|

ಸಾರ್ವಜನಿಕರು ಅಭಿಯಾನದ ಸದುಪಯೋಗ ಪಡೆದುಕೊಳ್ಳಿ-ನ್ಯಾ.ಪ್ರಕಾಶ ಅರ್ಜುನ ಬನಸೋಡೆ

ಬೀದರ.29.ಡಿಸೆಂಬರ್.25:- ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ ಅವರ ಸಂಯುಕ್ತಾಶ್ರಯದಲ್ಲಿ ದಿನಾಂಕ: 02-01-2026 ರಿಂದ 90 ದಿನಗಳ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದೆ.

ಜಿಲ್ಲೆಯ ಎಲ್ಲಾ ನ್ಯಾಯಲಯಗಳಲ್ಲಿ ಅಭಿಯಾನವು ಆರಂಭವಾಗಲಿದ್ದು ಅದರಲ್ಲಿ ಬಾಕಿ ಇರುವ ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಲಯದ ಪ್ರಕರಣಗಳು ಮೋಟರ ಅಪಘಾತ, ಚೆಕ್ ಅಮಾನ್ಯ ಪ್ರಕರಣಗಳು ವಾಣಿಜ್ಯ, ಸೇವಾ ಪ್ರಕರಣಗಳು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು, ಭೂ ಸ್ವಾಧಿನ ಪ್ರಕರಣಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯಾರ್ಥಪಡಿಸಲಾಗುತ್ತಿದೆ.


ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇಚ್ಚಿಸಿದ್ದಲ್ಲಿ ನ್ಯಾಯಾಲಯಗಳಿಂದ ಪ್ರಕರಣಗಳನ್ನು ವರ್ಗಾಯಿಸಿಕೊಂಡು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಮಧ್ಯಸ್ಥಿಕೆ ಕೇಂದ್ರಗಳಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು. ತಮ್ಮ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ ಅಥವಾ ಎಲ್ಲಾ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು. ಹಾಗೂ 90 ದಿನಗಳ ಮಧ್ಯಸ್ಥಿಕೆ ಅಭಿಯಾನದ ಸದುಪಯೋಗ ಪಡೆದುಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೋಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *