಣೆ, ಕಲ್ಯಾಣ ಕರ್ನಾಟಕ ಮೀಸಲಾತಿ ಹಂಚಿಕೆ, ನ್ಯಾಯಾಲಯದ ಪ್ರಕರಣ ಸೇರಿದಂತೆ ಎಲ್ಲ ಸಮಸ್ಯೆಗಳನ್ನೂ ಇತ್ಯರ್ಥಪಡಿಸಿಕೊಂಡು ನೇಮಕಾತಿ ಆದೇಶ ನೀಡಲಾಗಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಕೌಶಲ ಕಲಿಕೆಗೆ ಆದ್ಯತೆ ನೀಡಲಾಗಿದ್ದು, ಹಲವು ಹೊಸ ಕೋರ್ಸ್‌ಗಳನ್ನು ಪರಿಚಯಿಸಲಾಗಿದೆ. ಹೊಸದಾಗಿ ನೇಮಕವಾದವರು ಗುಣಮಟ್ಟದ ಬೋಧನೆಯತ್ತ ಗಮನಹರಿಸಬೇಕು ಎಂದರು.

ಕಾರ್ಯಾಗಾರ ಉದ್ಘಾಟಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಮಾಜದ ಬಹುಮುಖ್ಯ ಆಧಾರ ಸ್ತಂಭಗಳಲ್ಲಿ ಶಿಕ್ಷಕ ಸಮುದಾಯವೂ ಒಂದು. ಭವಿಷ್ಯದ ಉತ್ತಮ ನಾಗರಿಕರನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ.

ಸರ್ಕಾರ ಲಂಚ ಪಡೆಯದೆ, ಶಿಫಾರಸು ಇಲ್ಲದೆ ಎಲ್ಲರಿಗೂ ನೇಮಕಾತಿ ಆದೇಶ ನೀಡಿದೆ. ಅಂತಹ ದಾರಿಯಲ್ಲಿ ಅಧ್ಯಾಪಕರು ನಡೆದು, ಸಮಾಜಕ್ಕೆ ಆಸ್ತಿಯಾಗುವಂತಹ ವಿದ್ಯಾರ್ಥಿಗಳನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.

ಇದು ಸಾಮಾಜಿಕ ಜಾಲತಾಣಗಳ ಯುಗ. ಶಿಕ್ಷಕ ತಪ್ಪು ಹೇಳಿದರೆ ಕ್ಷಣಾರ್ಧದಲ್ಲಿ ಗುರುತಿಸಲಾಗುತ್ತದೆ. ಹಾಗಾಗಿ, ಸಾಕಷ್ಟು ಸಿದ್ಧತೆ ಇರಬೇಕು. ಪಠ್ಯ ಹೊರತಾದ ವಿಷಯಗಳ ಕಲಿಕೆಗೂ ಆದ್ಯತೆ ನೀಡಬೇಕು ಎಂದರು.

ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ.ಎಸ್‌. ಶ್ರೀಕರ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಎನ್‌. ಮಂಜುಶ್ರೀ, ಆಡಳಿತಾಧಿಕಾರಿ ಶೋಭಾ ಉಪಸ್ಥಿತರಿದ್ದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ. ಸಹಾಯಕ ಪ್ರಾಧ್ಯಾಪಕ ಹುದ್ದೆ ಅತೀ ಶೀಘ್ರದಲ್ಲಿ ಭರ್ತಿ ಮಾಡಲು ಸರಕಾರ ಸಿದ್ಧತೆ ಮಾಡ್ಕೊಂಡಿದೆ.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

2 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

8 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

8 hours ago

ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ಸ   ಸನ್ಮಾನಿಸಿದರು

ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…

8 hours ago

ಕೇಂದ್ರ ಸಚಿವ ಗಡ್ಕರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…

9 hours ago

ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.

ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…

14 hours ago