ಕೊಪ್ಪಳ.23.ಸೆಪ್ಟೆಂಬರ್.26: “ಕೃಷಿ ಉತ್ಪನ್ನಗಳ ರಫ್ತು: ಪ್ರಸ್ತುತ ಪರಿಸ್ಥಿತಿ ಮತ್ತು ಭವಿಷ್ಯದ ಅವಕಾಶಗಳು” ಎಂಬ ವಿಷಯದ ಕುರಿತು ಒಂದು ದಿನದ ತಾಂತ್ರಿಕ ಕಾರ್ಯಾಗಾರವನ್ನು ಕೊಪ್ಪಳದ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಸೆಪ್ಟೆಂಬರ್ 24ರಂದು ಬೆಳಿಗ್ಗೆ 10:30ಕ್ಕೆ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಾಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿ ತಮ್ಮ ಕೃಷಿ ಉತ್ಪನ್ನಗಳನ್ನು ರಫ್ತು ಮಾಡಲು ಬೇಕಾದ ಅಗತ್ಯ ತಾಂತ್ರಿಕ ಮಾಹಿತಿಗಳನ್ನು ಪಡೆದುಕೊಳ್ಳಬೇಕೆಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





Any questions related to ಸೆ. 24 ರಂದು ಕೊಪ್ಪಳದಲ್ಲಿ ‘ಕೃಷಿ ಉತ್ಪನ್ನಗಳ ರಫ್ತು’ ಕುರಿತು ತಾಂತ್ರಿಕ ಕಾರ್ಯಾಗಾರ?