ಸುಪ್ರೀಂ ಕೋರ್ಟ್ ನಲ್ಲಿ ವಕೀಲರ ಅಭಿನಂದನೆಗೆ ʼಜೈ ಭೀಮ್ʼಎಂದು ಪ್ರತಿಕ್ರಿಯಿಸಿದ ಸಿಜೆಐ ಬಿ. ಆರ್.ಗವಾಯಿ

ಹೊಸದಿಲ್ಲಿ: ಭಾರತದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದೆ. ಅವರ ಅಧಿಕಾರಾವಧಿಗೆ ಶುಭ ಹಾರೈಸಿದೆ.

ಐತಿಹಾಸಿಕ ಕ್ಷಣವೊಂದರಲ್ಲಿ ನೂತನವಾಗಿ ನೇಮಕಗೊಂಡ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆ‌ರ್. ಗವಾಯಿ ಅವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರು ಸ್ವಾಗತಿಸುತ್ತಿದ್ದಂತೆ ‘ಜೈ ಭೀಮ್’ ಎಂದು ಪ್ರತಿಕ್ರಿಯಿಸಿದರು.

ಪರಿಶಿಷ್ಟ ಜಾತಿ ಹಿನ್ನೆಲೆಯ 2ನೇ ಸಿಜೆಐ ಎಂಬ ಹೆಗ್ಗಳಿಕೆಗೆ ಪಾತ್ರರಾದ ಬಿ.ಆ‌ರ್. ಗವಾಯಿ ಅವರು ಡಾ.ಬಿ.ಆರ್. ಅಂಬೇಡ್ಕ‌ರ್ ಮತ್ತು ದಲಿತ ಹಕ್ಕುಗಳ ಚಳವಳಿಯ ಪರಂಪರೆಯಲ್ಲಿ ಆಳವಾಗಿ ಬೇರೂರಿರುವ ನಮನವನ್ನು ಸಲ್ಲಿಸಿದಾಗ ವಕೀಲರಲ್ಲಿ ಸಂಚಲನ

ನ್ಯಾಯಮೂರ್ತಿ ಗವಾಯಿ ಅವರು ನವೆಂಬರ್ 23, 2025 ರವರೆಗೆ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಬುಲ್ಲೋಜರ್ ನ್ಯಾಯವನ್ನು ಖಂಡಿಸಿದ, ಅಂತಹ ಪದ್ಧತಿಗಳನ್ನು ನಿಗ್ರಹಿಸಲು ಕಠಿಣ ನಿಯಮಗಳನ್ನು ರೂಪಿಸುವುದು ಸೇರಿದಂತೆ ನಿರ್ಣಾಯಕ ಆದೇಶಗಳನ್ನು ಹೊರಡಿಸಿದ ಹಲವಾರು ಪ್ರಮುಖ ಪೀಠಗಳ ಭಾಗವಾಗಿ ನ್ಯಾಯಮೂರ್ತಿ ಗವಾಯಿ ಅವರು ಕಾರ್ಯನಿರ್ವಹಿಸಿದ್ದಾರೆ.

ಕೇಂದ್ರ ಸರಕಾರದಿಂದ 370 ನೇ ವಿಧಿಯನ್ನು ರದ್ದುಗೊಳಿಸಿದ್ದನ್ನು ಎತ್ತಿಹಿಡಿದ ಪೀಠದಲ್ಲಿಯೂ ಗವಾಯಿ ಇದ್ದರು. ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ್ದು ಸೇರಿದಂತೆ ಮಹತ್ವದ ತೀರ್ಪುಗಳನ್ನು ನೀಡಿದ ಸಂವಿಧಾನ ಪೀಠದ ಭಾಗವಾಗಿ ಅವರು ಕೆಲಸ ಮಾಡಿದ್ದಾರೆ

prajaprabhat

Recent Posts

ದೈಹಿಕ ಶಿಕ್ಷಣ ವಿಭಾಗದಲ್ಲಿ ನಕಲಿ ಪಿ.ಎಚ್ ಡಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…

1 hour ago

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

12 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

22 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

1 day ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

1 day ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

1 day ago