ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ರೆ 7 ವರ್ಷ ಜೈಲು, 10 ಲಕ್ಷ ದಂಡ.
Social Media’ದಲ್ಲಿ ಸುಳ್ಳು ಸುದ್ದಿ ಹರಡುವವರಿಗೆ ರಾಜ್ಯ ಸರಕಾರ ಗರಿಷ್ಠ ಏಳು ವರ್ಷ ಜೈಲು, 10 ಲಕ್ಷ ರೂ. ದಂಡ ವಿಧಿಸುವ ಮಸೂದೆಯು ಸಚಿವ ಸಂಪುಟದಲ್ಲಿ ಮುಂದೆ ಮಂಡನೆಯಾಗಿದೆ.
ಸುಳ್ಳು ಸುದ್ದಿ ಹಬ್ಬಿಸಿದ್ರೆ 7 ವರ್ಷ ಜೈಲು, 10 ಲಕ್ಷ ದಂಡ
ಗುರುವಾರ ನಡೆದ ಸಚಿವ ಸಂಪುಟದಲ್ಲಿ “ಕರ್ನಾಟಕ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿ ನಿಷೇಧ ಮಸೂದೆ’ ಮಂಡನೆಯಾಗಿದ್ದು, ಒಬ್ಬರ ಹೇಳಿಕೆಯನ್ನು ತಪ್ಪಾಗಿ ಉಲ್ಲೇಖೀಸುವುದು, ತಿರುಚುವುದು ಅಥವಾ ಒಬ್ಬರ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡುವುದು, ಆಡಿಯೋ ಅಥವಾ ವೀಡಿಯೋವನ್ನು ಸತ್ಯ ಅಥವಾ ಸಂದರ್ಭಕ್ಕೆ ಚ್ಯುತಿ ಬರುವ ಹಾಗೆ ಎಡಿಟ್ ಮಾಡುವುದು ಅಥವಾ ಸಂಪೂರ್ಣವಾಗಿ ಕಪೋಲ ಕಲ್ಪಿತ ಮಾಹಿತಿಯನ್ನು ಹಂಚಿಕೊಳ್ಳುವುದು ಈ ಕರಡು ಮಸೂದೆಯ ಪ್ರಕಾರ ಸುಳ್ಳು ಸುದ್ದಿಯ ವ್ಯಾಪ್ತಿಗೆ ಬರಲಿದೆ.
ಈ ಮಸೂದೆ ಪ್ರಕಾರ ಸಾರ್ವಜನಿಕ ಆರೋಗ್ಯ, ಸಾರ್ವಜನಿಕ ಸುರಕ್ಷೆ, ಸಾರ್ವಜನಿಕ ಶಾಂತಿ ಮತ್ತು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಧಕ್ಕೆ ತರುವ ಸುದ್ದಿಯನ್ನು ರಾಜ್ಯದ ವ್ಯಕ್ತಿಯೊಂದಿಗೆ ಹಂಚಿಕೆ ಮಾಡಿದರೆ 2-5 ವರ್ಷಗಳ ಜೈಲು ಶಿಕ್ಷೆಯಾಗಲಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವರ ಅಧ್ಯಕ್ಷತೆಯಲ್ಲಿ ಆರು ಮಂದಿ ಸದಸ್ಯರನ್ನು ಒಳಗೊಂಡ ಸಾಮಾಜಿಕ ಮಾಧ್ಯಮ ಸುಳ್ಳು ಸುದ್ದಿ ನಿಯಂತ್ರಣ ಪ್ರಾಧಿಕಾರ ರಚನೆಯಾಗಲಿದೆ. ಸುಳ್ಳು ಸುದ್ದಿ ಪ್ರಕರಣಗಳ ಶೀಘ್ರ ವಿಲೇವಾರಿಗೆ ವಿಶೇಷ ನ್ಯಾಯಾಲಯಗಳನ್ನು ರಚಿಸುವ ಪ್ರಸ್ತಾವ ಕರಡು ಮಸೂದೆಯಲ್ಲಿದೆ.
ಮಹಿಳಾ ವಿರೋಧಿ, ಸನಾತನ ಚಿಹ್ನೆ ಮತ್ತು ನಂಬಿಕೆಗಳ ಬಗ್ಗೆ ಅಗೌರವ ತರುವ ವಿಷಯಗಳನ್ನು ನಿಷೇಧಿಸುವ ಬಗ್ಗೆಯೂ ಕರಡು ಮಸೂದೆಯಲ್ಲಿ ಪ್ರಸ್ತಾವವಿದೆ ಎಂದು ತಿಳಿದುಬಂದಿದೆ. ವಿಜ್ಞಾನ, ಇತಿಹಾಸ, ಧರ್ಮ, ತತ್ವಶಾಸ್ತ್ರ ಮತ್ತು ಸಾಹಿತ್ಯದ ಬಗ್ಗೆ ಅಧಿಕೃತ ಸಂಶೋಧನೆಯ ಆಧಾರಿತ ಮಾಹಿತಿ, ದತ್ತಾಂಶ ಹಂಚಿಕೆಗೆ ಅವಕಾಶ ನೀಡಲಾಗುತ್ತದೆ.
ಇವೆಲ್ಲ ಸುಳ್ಳು ಸುದ್ದಿ
-ಒಬ್ಬರ ಹೇಳಿಕೆಯನ್ನು ತಪ್ಪಾಗಿ ಉಲ್ಲೇಖಿಸುವುದು, ತಿರುಚುವುದು
– ಒಬ್ಬರ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡುವುದು
-ಆಡಿಯೋ, ವೀಡಿಯೋವನ್ನು ಸತ್ಯ ಅಥವಾ ಸಂದರ್ಭಕ್ಕೆ ಚ್ಯುತಿ ಬರುವಂತೆ ತಿರುಚುವುದು
– ಸಂಪೂರ್ಣವಾಗಿ ಕಪೋಲ ಕಲ್ಪಿತ ಮಾಹಿತಿಯನ್ನು ಹಂಚಿಕೊಳ್ಳುವುದು.
ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ ಮುಂಜಾಗ್ರತಾ ಕ್ರಮವಾಗಿ…
ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…
ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…
ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್ ಪರಿಶೀಲಿಸಬೇಕು'…
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…