23/08/2025 1:31 AM

Translate Language

Home » ಲೈವ್ ನ್ಯೂಸ್ » ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ
ಆಗಸ್ಟ್ 20ರಿಂದ 22ರವರೆಗೆ ಪುಸ್ತಕಗಳ ಪ್ರದರ್ಶನ

ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ
ಆಗಸ್ಟ್ 20ರಿಂದ 22ರವರೆಗೆ ಪುಸ್ತಕಗಳ ಪ್ರದರ್ಶನ

Facebook
X
WhatsApp
Telegram

ರಾಯಚೂರು.18.ಆಗಸ್ಟ್.25: ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ 2022ರಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಬೆಂಗಳೂರಿನ ಡಾ.ವಿಷ್ಣುವರ್ಧನ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ, ಎಂ.ಸಿ.ಬಡಾವಣೆ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹತ್ತಿರ ವಿಜಯನಗರ ಬೆಂಗಳೂರು-560040 ನಲ್ಲಿ ಆಗಸ್ಟ್ 20ರಿಂದ 22ರವರೆಗೆ ಏರ್ಪಡಿಸಲಾಗಿದೆ.

ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳನ್ನು ಆಯ್ಕೆ ಸಮಿತಿಯು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಇಲಾಖೆಯ ಜಾಲತಾಣ ವಿಳಾಸ: dpl.karnataka.gov.in ನಲ್ಲಿ ಪ್ರಕಟಿಸಲಾಗುತ್ತಿದೆ.

ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 30ರೊಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ:ಅಂಬೇಡ್ಕರ್ ವೀದಿ, ಬೆಂಗಳೂರು-560001.

ಇಲ್ಲಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಬಹುದಾಗಿದೆ. ಅವದಿ ಮುಗಿದ ನಂತರ ಬಂದ ಮನವಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ರಾಯಚೂರು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳಾದ ನಿರ್ಮಲಾ ಹೆಚ್.ಹೊಸೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD