ಬೀದರ್ : ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ವಾಣಿಜ್ಯ ಮತ್ತು ನಿರ್ವಹಣಾ ನಿಕಾಯ ಡೀನರು ಹಾಗೂ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಡಾ. ಶರಣಪ್ಪ ಎಸ್. ಮಲಗೊಂಡ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.
ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ-2000ರ ಪ್ರಕರಣ 28(1)(ಡಿ)ರ ಅನ್ವಯ ಜೇಷ್ಠತಾ ಆಧಾರದ ಮೇಲೆ ಮಾನ್ಯ ಕುಲಪತಿಗಳ ಅನುಮೋದನೆಯ ಮೇರೆಗೆ ಈ ನಾಮನಿರ್ದೇಶನ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಡಾ. ಶರಣಪ್ಪ ಎಸ್. ಮಲಗೊಂಡ ಅವರು ಪ್ರಸ್ತುತ ಮನ್ನಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದು, ವಾಣಿಜ್ಯ ಮತ್ತು ನಿರ್ವಹಣಾ ನಿಕಾಯದ ಡೀನರ ಜವಾಬ್ದಾರಿಯನ್ನು ಸಹ ನಿರ್ವಹಿಸುತ್ತಿದ್ದಾರೆ.
ಅವರ ನೇಮಕಾತಿಯು 2026ರ ಜೂನ್ 19ರಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ, ಯಾವುದು ಮೊದಲು ಸಂಭವಿಸುತ್ತದೆಯೋ ಅಲ್ಲಿಯವರೆಗೆ ಅನ್ವಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಈ ಕುರಿತು ಬೀದರ ವಿಶ್ವವಿದ್ಯಾಲಯದ ಕುಲಸಚಿವರು ಅಧಿಕೃತ ಅಧಿಸೂಚನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ಸಿಂಡಿಕೇಟ್ ಸದಸ್ಯರಾಗಿ ಡಾ. ಶರಣಪ್ಪ ಎಸ್. ಮಲಗೊಂಡ ನಾಮ ನಿರ್ದೇಶನ?