03/08/2025 7:13 PM

Translate Language

Home » ಲೈವ್ ನ್ಯೂಸ್ » ಸಾರ್ವಜನಿಕರ ಪ್ರಾಯಾಣಕ್ಕೆ ತೊಂದರೆಯಾಗದಿರಲಿ- ಜಿಲ್ಲಾಧಿಕಾರಿ ಸುರೇಶ ಇಟ್ನಾಳ

ಸಾರ್ವಜನಿಕರ ಪ್ರಾಯಾಣಕ್ಕೆ ತೊಂದರೆಯಾಗದಿರಲಿ- ಜಿಲ್ಲಾಧಿಕಾರಿ ಸುರೇಶ ಇಟ್ನಾಳ

Facebook
X
WhatsApp
Telegram

ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದರು.

ಅವರು ಶನಿವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಾರಿಗೆ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗದ ಅಧಿಕಾರಿಗಳು ಮತ್ತು ಖಾಸಗಿ ವಾಹನ ಚಾಲಕರ ಅಸೋಶಿಯೆಷನ್ ಅವರೊಂದಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರಕ್ಕೆ ಹೋಗುವುದಾಗಿ ಹೇಳಿದ್ದು, ಇದಕ್ಕಾಗಿ ಕೆಲವು ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವುದಾಗಿ ಸರ್ಕಾರದ ಕಾರ್ಯದರ್ಶಿಗಳು ನಿರ್ದೇಶನ ನೀಡಿದ್ದಾರೆ.

ಪ್ರತಿ ದಿನ ಕೊಪ್ಪಳ ಜಿಲ್ಲೆಯಲ್ಲಿ 1400ಕ್ಕೂ ಟ್ರಿಪ್‌ಗಳಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಸುಮಾರು 320 ಬಸ್‌ಗಳ ಓಡಾಟವಿದ್ದು, ಮುಷ್ಕರದಿಂದಾಗಿ ಸಾರ್ವಜನಿಕರ ಪ್ರಯಾಣದಲ್ಲಿ ವ್ಯತ್ಯಯ ಉಂಟಾಗಬಹುದು. ಇದರ ನಿರ್ವಹಣೆಗಾಗಿ ಸೂಕ್ತ ಸಿದ್ಧತೆಗಳನ್ನು ಕೈಗೊಳ್ಳಬೇಕು. ಕ.ಕ.ಸಾ.ನಿ ಕೊಪ್ಪಳ ವಿಭಾಗದಲ್ಲಿರುವ ಹೊರಗುತ್ತಿಗೆ ನೌಕರರ ಪಟ್ಟಿಯನ್ನು ಸಿದ್ದಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು.

