Categories: ದೇಶ

ಸಿಎಂ ಸಿದ್ದರಾಮಯ್ಯ ಮಹಿಳೆಯರಿಗೆ 50% ಮೀಸಲಾತಿ 2028ಕೆ ಜಾರಿ

ಬೆಂಗಳೂರು : ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ. 50 ರಷ್ಟು ಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಭಾರತ್ ಜೋಡೋ ಭವನದಲ್ಲಿರುವ ಇಂದಿರಾಗಾಂಧಿ ಅಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಿಳೆಯರಿಗೆ ಮೀಸಲಾತಿಯನ್ನು 2028 ರಲ್ಲಿ ಕೊಡುವುದಾಗಿ ಹೇಳುವ ನರೇಂದ್ರ ಮೋದಿ ಅವರು ಅದನ್ನು ಈಗಲೇ ಮಾಡಬಹುದಿತ್ತು.

ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಹಾಗೂ ಬದ್ಧತೆ ಅಗತ್ಯವಿದೆ. ಸಂಸತ್ತಿನಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಲು ನಮ್ಮ ತಕರಾರೇನಿಲ್ಲ, ನಾವೇ ಇದನ್ನು ಜಾರಿಗೆ ತರಬೇಕು ಎಂದಿದ್ದೆವು. ಜಿಲ್ಲಾ ಪಂಚಾಯತಿ, ಪಟ್ಟಣ ಪಂಚಾಯತಿಗಳಲ್ಲಿ 50% ಮೀಸಲಾತಿ ಇದೆ. ಮಹಿಳೆಯರಿಗೆ ಸಮಾನ ಅವಕಾಶಗಳು ದೊರಕಬೇಕು. ಸಂಸತ್ತು, ವಿಧಾನಸಭೆಯಲ್ಲಿಯೂ ಮೀಸಲಾತಿ ನೀಡಲು ನಮ್ಮ ತಕರಾರು ಇಲ್ಲ ಎಂದರು.

ದೇಶದ ಐಕ್ಯತೆಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಇಂದಿರಾ ಗಾಂಧಿಯವರ ಬದುಕು ನಮ್ಮೆಲ್ಲರಿಗೂ ಆದರ್ಶ. ಅವರು ಕೆಚ್ಚೆದೆಯಿಂದ ದೇಶವನ್ನು ಆಳಿದರು ಎನ್ನುವುದನ್ನು ಮರೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಸದಾ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ರೈತರ ಪರವಾಗಿರುವ ಪಕ್ಷ. ಸಂವಿಧಾನದಲ್ಲಿ ಅಪಾರವಾದ ನಂಬಿಕೆ ಇಟ್ಟುಕೊಂಡು ಸಂವಿಧಾನದ ರೀತ್ಯಾ ಕೆಲಸ ಮಾಡುತ್ತಿರುವ ಪಕ್ಷ. ಯಾರೇ ಅಧಿಕಾರಕ್ಕೆ ಬಂದರೂ ಸಂವಿಧಾನದ ರೀತ್ಯಾ ಕೆಲಸ ಮಾಡಬೇಕು. ಅದರ ಧ್ಯೇಯೋದ್ದೇಶಗಳನ್ನು ಜಾರಿ ಮಾಡಬೇಕು. ಪ್ರತಿಯೊಬ್ಬರೂ ಇದನ್ನು ಪಾಲನೆ ಮಾಡಬೇಕಾದದ್ದು ಕರ್ತವ್ಯ.

