ಸಾರ್ವಜನಿಕರಿಗೆ ಕೇಂದ್ರ ಪುರಸ್ಕೃತ ಯೋಜನೆಗಳು ಸಕಾಲದಲ್ಲಿ ತಲುಪುವಂತಾಗಬೇಕು-ಸಂಸದ ಸಾಗರ ಈಶ್ವರ ಖಂಡ್ರೆ


ಬೀದರ.17.ಜನವರಿ.25:- ವಿವಿಧ ಇಲಾಖೆಗಳಿಂದ ನಡೆಯುತ್ತಿರುವ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಸಕಾಲದಲ್ಲಿ ಸಾರ್ವಜನಿಕರಿಗೆ ತಲುಪುವಂತೆ ಮಾಡಬೇಕೆಂದು ಬೀದರ ಲೋಕಸಭಾ ಸಂಸದರಾದ ಸಾಗರ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದರು.


ಅವರು ಗುರುವಾರದಂದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ರೈಲ್ವೆ ಇಲಾಖೆಯ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳು ಆಮೆ ಗತಿಯಿಂದ ಸಾಗುತ್ತಿರುವ ಕಾಮಗಾರಿಗಳು ವೇಗದಿಂದ ಮುಕ್ತಾಯಗೊಳಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಡಬೇಕು.

ಹಾಗೂ ಜಿಲ್ಲೆಯಲ್ಲಿ ರೈಲ್ವೆ ಇಲಾಖೆ ವತಿಯಿಂದ ಅಂಡರ ಬ್ರಿಜ್ ನಿರ್ಮಿಸಿದ್ದು, ಇದು ಮಳೆಗಾಲ ಸಮಯದಲ್ಲಿ ನೀರು ತುಂಬಿ ಸಾರ್ವಜನಿಕರ ಹಾಗೂ ರೈತರ ಓಡಾಟಕ್ಕೆ ಆಡಚಣೆ ಉಂಟಾಗುತ್ತಿರುವುದು ಗಮನಕ್ಕೆ ಬಂದಿರುವುದರಿAದ ಕೂಡಲೇ ಅದನ್ನು ಪರಿಶೀಲಿಸಿ ಸರಿಪಡಿಸಬೇಕು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಎನ್.ಎಚ್.ಎಂ. ಯೋಜನೆಯಡಿ ಬಂದಿರುವ ಯಂತ್ರೋಪಕರಣಗಳಿದ್ದು ಸರಿಯಾಗಿ ಆಪರೇಟ ಮಾಡಲು ಬರದ ಅಧಿಕಾರಿಗಳನ್ನು ತರಬೇತಿ ನೀಡಬೇಕು. ಕೆಲವೊಂದು ತಾಲ್ಲೂಕುಗಳಲ್ಲಿ ಮಷಿನ್‌ಗಳಿದ್ದು ಸಿಬ್ಬಂದಿಗಳಿಗೆ ಆಪರೇಟ ಮಾಡಲು ಬರುತ್ತಿಲ್ಲ. ಕೂಡಲೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು.


ಕೃಷಿ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ರೈತರಿಗೆ ವ್ಯಾಪರ ಪ್ರಚಾರ ನೀಡಬೇಕು ಹಾಗೂ ಹೊಸದಾಗಿ ಬೊರವೆಲ್ ಕೊರೆಸಿದ ರೈತರಿಗೆ 25 ಸಾವಿರ ಸಹಾಯಧನ ಕುರಿತು ವ್ಯಾಪಕ ಪ್ರಚಾರ ನೀಡಬೇಕು, ರಾಷ್ಟಿçÃಯ ಕೃಷಿ ಯೋಜನೆಗಳ ಕುರಿತು ಹಾಗೂ ತೋಟಗಾರಿಕೆ ಮಿಷನ್ ಯೋಜನೆಗಳ ಲಾಭ ರೈತರು ಪಡೆಯುವಂತಾಗಬೇಕು. ತೋಟಗಾರಿಕೆ ಇಲಾಖೆ ವತಿಯಿಂದ ಪಾಲಿಹೌಸ ನಿರ್ಮಾಣ, ಕೃಷಿ ಹೊಂಡಾ, ಕೃಷಿ ಸಿಂಚಾಯಿ ಯೋಜನೆ, ನವೀನ ಹೊಸ ಯಂತ್ರೋಪಕರಣ ಕುರಿತು ರೈತರಿಗೆ ಹೆಚ್ಚಿನ ಮಾಹಿತಿ ನೀಡಬೇಕು.

ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಮನೆ-ಮನೆಗೆ ಶುದ್ಧ ಕುಡಿಯುವ ನೀರು ತಲುಪುವಂತಾಗಬೇಕು, ಕೆಲವೊಂದು ಕಡೆ ಕಾಮಗಾರಿಗಳು ಮುಕ್ತಾಯವಾಗಿದ್ದರು ಕೂಡ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲವೆಂದರು. ಬಿ.ಎಸ್.ಎನ್.ಎಲ್. ವತಿಯಿಂದ ಜಿಲ್ಲೆಯಲ್ಲಿರುವ 180 ಗ್ರಾಮ ಪಂಚಾಯತಗಳಿಗೆ ದೂರವಾಣಿ ಹಾಗೂ ಇಂಟರನೆಟ್ ಸೇವೆಗಳ ಸಂಪರ್ಕ ಕಲ್ಪಿಸಲು ಸೂಚಿಸಲಾಗಿತ್ತು ಆದರೆ 107 ಗ್ರಾಮ ಪಂಚಾಯತಗಳಿಗೆ ಮಾತ್ರ ಸಂಪರ್ಕ ನೀಡಲಾಗಿದೆ.

ಇನ್ನು ಬಾಕಿ ಉಳಿದ 73 ಗ್ರಾಮ ಪಂಚಾಯತಗಳಿಗೆ ಆದಷ್ಟು ಬೇಗನೆ ದೂರವಾಣಿ ಹಾಗೂ ಇಂಟರನೆಟ್ ಸೇವೆಗಳ ಸಂಪರ್ಕ ಕಲ್ಪಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.


ರೈತರ ವಿದ್ಯುತ ಪರಿವರ್ತಕಗಳು ಸುಟ್ಟು ಹೋಗುತ್ತಿರುವ ಕುರಿತು ಅನೇಕ ದೂರುಗಳು ಬರುತ್ತಿರುವುದರಿಂದ ಸಕಾಲದಲ್ಲಿ ಜೇಸ್ಕಾಂ ಅಧಿಕಾರಿಗಳು ಕ್ರಮವಹಿಸಬೇಕು.

ಪಶು ಸಂಗೋಪನಾ ಇಲಾಖೆ ವತಿಯಿಂದ ಜಾನುವಾರುಗಳಿಗೆ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಬೇಕು ಎಂದರು. ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರಾಷ್ಟಿçÃಯ ಹೆದ್ದಾರಿ ಇಲಾಖೆಗಳು ಸೇರಿದಂತೆ ಆಳಂದ, ಚಿಂಚೋಳಿ ತಾಲ್ಲೂಕುಗಳ ಸೇರಿದಂತೆ ಇನ್ನಿತರ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.


ಸಭೆಯಲ್ಲಿ ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅವರು ಮಾತನಾಡಿ, ಬೀದರ ದಕ್ಷಿಣದ ಗುನ್ನಳ್ಳ್ಳಿ ಗ್ರಾಮದ ರೈಲ್ವೆ ಅಂಡರಪಾಸ್ ಕಾಮಗಾರಿ ಸರಿಯಾಗಿ ಮಾಡಿರುವುದಿಲ್ಲ ಕೂಡಲೆ ಪರಿಶೀಲನೆ ಮಾಡಿ ಸರಿಪಡಿಸಲು ಕ್ರಮವಹಿಸಬೇಕು. ಹಾಗೂ ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆ ಜಿಲ್ಲೆಯಲ್ಲಿ ಬೇರೆ ಬೇರೆ ತಳಿಯ ಹಣ್ಣುಗಳು ಬೆಳೆಯಲು ಪ್ರೋತ್ಸಾಹಿಸಬೇಕೆಂದು ಸಭೆಗೆ ತಿಳಿಸಿದರು.


ಇದೇ ಸಂದರ್ಭದಲ್ಲಿ ನೆಲ-ಜಲ್ ಮಿತ್ರ ಯೋಜನೆ ವತಿಯಿಂದ ವಿವಿಧ ಗ್ರಾಮ ಪಂಚಾಯತಗಳಿಗೆ ವಾಟರ ಟೆಸ್ಟಿಂಗ್ ಕಿಟ್ ಹಾಗೂ 60 ಗ್ರಾಮ ಪಂಚಾಯತಳಿಗೆ ಅಂಧ ಮಕ್ಕಳಿಗೆ ಬ್ರೆöÊಲ್‌ಲಿಪಿ ಆಟೋಪಕರಣಗಳು ನೀಡಿದರು. ಹಾಗೂ ನರೇಗಾ ಯೋಜನೆಗಳ ಮಾಹಿತಿಯುಳ್ಳ ಕರಪತ್ರ ಹಾಗೂ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.


ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ದಿಶಾ ಸಮಿತಿ ಸದಸ್ಯರಾದ ಶಿವಯ್ಯ ಸ್ವಾಮಿ, ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮುತ್ತಣ್ಣ ಕರಿಗಾರ, ಸಿ.ಪಿ.ಓ. ಕಿಶೋರ ದುಬೆ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಬೀದರ, ಚಿಂಚೋಳಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

prajaprabhat

Recent Posts

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

11 minutes ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

27 minutes ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

37 minutes ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

2 hours ago

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

3 hours ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

3 hours ago