ಮೈಸೂರು.04.ಜೂನ್.25:- ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿರುವ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ 28 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟೆಂಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೋಗ್ರಾಮ್ ಮ್ಯಾನೇಜರ್, ಲ್ಯಾಬೊರೇಟರಿ ಅಸಿಸ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಕಂಪ್ಯೂಟರ್ ಅಸಿಸ್ಟೆಂಟ್ ಸೇರಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಸಂದರ್ಶನದ ಮೂಲಕ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಯಾವುದೇ ಸ್ನಾತಕೋತ್ತರ ಪದವಿ ಪಡೆದವರು ಹುದ್ದೆಗಳಿಗೆ ಅನುಸಾರವಾಗಿ ಜೂನ್ 9ರಿಂದ ಆರಂಭವಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆ ಮೂಲಕ ಮೈಸೂರಿನಲ್ಲಿ ಒಳ್ಳೆಯ ಹುದ್ದೆ ಗಿಟ್ಟಿಸಿಕೊಳ್ಳಬಹುದಾಗಿದೆ.
ಪ್ರಾದೇಶಿಕ ಶಿಕ್ಷಣ ಸಂಸ್ಥೆ ಮೈಸೂರು (RIE Mysore) ಇವರು ಅಸಿಸ್ಟೆಂಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೋಗ್ರಾಮ್ ಮ್ಯಾನೇಜರ್, ಲ್ಯಾಬೊರೇಟರಿ ಅಸಿಸ್ಟೆಂಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಕಂಪ್ಯೂಟರ್ ಅಸಿಸ್ಟಂಟ್ ಸೇರಿದಂತೆ ವಿವಿಧ ಒಟ್ಟು 28 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದಾರೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ :
ಅಸಿಸ್ಟೆಂಟ್ ಪ್ರೊಫೆಸರ್ : 18
ಅಸಿಸ್ಟೆಂಟ್ ಪ್ರೋಗ್ರಾಮ್ ಮ್ಯಾನೇಜರ್ : 1
ಲ್ಯಾಬೊರೇಟರಿ ಅಸಿಸ್ಟೆಂಟ್ : 5
ಜ್ಯೂನಿಯರ್ ಪ್ರಾಜೆಕ್ಟ್ ಫೆಲೊ : 2
ಪ್ರಾಜೆಕ್ಟ್ ಅಸಿಸ್ಟೆಂಟ್ : 1
ಕಂಪ್ಯೂಟರ್ ಅಸಿಸ್ಟೆಂಟ್: 1
ವಿದ್ಯಾರ್ಹತೆ ಏನು?
ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಎಂ.ಎ, ಎಂ.ಎಡ್, ಎಂ.ಎಸ್ಸಿ, ಎಂ.ಫಿಲ್, ಪಿಎಚ್.ಡಿ, ಬಿಎಸ್ಸಿ ಸೇರಿ ಹಲವು ಪದವೀಧರರು ಸಂದರ್ಶನಕ್ಕೆ ಹಾಜರಾಗಬಹುದು. ಹುದ್ದೆಗಳಿಗೆ ಅನುಗುಣವಾಗಿ 45 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ
ಸ್ಥಳ : Regional Institute of Education, Mysuru-570006, Karnataka
ದಿನಾಂಕಗಳು :
ಅಸಿಸ್ಟೆಂಟ್ ಪ್ರೊಫೆಸರ್: ಜೂನ್ 9 ಹಾಗೂ 10 09th & 10th June 2025
ಅಸಿಸ್ಟೆಂಟ್ ಪ್ರೋಗ್ರಾಮ್ ಮ್ಯಾನೇಜರ್: ಜೂನ್ 10
ಲ್ಯಾಬೊರೇಟರಿ ಅಸಿಸ್ಟೆಂಟ್, ಜ್ಯೂನಿಯರ್ ಪ್ರಾಜೆಕ್ಟ್ ಫೆಲೊ: ಜೂನ್ 11
ಪ್ರಾಜೆಕ್ಟ್ ಅಸಿಸ್ಟೆಂಟ್, ಕಂಪ್ಯೂಟರ್ ಅಸಿಸ್ಟೆಂಟ್: ಜೂನ್ 12
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…