08/06/2025 6:32 PM

Translate Language

Home » ಲೈವ್ ನ್ಯೂಸ್ » ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ,ಗುಟ್ಕಾ ಉಗುಳಿದರೆ 1000 ರೂ. ದಂಡ,ರಾಜ್ಯ ಸರ್ಕಾರ ಆದೇಶ.!

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ,ಗುಟ್ಕಾ ಉಗುಳಿದರೆ 1000 ರೂ. ದಂಡ,ರಾಜ್ಯ ಸರ್ಕಾರ ಆದೇಶ.!

Facebook
X
WhatsApp
Telegram

ಬೆಂಗಳೂರು.31.ಮೇ.25:- ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ 1 ಸಾವಿರ ರೂ.

ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಸರಬರಾಜು ವಿತರಣೆ ವಿನಿಮಯ -ಕರ್ನಾಟಕ(ತಿದ್ದುಪಡಿ) ಮಸೂದೆ 2024ಕ್ಕೆ ಮೇ 23 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 (2023ರ ಕರ್ನಾಟಕ ಅಧಿನಿಯಮ ಸಂಖ್ಯೆ:13)ರ ಪ್ರಕರಣ 6ರ ಅಡಿಯಲ್ಲಿ ಅಧಿಕೃತಗೊಳಿಸಿದ the Cigarettes and Other Tobacco Products (Prohibition of Advertisement and Regulation of Trade and Commerce, Production, Supply and Distribution) Act, 2024 (Karnataka Act No 41 of 2025) ಕನ್ನಡ ಭಾಷಾಂತರವನ್ನು ಅಧಿಕೃತ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IVA) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,

2025ರ ಕರ್ನಾಟಕ ಅಧಿನಿಯಮ ಸಂಖ್ಯೆ:41

(2025ರ ಮೇ ತಿಂಗಳ 30ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ.

ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2024

(2025ರ ಮೇ ತಿಂಗಳ 23ನೇ ದಿನಾಂಕದಂದು ರಾಷ್ಟ್ರಾಧ್ಯಕ್ಷರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಕರ್ನಾಟಕ ರಾಜ್ಯಕ್ಕೆ ಅನ್ವಯವಾಗುವಂತೆ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) ಅಧಿನಿಯಮ, 2003 (2003ರ ಕೇಂದ್ರ ಅಧಿನಿಯಮ 34)ನ್ನು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ರಾಜ್ಯಕ್ಕೆ ಅನ್ವಯವಾಗುವಂತೆ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) ಅಧಿನಿಯಮ, 2003 (2003ರ ಕೇಂದ್ರ ಅಧಿನಿಯಮ 34)ನ್ನು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೈದನೇ ವರ್ಷದಲ್ಲಿ ಕರ್ನಾಟಕ ರಾಜ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಸಿಗರೇಟುಗಳ ಮತ್ತು
ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2024 ಎಂದು ಕರೆಯತಕ್ಕದ್ದು.

(2) ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!