ಸೆಪ್ಟೆಂಬರ್ 22ರಿಂದ ಮರು ಜಾತಿಗಣತಿ ನಡೆಸಲು ತೀರ್ಮಾನ: ಕೇವಲ 15 ದಿನಗಳಲ್ಲಿ ಸಮೀಕ್ಷೆ: ಸಿಎಂ ನೇತೃತ್ವದಲ್ಲಿ ಸಭೆಯಲ್ಲಿ ನಿರ್ಧಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತ್ರ‍ಿತ್ವದಲ್ಲಿ ನಡೆದ ಸಭೆಯಲ್ಲಿ ಮತ್ತೆ ರಾಜ್ಯಾದ್ಯಂತ ಸೆಪ್ಟೆಂಬರ್ 22ರಿಂದ ಮರು ಜಾತಿಗಣತಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು.

ಸೆಪ್ಟೆಂಬರ್ 22ರಿಂದ ಮರು ಜಾತಿಗಣತಿ ನಡೆಸಲು ನಿರ್ಧರಿಸಲಾಗಿದ್ದು, ಅಕ್ಟೋಬರ್ 7ರವರೆಗೆ ಜಾತಿಗಣತಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಕೇವಲ 15 ದಿನಗಳಲ್ಲಿ ಜಾತಿಗಣತಿ ಸಮೀಕ್ಷೆ ನಡೆಸಲು ಸೂಚಿಸಲಾಗಿದ್ದು, ಅಕ್ಟೋಬರ್ ತಿಂಗಳ ಒಳಗಾಗಿ ಸಮೀಕ್ಷೆ ವರದಿ ಸಲ್ಲಿಸಲು ಸೂಚಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯ ಹೈಲೈಟ್ಸ್:

ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.


ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು ಎಂದರು.


ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15ದಿನಗಳ ಕಾಲ ಸಮೀಕ್ಷೆ ನಡೆಸುವ ನಿರ್ಧಾರ. ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸೂಚನೆ.


ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಅಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು ಎಂದರು.


ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ದಪಡಿಸಿ manual ಆಗಿ ಈ ಹಿಂದೆ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ. ಈ ಬಾರಿ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು.
ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸೂಚನೆ. ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚಿಸಲು ತಿರ್ಮಾನ.
ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು. ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು ಪಡೆಯಬೇಕು.


ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲ ಅವಶ್ಯಕತೆಯಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಗಳನ್ನು ಸಹ ಬಳಸಿಕೊಳ್ಳಲಾಗುವುದು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

2 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

8 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

8 hours ago

ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ಸ   ಸನ್ಮಾನಿಸಿದರು

ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…

8 hours ago

ಕೇಂದ್ರ ಸಚಿವ ಗಡ್ಕರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…

9 hours ago

ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.

ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…

14 hours ago