ಮುಷ್ಕರ ಸಂದರ್ಭದಲ್ಲಿ ಹೊರಗುತ್ತಿಗೆ ಸಾರಿಗೆ ನೌಕರರಿಗೆ ಯಾವುದೇ ರೀತಿಯ ರಜೆ ನೀಡುವಂತಿಲ್ಲ. ಅವಶ್ಯವಿದ್ದಲ್ಲಿ ಜಿಲ್ಲೆಯ ಕಾರ್ಖಾನೆಗಳ ಬಸ್‌ಗಳ ಬಳಕೆಗೆ ಕ್ರಮ ವಹಿಸಿ. ಪ್ರಯಾಣಿಕರಿಗಾಗಿ ಎಲ್ಲಾ ಬಸ್ ನಿಲ್ದಾಣಗಳಲ್ಲಿ ವಿಶೇಷ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಬೇಕು ಮತ್ತು ಆರ್.ಟಿ.ಓ ಕಛೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ಆರಂಭಿಸುವoತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಹಿಂದೆಯೂ ಕೆ.ಎಸ್.ಆರ್.ಟಿ ನೌಕರರ ಮುಷ್ಕರದ ಸಂದರ್ಭದಲ್ಲಿ ಖಾಸಗಿ ಮ್ಯಾಸ್ಕಿ ಕ್ಯಾಬ್, ಟಂಟಂಗಳು, ಆಟೋಗಳು ಮತ್ತು ಖಾಸಗಿ ಬಸ್‌ಗಳನ್ನು ಬಳಕೆ ಮಾಡಿಕೊಂಡು ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿತ್ತು. ಅದೇ ರೀತಿಯ ವ್ಯವಸ್ಥೆಗಳನ್ನು ಕೈಗೊಳ್ಳಲು ಸಾರಿಗೆ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು. ಇದಕ್ಕಾಗಿ ಜಿಲ್ಲೆಯ ಖಾಸಗಿ ವಾಹನ ಚಾಲಕರ ಅಸೋಶಿಯೆಷನ್‌ವರು ಸಹಕಾರ ನೀಡಬೇಕು. ಈ ಪರಿಸ್ಥಿತಿಯನ್ನು ಖಾಸಗಿ ವಾಹನ ಚಾಲಕರು ದುರುಪಯೋಗ ಪಡೆಸಿಕೊಂಡು ನಿಯಮಕ್ಕೂ ಮೀರಿ ಹೆಚ್ಚಿನ ಪ್ರಯಾಣ ದರ ಪಡೆಯುವುದು ಮತ್ತು ಪ್ರಯಾಣಿಕರೊಂದಿಗೆ ಅಸಭ್ಯವರ್ತನೆ ಮಾಡುವುದು ಕಂಡುಬoದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಎಲ್ಲರೂ ಸೇರಿ ಈ ಪರಿಸ್ಥಿತಿಯನ್ನು ನಿಭಾಯಿಸಬೇಕು. ಕೊಪ್ಪಳ ಜಿಲ್ಲೆಯಲ್ಲಿ ಯವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಹೇಳಿದರು.

ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಮಾತನಾಡಿ, ಸಾರಿಗೆ ನೌಕರರ ಮುಷ್ಕರ ಸಂದರ್ಭದಲ್ಲಿ ಸಾರ್ವಜನಿಕರ ಪ್ರಯಾಣಕ್ಕೆ ಯಾವುದೇ ತೊಂದರೆಯಾಗಬಾರದು. ಇದಕ್ಕಾಗಿ ಸ್ಥಳೀಯ ಖಾಸಗಿ ವಾಹನಗಳ ಚಾಲಕರು ಸಹಕಾರ ನೀಡಬೇಕು. ಪ್ರಯಾಣಕ್ಕೆ ನಿಗದಿಯಾಗಿರುವ ಸಮಾನ್ಯ ಮೊತ್ತಕ್ಕಿಂತ ಹೆಚ್ಚಿನ ಮೊತ್ತವನ್ನು ಸ್ವೀಕರಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಎಲ್ಲಾ ಬಸ್‌ನಿಲ್ದಾಣ ಮತ್ತು ಡಿಪೋಗಳಲ್ಲಿ ಸೂಕ್ತ ಪೊಲೀಸ್ ಭದ್ರತೆ ಒದಗಿಸಲಾಗುವುದು. ಅಗತ್ಯ ಸಂದರ್ಭದಲ್ಲಿ ಪೊಲೀಸ್ ಸಹಾಯಕ್ಕಾಗಿ ಸಾರ್ವಜನಿಕರು 112 ಗೆ ಕರೆ ಮಾಡಬಹುದಾಗಿದೆ ಎಂದರು.

ಸಭೆಯಲ್ಲಿ ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಹಿರೇಮಠ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಆರ್.ಬಿ. ಜಾಧವ್, ಕೊಪ್ಪಳ ವಿಭಾಗೀಯ ಸಂಚಾರ ಅಧಿಕಾರಿ ಪರಮೇಶ್ವರಪ್ಪ, ಕಾರ್ಮಿಕ ಕಲ್ಯಾಣಾಧಿಕಾರಿ ಸತ್ಯನಾರಾಣ ಸೇರಿದಂತೆ ಸಾರಿಗೆ ಇಲಾಖೆಯ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು, ಖಾಸಗಿ ವಾಹನಗಳ ಅಸೋಶಿಯೆಷನ್‌ನವರು ಹಾಗೂ ವಾಹನ ಚಾಲಕರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!