ಇಂದಿರಾ ಗಾಂಧಿಯವರು ಬಡವರ ಪರವಾಗಿ ಬಹಳಷ್ಟು ಕೆಲಸಗಳನ್ನು ಮಾಡಿದ್ದಾರೆ. ಭೂ ಸುಧಾರಣಾ ಕಾಯ್ದೆ, ಗರೀಬಿ ಹಟಾವೋ ಕಾರ್ಯಕ್ರಮ, ಬ್ಯಾಂಕುಗಳ ರಾಷ್ಟ್ರೀಕರಣ ಮುಂತಾದವುಗಳ ಫಲ ಬಡವರಿಗೆ ದೊರಕಬೇಕು. ಬಡವರು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿಯನ್ನು ಪಡೆದುಕೊಳ್ಳಬೇಕೆಂಬ ಉದ್ದೇಶ ಅವರಿಗೆ ಇತ್ತು. ಬ್ಯಾಂಕುಗಳು ರಾಷ್ಟ್ರೀಕರಣವಾಗುವ ಮೊದಲು ಬಡವರು ಬ್ಯಾಂಕುಗಳ ಮೆಟ್ಟಿಲುಗಳನ್ನು ಹತ್ತಲು ಸಾಧ್ಯವಾಗುತ್ತಿರಲಿಲ್ಲ. ಇಂದಿರಾ ಗಾಂಧಿಯವರು ರಾಷ್ಟ್ರೀಕರಣ ಮಾಡಿದ ನಂತರ ಬ್ಯಾಂಕುಗಳ ಬಾಗಿಲು ಬಡವರಿಗೂ ತೆರೆಯಿತು. ಇದು ಕಾಂಗ್ರೆಸ್ ಪಕ್ಷದ ಸಾಧನೆ ಎಂದು ತಿಳಿಸಿದರು.

ಈಗ ಅಧಿಕಾರದಲ್ಲಿರುವ ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ತದ್ವಿರುದ್ಧವಾಗಿದೆ. ಹೀಗಾಗಿ ಅವರು ಬಡವರ ಪರವಾಗಿ, ಸಾಮಾಜಿಕ ನ್ಯಾಯದ ಪರವಾಗಿ ಇರಲು ಸಾಧ್ಯವೇ ಇಲ್ಲ. ಬಿಜೆಪಿ ಸಂವಿಧಾನ ಬದಲಾಗಬೇಕೆಂದು ಬಯಸುವ ಪಕ್ಷ. ನಮಗೆ ಅಧಿಕಾರ ವಿಕೇಂದ್ರೀಕರಣದಲ್ಲಿ ನಂಬಿಕೆಯಿದ್ದರೆ, ಬಿಜೆಪಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ನಂಬಿಕೆ ಇದೆ ಎಂದರು.

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಆರ್ಥಿಕ ಅಧಿಕಾರ ಕೇಂದ್ರೀಕೃತಗೊಳ್ಳುತ್ತಿದೆ. ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಇಲ್ಲದೇ ಹೋಗಿದ್ದರೆ ಈ ದೇಶದಲ್ಲಿ ಅಧಿಕಾರ ವಿಕೇಂದ್ರೀಕರಣ ಆಗಲು ಸಾಧ್ಯವಾಗುತ್ತಿರಲಿಲ್ಲ. ಮಹಾತ್ಮ ಗಾಂಧಿ ದೇಶದಲ್ಲಿ ಗ್ರಾಮ ಸ್ವರಾಜ್ಯವಾಗಬೇಕೆಂದು ಬಯಸಿದ್ದರು. ಮಹಿಳೆಯರಿಗೆ ಮೀಸಲಾಗಿ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ ಎಂದು ಹೇಳಿದರು.

ರಾಜೀವ್ ಗಾಂಧಿಯವರು ಅಧಿಕಾರದಲ್ಲಿದ್ದಾಗ ಸಂವಿಧಾನಕ್ಕೆ ತಿದ್ದುಪಡಿ ತಂದು ಅಧಿಕಾರ ವಿಕೇಂದ್ರೀಕರಣದ ಮೂಲಕ ಪಟ್ಟಣ ಪಂಚಾಯತಿ, ನಗರಸಭೆಗಳಿಗೆ ಮಹಿಳಾ ಮೀಸಲಾತಿ ನೀಡಿದರು. ಇದಾಗದೇ ಹೋಗಿದ್ದರೆ ಮಹಿಳೆಯರಿಗೆ 55% ಮೀಸಲಾತಿ ದೊರೆಯುತ್ತಿರಲಿಲ್ಲ. ರಾಮಾ ಜೋಯಿಸ್ ಎಂಬ ಬಿಜೆಪಿ ಸಂಸದರು ಇದನ್ನು ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯಕ್ಕೆ ಹೋಗಿದ್ದರು.
ಅಧಿಕಾರ ಹಂಚಿಕೆಯಾಗಬೇಕೆಂದಿದ್ದರೆ ಅವರು ನ್ಯಾಯಾಲಯಕ್ಕೆ ಯಾಕೆ ಹೋಗುತ್ತಿದ್ದರು?

prajaprabhat

Share
Published by
prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

3 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

4 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

4 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

5 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

5 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

5 hours ago