ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸೋಣ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.23.ಏಪ್ರಿಲ್.25: ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಏ.30 ರಂದು ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿoದ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.30 ರಂದು ನಡೆಯುವ ಬಸವ ಜಯಂತಿ ಆಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಏಪ್ರಿಲ್.30 ರಂದು ಬೆಳಿಗ್ಗೆ 8: 30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪೂಜೆ ಸಲ್ಲಿಸಲಾಗುವುದು. ನಂತರ ಮೆರವಣಿಗೆಗೆ ನಡೆಯಲಿದೆ ಮತ್ತು ಸಂಜೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಹಾಗೂ ಡಿಜೆ ಬಳಕೆಗೆ ಸಂಬAಧಿಸಿದAತೆ ಪೋಲಿಸ್ ಇಲಾಖೆಯಿಂದ ಅನುಮತಿ ಪಡೆಯಬೇಕು ಅಂದು ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಕಛೇರಿ, ಶಾಲಾ-ಕಾಲೇಜುಗಳಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಕಡ್ಡಾಯವಾಗಿ ಪೂಜೆ ಸಲ್ಲಿಸಬೇಕೆಂದರು. ಪೋಲಿಸ್ ಇಲಾಖೆ ವತಿಯಿಂದ ಬಂದೋಬಸ್ತ್ ನೀಡಲಾಗುವುದು ಎಂದು ತಿಳಿಸಿದರು.


ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷರಾದ ಜೈರಾಜ್ ಖಂಡ್ರೆ ಅವರು ಮಾತನಾಡಿ, ನಾವು ಬಸವ ಜಯಂತಿಯನ್ನು ಏಪ್ರಿಲ್ 28,29 ಮತ್ತು 30 ರವರೆಗೆ ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದೆ, ಏ.28 ರಂದು ಬೆಳಿಗ್ಗೆ ಗುಂಪಾದಿoದ ಪಾಪನಾಶದವರೆಗೆ ಬೈಕ್ ರ‍್ಯಾಲಿ ನಡೆಯಲಿದೆ ಹಾಗೂ ಸಂಜೆ 6 ಗಂಟೆಗೆ ಬಸವ ಜಯಂತಿ ಉತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಚಾಲನೆ ನೀಡಲಿದ್ದಾರೆ. ಏ.29ಕ್ಕೆ ರಂಗಮoದಿರದಲ್ಲಿ ವಚನ ಸಂಗೀತ ಕಾರ್ಯಕ್ರಮ, ಬಸವಾದಿ ಶರಣರ ವೇಷಭೂಷಣ ಮತ್ತು ನಾಟಕ ಕಾರ್ಯಕ್ರಮಗಳು ನಡೆಯಲಿವೆ ಮತ್ತು ಏ.30 ರಂದು ಸಂಜೆ 6 ಗಂಟೆಗೆ ಬಸವೇಶ್ವರ ವೃತ್ತದಲ್ಲಿ ಜಿಲ್ಲಾಧಿಕಾರಿಗಳು ವಚನ ಬೋಧಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಬೇಕು ಎಂದು ತಿಳಿಸಿದರು.


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ ಮಾತನಾಡಿ, ಬೀದರ ಜಿಲ್ಲೆಗೆ ಬಾಗಲಕೋಟೆ ಜಿಲ್ಲೆಯಿಂದ ಅನುಭವ ಮಂಟಪ ಬಸವಾದಿ ಶರಣರ ವೈಭವ ಕಾರ್ಯಕ್ರಮದ ರಥಯಾತ್ರೆ ಇದೇ ಏ. 23 ರಂದು ಜಿಲ್ಲೆಗೆ ಬರಲಿದ್ದು, ಏ.24ಕ್ಕೆ ಬೆಳಿಗ್ಗೆ 9:30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಥಯಾತ್ರೆಗೆ ಪೂಜೆ ಸಲ್ಲಿಸಲಾಗುವುದು ಎಂದು ತಿಳಿಸಿದರು.


ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಗಿರೀಶ ಬದೋಲೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಚಂದ್ರಕಾAತ ಪೂಜಾರಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಮುಖಂಡರಾದ ಶಿವಶರಣಪ್ಪ ವಾಲಿ, ವೈಜಿನಾಥ ಕಂಠಾಣೆ, ಬಾಬು ವಾಲಿ, ಬಸವರಾಜ ಉಳ್ಳ, ರಾಜೇಂದ್ರ ಗಂದಗೆ, ಸುರೇಶ್ ಸ್ವಾಮಿ, ಸಂಜು ಕುಮಾರ್ ಪಾಟೀಲ್, ವಿಜಯಕುಮಾರ ಪಾಟೀಲ, ಸೋಮಶೇಖರ ಅಮಲಾಪೂರೆ, ಮಾರುತಿ ಬೌದ್ಧೆ, ವಿಜಯಕುಮಾರ ಸೊನಾರೆ ಸೇರಿದಂತೆ ಸಮಾಜದ ವಿವಿಧ ಮುಖಂಡರು ಉಪಸ್ಥಿತರಿದ್ದರು.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

5 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

5 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

6 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

6 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

6 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

7 hours ago